AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಸ್ ಸುಬ್ಬಲಕ್ಷ್ಮಿಯಾಗಿ ರಶ್ಮಿಕಾ ಮಂದಣ್ಣ, ರಾಕ್​ಲೈನ್ ವೆಂಕಟೇಶ್ ನಿರ್ಮಾಣ

ಎಂಎಸ್ ಸುಬ್ಬಲಕ್ಷ್ಮಿ, ಭಾರತೀಯ ಗಾಯನ ಕ್ಷೇತ್ರದ ದಂತಕತೆ. ಇದೀಗ ಅವರ ಜೀವನ ಆಧರಿತ ಸಿನಿಮಾ ನಿರ್ಮಾಣವಾಗುತ್ತಿದೆ. ಗೀತಾ ಆರ್ಟ್ಸ್ ನಿರ್ಮಾಣ ಮಾಡಲಿರುವ ಈ ಸಿನಿಮಾಕ್ಕೆ ಕನ್ನಡದ ಜನಪ್ರಿಯ ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್ ಬಂಡವಾಳ ಹೂಡಿದ್ದಾರೆ. ಈ ಸಿನಿಮಾನಲ್ಲಿ ಸುಬ್ಬುಲಕ್ಷ್ಮಿ ಅವರ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ನಟನೆ ಮಾಡಲಿದ್ದಾರೆ.

ಎಂಎಸ್ ಸುಬ್ಬಲಕ್ಷ್ಮಿಯಾಗಿ ರಶ್ಮಿಕಾ ಮಂದಣ್ಣ, ರಾಕ್​ಲೈನ್ ವೆಂಕಟೇಶ್ ನಿರ್ಮಾಣ
Rashmika Mandanna
ಮಂಜುನಾಥ ಸಿ.
|

Updated on: Sep 15, 2026 | 3:16 PM

Share

ಮುಖ್ಯಾಂಶಗಳು

  • ಎಂಎಸ್ ಸುಬ್ಬುಲಕ್ಷ್ಮಿ ಜೀವನ ಆಧರಿತ ಸಿನಿಮಾ
  • ರಶ್ಮಿಕಾ ಮಂದಣ್ಣ ಅವರು ನಟನೆ ಮಾಡಿದ್ದಾರೆ
  • ಕನ್ನಡಿಗ ರಾಕ್​ಲೈನ್ ವೆಂಕಟೇಶ್ ಸಹ ನಿರ್ಮಾಣ ಮಾಡಿದ್ದಾರೆ.

ಗಾಯನ ಲೋಕದ ದಂತಕತೆ ಎಂಎಸ್ ಸುಬ್ಬಲಕ್ಷ್ಮಿ ಅವರ ಜೀವನ ಸಿನಿಮಾ ಆಗಲಿದೆಯಂಬ ಸುದ್ದಿ ಕಳೆದ ಆರೇಳು ತಿಂಗಳುಗಳಿಂದಲೂ ಹರಿದಾಡುತ್ತಲೇ ಇತ್ತು. ಎಂಎಸ್ ಸುಬ್ಬಲಕ್ಷ್ಮಿ ಅವರ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಬಳಿಕ ರುಕ್ಮಿಣಿ ವಸಂತ್ ಹೆಸರು ಕೇಳಿ ಬಂತು. ಕೀರ್ತಿ ಸುರೇಶ್ ಸಹ ಕೇಳಿ ಬಂದಿತ್ತು. ಆದರೆ ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಹೆಸರು ಕೇಳಿ ಬಂದಿತ್ತು. ಇದೀಗ ಅಂತಿಮವಾಗಿ ರಶ್ಮಿಕಾ ಅವರೇ ಎಂಎಸ್ ಸುಬ್ಬುಲಕ್ಷ್ಮಿ ಅವರ ಪಾತ್ರಕ್ಕೆ ಅಧಿಕೃತ ಆಯ್ಕೆ ಆಗಿದ್ದಾರೆ.

ಪ್ರತಿಷ್ಠಿತ ಗೀತಾ ಆರ್ಟ್ಸ್​​ ನವರು ‘ಎಂಎಸ್ ಸುಬ್ಬುಲಕ್ಷ್ಮಿ’ ಜೀವನ ಕತೆಯನ್ನು ಸಿನಿಮಾ ಮಾಡಲಿದ್ದು, ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದು, ಸಿನಿಮಾನಲ್ಲಿ ಎಂಎಸ್ ಸುಬ್ಬಲಕ್ಷ್ಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸುವುದನ್ನು ಖಾತ್ರಿಪಡಿಸಲಾಗಿದೆ. ಎಂಎಸ್ ಸುಬ್ಬಲಕ್ಷ್ಮಿ ಅವರ 110ನೇ ಜಯಂತಿಯಂದು (ಸೆಪ್ಟೆಂಬರ್ 16) ಚೆನ್ನೈನ ‘ದಿ ಮ್ಯೂಸಿಕ್ ಅಕಾಡೆಮಿ’ಯಲ್ಲಿ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.

ಸಿನಿಮಾ ಅನ್ನು ಗೌತಮ್ ತಿನರೂರಿ ನಿರ್ದೇಶನ ಮಾಡಲಿದ್ದು, ಗೌತಮ್ ಅವರು ಹಲವು ವರ್ಷಗಳ ಕಾಲ ಈ ಸಿನಿಮಾಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ಸುಬ್ಬುಲಕ್ಷ್ಮಿ ಅವರ ಬಗ್ಗೆ ಅಧ್ಯಯನ ನಡೆಸಿ, ಅವರ ಕುಟುಂಬ ಅನುಮತಿ ಪಡೆದು, ಸಿನಿಮಾ ನಿರ್ಮಾಣಕ್ಕೆ ಅಗತ್ಯವಿರುವ ಸಾಹಿತ್ಯ, ಸಂಗೀತದ ಎಲ್ಲ ಹಕ್ಕುಗಳನ್ನು ಖರೀದಿ ಮಾಡಿ, ಇದೀಗ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಸುಬ್ಬುಲಕ್ಷ್ಮಿ ಅವರ ಪಾತ್ರದಲ್ಲಿ ರಶ್ಮಿಕಾ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ನಿರ್ದೇಶಕ ಗೌತಮ್ ತಿನರೂರಿ.

ಯುವಜನರ ನೆಚ್ಚಿನ ಸಂಗೀತ ನಿರ್ದೇಶಕ ಎನಿಸಿಕೊಂಡಿರುವ ಅನಿರುದ್ಧ್ ರವಿಚಂದರ್ ಅವರು ಎಂ ಎಸ್ ಸುಬ್ಬುಲಕ್ಷ್ಮಿ ಅವರ ಜೀವನ ಆಧಾರಿತ ಸಿನಿಮಾಕ್ಕೆ ಸಂಗೀತ ನೀಡಲಿದ್ದಾರೆ. ಸಿನಿಮಾಕ್ಕೆ ತೆಲುಗಿನ ಜನಪ್ರಿಯ ಸಿನಿಮಾ ನಿರ್ಮಾಪಕ ಅಲ್ಲು ಅರವಿಂದ್ ಹಾಗೂ ಕನ್ನಡದ ಜನಪ್ರಿಯ ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಬನ್ನಿ ವಾಸು ಸಹ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ