AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ 2’ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ರಶ್ಮಿಕಾ ಮಂದಣ್ಣ

ಎರಡನೇ ಭಾಗಕ್ಕೆ ‘ಪುಷ್ಪ: ದಿ ರೂಲ್​​’ ಎಂದು ಹೆಸರಿಡಲಾಗಿದೆ. ‘ಪುಷ್ಪ’ ಚಿತ್ರದ ಸೀಕ್ವೆಲ್​ ಇದಾಗಿದೆ. ಡಿಸೆಂಬರ್ ತಿಂಗಳಲ್ಲಿ ಚಿತ್ರ ತೆರೆಕಾಣಿಸಬೇಕು ಎನ್ನುವ ಉದ್ದೇಶವನ್ನು ಚಿತ್ರತಂಡ ಇಟ್ಟುಕೊಂಡಿದೆ.

Rashmika Mandanna: ‘ಪುಷ್ಪ 2’ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ರಶ್ಮಿಕಾ ಮಂದಣ್ಣ
ಅಲ್ಲು ಅರ್ಜುನ್​-ರಶ್ಮಿಕಾ
TV9 Web
| Edited By: |

Updated on:Jan 19, 2022 | 8:43 AM

Share

ಅಲ್ಲು ಅರ್ಜುನ್​ (Allu Arjun) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ‘ಪುಷ್ಪ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದೆ. ಈ ಸಿನಿಮಾದ ಎರಡನೇ ಪಾರ್ಟ್​ ಬಗ್ಗೆ ಪ್ರೇಕ್ಷಕರಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ರಕ್ತ ಚಂದನದ ಜಗತ್ತಿಗೆ ಓರ್ವ ದಿನಗೂಲಿಯಾಗಿ ಸೇರ್ಪಡೆಯಾಗುವ ಪುಷ್ಪರಾಜ್​ (ಅಲ್ಲು ಅರ್ಜುನ್​) ನಂತರ ಆ ಲೋಕವನ್ನು ಆಳುವ ಮಟ್ಟಕ್ಕೆ ಬಂದು ನಿಂತಿದ್ದಾನೆ. ಮುಂದೇನಾಗುತ್ತದೆ ಎನ್ನುವ ಕುತೂಹಲ ಮನೆ ಮಾಡಿದೆ. ಇದಕ್ಕೆ ಉತ್ತರ ಎರಡನೇ ಭಾಗದಲ್ಲಿ ಸಿಗಲಿದೆ. ಎರಡನೇ ಪಾರ್ಟ್​ನ ಶೂಟಿಂಗ್​ ಪೂರ್ಣಗೊಂಡಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಉತ್ತರ ನೀಡಿದ್ದಾರೆ.

ಎರಡನೇ ಭಾಗಕ್ಕೆ ‘ಪುಷ್ಪ: ದಿ ರೂಲ್​​’ ಎಂದು ಹೆಸರಿಡಲಾಗಿದೆ. ‘ಪುಷ್ಪ’ ಚಿತ್ರದ ಸೀಕ್ವೆಲ್​ ಇದಾಗಿದೆ. ಡಿಸೆಂಬರ್ ತಿಂಗಳಲ್ಲಿ ಚಿತ್ರ ತೆರೆಕಾಣಿಸಬೇಕು ಎನ್ನುವ ಉದ್ದೇಶವನ್ನು ಚಿತ್ರತಂಡ ಇಟ್ಟುಕೊಂಡಿದೆ. ಆದರೆ, ಸಿನಿಮಾದ ಶೂಟಿಂಗ್​​ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ, ಚಿತ್ರದ ಕೆಲಸಗಳು ವಿಳಂಬವಾಗುವ ಎಲ್ಲಾ ಸಾಧ್ಯತೆ ಇದೆ. ಈ ಬಗ್ಗೆ ರಶ್ಮಿಕಾಗೆ ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ‘ಈ ರಹಸ್ಯವನ್ನು ನಾನು ಬಿಟ್ಟುಕೊಡಬಹುದೋ ಅಥವಾ ಇಲ್ಲವೋ ಎಂಬುದು ಗೊತ್ತಿಲ್ಲ. ಶೀಘ್ರವೇ ಶೂಟಿಂಗ್​ ಶುರುವಾಗಲಿದೆ. ಈ ಚಿತ್ರ ನನ್ನ ವೃತ್ತಿಜೀವನದ ಅತಿದೊಡ್ಡ ಸಿನಿಮಾ. ಹಿಂದೆಂದೂ ನಾನು ಈ ರೀತಿಯ ಸಿನಿಮಾ ಮಾಡಿಲ್ಲ’ ಎಂದಿದ್ದಾರೆ ಅವರು.

ಈಗಾಗಲೇ ತಿಳಿದಿರುವಂತೆ ‘ಪುಷ್ಪ’ ಚಿತ್ರದ ಎರಡನೇ ಪಾರ್ಟ್ ಸಿದ್ಧವಾಗುತ್ತಿದೆ. ಆ ಸಿನಿಮಾದಲ್ಲೂ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಅಭಿನಯಿಸಲಿದ್ದಾರೆ. ಮೊದಲ ಪಾರ್ಟ್​ ಗೆದ್ದ ಬಳಿಕ ಎರಡನೇ ಪಾರ್ಟ್​ಗೆ ರಶ್ಮಿಕಾ ಹೆಚ್ಚು ಸಂಬಳ ಕೇಳುತ್ತಿದ್ದಾರಂತೆ. ಮೊದಲ ಪಾರ್ಟ್​ಗೆ 2 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದ ಅವರು ಈಗ 3 ಕೋಟಿ ರೂ. ಡಿಮ್ಯಾಂಡ್​ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಂದರೆ, ಅವರು ಶೇ.50ರಷ್ಟು ಸಂಭಾವನೆಯನ್ನು ಹಚ್ಚಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಈಗ ಗೆಲ್ಲುವ ಕುದುರೆ ಆಗಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಗಿಬೀಳುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರಿಗೆ ಬಾಲಿವುಡ್​ನಿಂದಲೂ ಬುಲಾವ್​ ಬಂದಿದೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’ ಹಾಗೂ ಸಿದ್ದಾರ್ಥ್​ ಮಲ್ಹೋತ್ರ ಜೊತೆ ‘ಮಿಷನ್​ ಮಜ್ನು’ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ಆ ಸಿನಿಮಾಗಳು ತೆರೆಕಂಡ ಬಳಿಕ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಇನ್ನಷ್ಟು ಹೆಚ್ಚಲಿದೆ.

ಇದನ್ನೂ ಓದಿ: Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ

‘ನಾನು ಜಿಮ್​ನಲ್ಲಿ ಜೀವಿಸುವ ಸೈಕೋ’ ಎಂದ ರಶ್ಮಿಕಾ

Published On - 7:00 am, Wed, 19 January 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ