ರಶ್ಮಿಕಾ To ಸಮಂತಾ: ಪ್ರತಿ ಇನ್ಸ್ಟಾಗ್ರಾಮ್ ಪೋಸ್ಟ್ಗೆ ಈ ಸೆಲೆಬ್ರಿಟಿಗಳು ಪಡೆಯೋ ಹಣ ಎಷ್ಟು?
ಹಲವು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಾರೆ. ಈ ರೀತಿ ಪ್ರಚಾರ ಮಾಡುವ ಸೆಲೆಬ್ರಿಟಿಗಳು ಪ್ರತಿ ಪೋಸ್ಟ್ಗೆ ಪಡೆಯೋ ಸಂಭಾವನೆ ಎಷ್ಟು ಕೋಟಿ ರೂಪಾಯಿ ಅನ್ನೋ ಬಗ್ಗೆ ಇಲ್ಲಿದೆ ಮಾಹಿತಿ.
ಬಾಲಿವುಡ್ ರೀತಿಯೇ ದಕ್ಷಿಣ ಭಾರತದ ಚಿತ್ರರಂಗ ಕೂಡ ಬೆಳೆದು ನಿಂತಿದೆ. ದಕ್ಷಿಣ ಭಾರತದಲ್ಲಿ ಯಶ್, ರಿಷಬ್ ಶೆಟ್ಟಿ, ಅಲ್ಲು ಅರ್ಜುನ್, ಜೂನಿಯರ್ ಎನ್ಟಿಆರ್ (Jr NTR) ಸೇರಿ ಹಲವು ಪ್ಯಾನ್ ಇಂಡಿಯಾ ಸ್ಟಾರ್ಗಳಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು ಹಲವು ಬ್ರ್ಯಾಂಡ್ಗಳನ್ನು ಪ್ರಚಾರ ಮಾಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಾರೆ. ಇನ್ಸ್ಟಾಗ್ರಾಮ್ನಲ್ಲಿ ಈ ರೀತಿ ಪ್ರಚಾರ ಮಾಡುವ ಸೆಲೆಬ್ರಿಟಿಗಳು ಪ್ರತಿ ಪೋಸ್ಟ್ಗೆ ಪಡೆಯೋ ಸಂಭಾವನೆ ಎಷ್ಟು ಕೋಟಿ ರೂಪಾಯಿ ಅನ್ನೋ ಬಗ್ಗೆ ಇಲ್ಲಿದೆ ಮಾಹಿತಿ.
ಅಲ್ಲು ಅರ್ಜುನ್
‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಅಲ್ಲು ಅರ್ಜುನ್ ಬ್ಯುಸಿ ಇದ್ದಾರೆ. ಟಾಲಿವುಡ್ನಲ್ಲಿ ಹಲವು ಸೂಪರ್ ಹಿಟ್ ಚಿತ್ರ ನೀಡಿದ್ದಾರೆ. ಅವರು ಇನ್ಸ್ಟಾಗ್ರಾಮ್ನಲ್ಲಿ ಪ್ರತಿ ಪೋಸ್ಟ್ಗೆ 5-7 ಕೋಟಿ ರೂಪಾಯಿ ಪಡೆಯುತ್ತಾರೆ ಎನ್ನಲಾಗಿದೆ. ಇತ್ತೀಚೆಗೆ ಇನ್ಸ್ಟಾಗ್ರಾಮ್ ಜೊತೆ ಅವರು ಕೊಲಾಬರೇಷನ್ ಮಾಡಿಕೊಂಡಿದ್ದರು.
ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಅವರು ಇನ್ಸ್ಟಾಗ್ರಾಮ್ನಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ‘ಅನಿಮಲ್’ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. 4 ಕೋಟಿ ಜನರು ಅವರನ್ನು ಹಿಂಬಾಲಿಸುತ್ತಿದ್ದಾರೆ. ಪ್ರತಿ ಪೋಸ್ಟ್ಗೆ 20-30 ಲಕ್ಷ ರೂಪಾಯಿ ಪಡೆಯುತ್ತಾರೆ ಎನ್ನಲಾಗಿದೆ. ಅವರು ಹಲವು ಬ್ರ್ಯಾಂಡ್ಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ.
ವಿಜಯ್ ದೇವರಕೊಂಡ
ವಿಜಯ್ ದೇವರಕೊಂಡ ಅವರು ಟಾಲಿವುಡ್ನ ಬೇಡಿಕೆಯ ಹೀರೋ. ಅವರು ಹಲವು ಬ್ರ್ಯಾಂಡ್ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಅವರು ಪ್ರತಿ ಪೋಸ್ಟ್ಗೆ 1-2 ಕೋಟಿ ರೂಪಾಯಿ ಪಡೆಯುತ್ತಾರೆ. ಸದ್ಯ ಅವರು ‘ಖುಷಿ’ ಚಿತ್ರದ ಗೆಲುವಿನ ಖುಷಿಯಲ್ಲಿದ್ದಾರೆ.
ಸಮಂತಾ
ಸಮಂತಾ ಅವರು ನಟನೆಯಿಂದ ಒಂದು ಬ್ರೇಕ್ ಪಡೆದಿದ್ದಾರೆ. ಆರೋಗ್ಯದ ಬಗ್ಗೆ ಅವರು ಗಮನ ಹರಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 2.6 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ಅವರು ಪ್ರತಿ ಪೋಸ್ಟ್ಗೆ 15-25 ಲಕ್ಷ ರೂಪಾಯಿ ಪಡೆಯುತ್ತಾರೆ. ಮಾಜಿ ಪತಿ ನಾಗ ಚೈತನ್ಯ ಜೊತೆಗಿನ ಹಲವು ಪೋಸ್ಟ್ಗಳು ಇನ್ಸ್ಟಾಗ್ರಾಮ್ನಲ್ಲಿದ್ದವು. ಅದನ್ನು ಅವರು ಡಿಲೀಟ್ ಮಾಡಿದ್ದಾರೆ.
ಮಹೇಶ್ ಬಾಬು
ಮಹೇಶ್ ಬಾಬು ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಫ್ಯಾನ್ ಬೇಸ್ ಹೊಂದಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಬ್ರ್ಯಾಂಡ್ನ ಪ್ರಚಾರ ಮಾಡುತ್ತಾರೆ. ಇದಕ್ಕೆ ಅವರು ಪಡೆಯೋದು 1-2 ಕೋಟಿ ರೂಪಾಯಿ. ‘ಸರ್ಕಾರು ವಾರಿ ಪಾಟ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಜನವರಿ 12ರಂದು ಸಿನಿಮಾ ರಿಲೀಸ್ ಆಗಲಿದೆ.
ಪೂಜಾ ಹೆಗ್ಡೆ
ಪೂಜಾ ಹೆಗ್ಡೆ ಅವರು ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಮೂಲಕ ಮತ್ತೊಂದು ಸೋಲು ಕಂಡರು. ವೃತ್ತಿ ಜೀವನದಲ್ಲಿ ಅವರಿಗೆ ಸಾಲು ಸಾಲು ಸೋಲು ಉಂಟಾಗುತ್ತಿದೆ. ಆದರೆ, ಅವರ ಪ್ರತಿ ಪೋಸ್ಟ್ಗೆ 30 ಲಕ್ಷ ರೂಪಾಯಿ ಪಡೆಯುತ್ತಾರೆ.
ಇದನ್ನೂ ಓದಿ: ‘ಈ ರೀತಿ ಬದುಕಿರೋಕಾಗಲ್ಲ, ಮನೆಗೆ ಕಳುಹಿಸಿ’; ಬಿಗ್ ಬಾಸ್ ಎದುರು ವಿನಯ್ ಹೊಸ ಬೇಡಿಕೆ
ಕಾಜಲ್ ಅಗರ್ವಾಲ್
ಕಾಜಲ್ ಅಗರ್ವಾಲ್ ಅವರು ಕುಟುಂಬದ ಜೊತೆ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 2.6 ಕೋಟಿ ಹಿಂಬಾಲಕರಿದ್ದಾರೆ. ಅವರು ಬ್ರ್ಯಾಂಡ್ ಪ್ರಚಾರಕ್ಕೆ ಪೋಸ್ಟ್ ಹಾಕಿದರೆ 50 ಲಕ್ಷ ರೂಪಾಯಿ ಪಡೆಯುತ್ತಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:42 am, Tue, 19 December 23