
ಗಾಯನ ಲೋಕದ ದಂತಕತೆ ಎಂಎಸ್ ಸುಬ್ಬಲಕ್ಷ್ಮಿ ಅವರ ಜೀವನ ಸಿನಿಮಾ ಆಗಲಿದೆಯಂಬ ಸುದ್ದಿ ಕಳೆದ ಆರೇಳು ತಿಂಗಳುಗಳಿಂದಲೂ ಹರಿದಾಡುತ್ತಲೇ ಇತ್ತು. ಎಂಎಸ್ ಸುಬ್ಬಲಕ್ಷ್ಮಿ ಅವರ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಬಳಿಕ ರುಕ್ಮಿಣಿ ವಸಂತ್ ಹೆಸರು ಕೇಳಿ ಬಂತು. ಕೀರ್ತಿ ಸುರೇಶ್ ಸಹ ಕೇಳಿ ಬಂದಿತ್ತು. ಆದರೆ ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಹೆಸರು ಕೇಳಿ ಬಂದಿತ್ತು. ಇದೀಗ ಅಂತಿಮವಾಗಿ ರಶ್ಮಿಕಾ ಅವರೇ ಎಂಎಸ್ ಸುಬ್ಬುಲಕ್ಷ್ಮಿ ಅವರ ಪಾತ್ರಕ್ಕೆ ಅಧಿಕೃತ ಆಯ್ಕೆ ಆಗಿದ್ದಾರೆ.
ಪ್ರತಿಷ್ಠಿತ ಗೀತಾ ಆರ್ಟ್ಸ್ ನವರು ‘ಎಂಎಸ್ ಸುಬ್ಬುಲಕ್ಷ್ಮಿ’ ಜೀವನ ಕತೆಯನ್ನು ಸಿನಿಮಾ ಮಾಡಲಿದ್ದು, ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದು, ಸಿನಿಮಾನಲ್ಲಿ ಎಂಎಸ್ ಸುಬ್ಬಲಕ್ಷ್ಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸುವುದನ್ನು ಖಾತ್ರಿಪಡಿಸಲಾಗಿದೆ. ಎಂಎಸ್ ಸುಬ್ಬಲಕ್ಷ್ಮಿ ಅವರ 110ನೇ ಜಯಂತಿಯಂದು (ಸೆಪ್ಟೆಂಬರ್ 16) ಚೆನ್ನೈನ ‘ದಿ ಮ್ಯೂಸಿಕ್ ಅಕಾಡೆಮಿ’ಯಲ್ಲಿ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.
A LEGACY begins with an unforgettable celebration 🎶✨
Witness the grand launch of #MS – A Legacy On Screen, celebrating Bharat Ratna #MSSubbulakshmi Amma’s 110th Birth Anniversary with Ulaganayagan @ikamalhaasan garu as Chief Guest ❤️❤️
Starring @iamRashmika
Directed by… pic.twitter.com/1ebZtkDTrU— Geetha Arts (@GeethaArts) September 15, 2026
ಸಿನಿಮಾ ಅನ್ನು ಗೌತಮ್ ತಿನರೂರಿ ನಿರ್ದೇಶನ ಮಾಡಲಿದ್ದು, ಗೌತಮ್ ಅವರು ಹಲವು ವರ್ಷಗಳ ಕಾಲ ಈ ಸಿನಿಮಾಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ಸುಬ್ಬುಲಕ್ಷ್ಮಿ ಅವರ ಬಗ್ಗೆ ಅಧ್ಯಯನ ನಡೆಸಿ, ಅವರ ಕುಟುಂಬ ಅನುಮತಿ ಪಡೆದು, ಸಿನಿಮಾ ನಿರ್ಮಾಣಕ್ಕೆ ಅಗತ್ಯವಿರುವ ಸಾಹಿತ್ಯ, ಸಂಗೀತದ ಎಲ್ಲ ಹಕ್ಕುಗಳನ್ನು ಖರೀದಿ ಮಾಡಿ, ಇದೀಗ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಸುಬ್ಬುಲಕ್ಷ್ಮಿ ಅವರ ಪಾತ್ರದಲ್ಲಿ ರಶ್ಮಿಕಾ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ನಿರ್ದೇಶಕ ಗೌತಮ್ ತಿನರೂರಿ.
ಯುವಜನರ ನೆಚ್ಚಿನ ಸಂಗೀತ ನಿರ್ದೇಶಕ ಎನಿಸಿಕೊಂಡಿರುವ ಅನಿರುದ್ಧ್ ರವಿಚಂದರ್ ಅವರು ಎಂ ಎಸ್ ಸುಬ್ಬುಲಕ್ಷ್ಮಿ ಅವರ ಜೀವನ ಆಧಾರಿತ ಸಿನಿಮಾಕ್ಕೆ ಸಂಗೀತ ನೀಡಲಿದ್ದಾರೆ. ಸಿನಿಮಾಕ್ಕೆ ತೆಲುಗಿನ ಜನಪ್ರಿಯ ಸಿನಿಮಾ ನಿರ್ಮಾಪಕ ಅಲ್ಲು ಅರವಿಂದ್ ಹಾಗೂ ಕನ್ನಡದ ಜನಪ್ರಿಯ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಬನ್ನಿ ವಾಸು ಸಹ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ