AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ; ಬರ್ತ್​ಡೇ ದಿನವೇ ಅಧಿಕೃತವಾಯ್ತು ಸುದ್ದಿ

ರಶ್ಮಿಕಾ ಅವರು ಈ ಮೊದಲಿನಿಂದಲೂ ವಿಜಯ್​ ಅಭಿಮಾನಿಗಳಿಗೆ ಹತ್ತಿರ ಆಗೋಕೆ ಸಾಕಷ್ಟು ಪ್ರಯತ್ನಿಸಿದ್ದರು. ಸಾಕಷ್ಟು ಸಂದರ್ಶನಗಳಲ್ಲಿ ತಾವು ವಿಜಯ್ ಅಭಿಮಾನಿ ಎಂದು ಹೇಳಿಕೊಂಡಿದ್ದರು. ಕೊನೆಗೂ ಅವರ ಆಸೆ ಈಡೇರುತ್ತಿದೆ.  

ದಳಪತಿ ವಿಜಯ್ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ; ಬರ್ತ್​ಡೇ ದಿನವೇ ಅಧಿಕೃತವಾಯ್ತು ಸುದ್ದಿ
TV9 Web
| Edited By: |

Updated on: Apr 05, 2022 | 7:06 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ (Bollywood) ಸಾಕಷ್ಟು ಬೇಡಿಕೆ ಸೃಷ್ಟಿ ಮಾಡಿಕೊಂಡಿದ್ದಾರೆ. ರಶ್ಮಿಕಾ ಕಾಲ್​ಶೀಟ್​ ಪಡೆಯೋಕೆ ಸ್ಟಾರ್ ನಿರ್ಮಾಪಕರು ಕಾದು ಕೂತಿದ್ದಾರೆ. ಈ ಮಧ್ಯೆ ರಶ್ಮಿಕಾ ಹಲವು ಸ್ಕ್ರಿಪ್ಟ್​ಗಳನ್ನು​ ಕೇಳುತ್ತಿದ್ದಾರೆ. ತುಂಬಾನೇ ಲೆಕ್ಕಾಚಾರ ಹಾಕಿ ಸಿನಿಮಾ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಬರ್ತ್​ಡೇ ಪ್ರಯುಕ್ತ ಹೊಸಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ. ದಳಪತಿ ವಿಜಯ್ (Thalapathy Vijay) ನಟನೆಯ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ ಎನ್ನುವ ವಿಚಾರ ಇತ್ತೀಚೆಗೆ ಹರಿದಾಡಿತ್ತು. ಅದು ನಿಜವಾಗಿದೆ. ರಶ್ಮಿಕಾ ಬರ್ತ್​ಡೇ ದಿನ ಈ ಬಗ್ಗೆ ಘೋಷಣೆ ಆಗಿದೆ.

ವಿಜಯ್​ ಸದ್ಯ ‘ಬೀಸ್ಟ್’ ಸಿನಿಮಾದ ಪ್ರಚಾರ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ನೆಲ್ಸನ್​ ದಿಲೀಪ್​ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಸನ್​ ಪಿಕ್ಚರ್ಸ್​ ಬಂಡವಾಳ ಹೂಡಿದೆ. ಈ ಸಿನಿಮಾ ಏಪ್ರಿಲ್​ 13ರಂದು ತೆರೆಗೆ ಬರುತ್ತಿದೆ. ಹೀಗಿರುವಾಗಲೇ ಅವರ 66ನೇ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಬಂದಿದೆ. ಚಿತ್ರಕ್ಕೆ ರಶ್ಮಿಕಾ ನಾಯಕಿ ಆಗಿ ಆಯ್ಕೆ ಆಗಿರುವ ವಿಚಾರ ಅಧಿಕೃತವಾಗಿದೆ.

‘ದಳಪತಿ 66’ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ರಶ್ಮಿಕಾಗೆ ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಈ ಕಾರಣಕ್ಕೆ ರಶ್ಮಿಕಾಗೆ ಮಣೆ ಹಾಕಲಾಗಿದೆ.

ರಶ್ಮಿಕಾ ಅವರು ಈ ಮೊದಲಿನಿಂದಲೂ ವಿಜಯ್​ ಅಭಿಮಾನಿಗಳಿಗೆ ಹತ್ತಿರ ಆಗೋಕೆ ಸಾಕಷ್ಟು ಪ್ರಯತ್ನಿಸಿದ್ದರು. ಸಾಕಷ್ಟು ಸಂದರ್ಶನಗಳಲ್ಲಿ ತಾವು ವಿಜಯ್ ಅಭಿಮಾನಿ ಎಂದು ಹೇಳಿಕೊಂಡಿದ್ದರು. ಕೊನೆಗೂ ಅವರ ಆಸೆ ಈಡೇರುತ್ತಿದೆ.

ಹಿಂದಿಯ ‘ಮಿಷನ್​ ಮಜ್ನು’ ಹಾಗೂ ‘ಗುಡ್​ ಬೈ’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲೂ ಅವರು ಶೀಘ್ರವೇ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಓಪನಿಂಗ್​ ಪಡೆದುಕೊಂಡಿಲ್ಲ. ಇನ್ನು, ದುಲ್ಖರ್ ಸಲ್ಮಾನ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಕಾಶ್ಮೀರಿ ಹುಡುಗಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

ಹಿಜಾಬ್ ಧರಿಸಿ ಬಂದ ರಶ್ಮಿಕಾ ಮಂದಣ್ಣ; ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕೊಡಗಿನ ಬೆಡಗಿ

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ