ಅಲ್ಲು ಅರ್ಜುನ್ (Allu Arjun) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ‘ಪುಷ್ಪ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಈ ಸಿನಿಮಾದ ಎರಡನೇ ಪಾರ್ಟ್ ಬಗ್ಗೆ ಪ್ರೇಕ್ಷಕರಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ರಕ್ತ ಚಂದನದ ಜಗತ್ತಿಗೆ ಓರ್ವ ದಿನಗೂಲಿಯಾಗಿ ಸೇರ್ಪಡೆಯಾಗುವ ಪುಷ್ಪರಾಜ್ (ಅಲ್ಲು ಅರ್ಜುನ್) ನಂತರ ಆ ಲೋಕವನ್ನು ಆಳುವ ಮಟ್ಟಕ್ಕೆ ಬಂದು ನಿಂತಿದ್ದಾನೆ. ಮುಂದೇನಾಗುತ್ತದೆ ಎನ್ನುವ ಕುತೂಹಲ ಮನೆ ಮಾಡಿದೆ. ಇದಕ್ಕೆ ಉತ್ತರ ಎರಡನೇ ಭಾಗದಲ್ಲಿ ಸಿಗಲಿದೆ. ಎರಡನೇ ಪಾರ್ಟ್ನ ಶೂಟಿಂಗ್ ಪೂರ್ಣಗೊಂಡಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಉತ್ತರ ನೀಡಿದ್ದಾರೆ.
ಎರಡನೇ ಭಾಗಕ್ಕೆ ‘ಪುಷ್ಪ: ದಿ ರೂಲ್’ ಎಂದು ಹೆಸರಿಡಲಾಗಿದೆ. ‘ಪುಷ್ಪ’ ಚಿತ್ರದ ಸೀಕ್ವೆಲ್ ಇದಾಗಿದೆ. ಡಿಸೆಂಬರ್ ತಿಂಗಳಲ್ಲಿ ಚಿತ್ರ ತೆರೆಕಾಣಿಸಬೇಕು ಎನ್ನುವ ಉದ್ದೇಶವನ್ನು ಚಿತ್ರತಂಡ ಇಟ್ಟುಕೊಂಡಿದೆ. ಆದರೆ, ಸಿನಿಮಾದ ಶೂಟಿಂಗ್ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ, ಚಿತ್ರದ ಕೆಲಸಗಳು ವಿಳಂಬವಾಗುವ ಎಲ್ಲಾ ಸಾಧ್ಯತೆ ಇದೆ. ಈ ಬಗ್ಗೆ ರಶ್ಮಿಕಾಗೆ ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ‘ಈ ರಹಸ್ಯವನ್ನು ನಾನು ಬಿಟ್ಟುಕೊಡಬಹುದೋ ಅಥವಾ ಇಲ್ಲವೋ ಎಂಬುದು ಗೊತ್ತಿಲ್ಲ. ಶೀಘ್ರವೇ ಶೂಟಿಂಗ್ ಶುರುವಾಗಲಿದೆ. ಈ ಚಿತ್ರ ನನ್ನ ವೃತ್ತಿಜೀವನದ ಅತಿದೊಡ್ಡ ಸಿನಿಮಾ. ಹಿಂದೆಂದೂ ನಾನು ಈ ರೀತಿಯ ಸಿನಿಮಾ ಮಾಡಿಲ್ಲ’ ಎಂದಿದ್ದಾರೆ ಅವರು.
ಈಗಾಗಲೇ ತಿಳಿದಿರುವಂತೆ ‘ಪುಷ್ಪ’ ಚಿತ್ರದ ಎರಡನೇ ಪಾರ್ಟ್ ಸಿದ್ಧವಾಗುತ್ತಿದೆ. ಆ ಸಿನಿಮಾದಲ್ಲೂ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಅಭಿನಯಿಸಲಿದ್ದಾರೆ. ಮೊದಲ ಪಾರ್ಟ್ ಗೆದ್ದ ಬಳಿಕ ಎರಡನೇ ಪಾರ್ಟ್ಗೆ ರಶ್ಮಿಕಾ ಹೆಚ್ಚು ಸಂಬಳ ಕೇಳುತ್ತಿದ್ದಾರಂತೆ. ಮೊದಲ ಪಾರ್ಟ್ಗೆ 2 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದ ಅವರು ಈಗ 3 ಕೋಟಿ ರೂ. ಡಿಮ್ಯಾಂಡ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಂದರೆ, ಅವರು ಶೇ.50ರಷ್ಟು ಸಂಭಾವನೆಯನ್ನು ಹಚ್ಚಿಸಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ಈಗ ಗೆಲ್ಲುವ ಕುದುರೆ ಆಗಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಗಿಬೀಳುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರಿಗೆ ಬಾಲಿವುಡ್ನಿಂದಲೂ ಬುಲಾವ್ ಬಂದಿದೆ. ಅಮಿತಾಭ್ ಬಚ್ಚನ್ ಜೊತೆ ‘ಗುಡ್ ಬೈ’ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಜೊತೆ ‘ಮಿಷನ್ ಮಜ್ನು’ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ಆ ಸಿನಿಮಾಗಳು ತೆರೆಕಂಡ ಬಳಿಕ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಇನ್ನಷ್ಟು ಹೆಚ್ಚಲಿದೆ.
ಇದನ್ನೂ ಓದಿ: Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ
Published On - 7:00 am, Wed, 19 January 22