‘ಸಿಕಂದರ್​’ ಮಾತ್ರವಲ್ಲ, ರಶ್ಮಿಕಾ ಮಂದಣ್ಣ ಕೈಯಲ್ಲಿವೆ 5 ಹೈವೋಲ್ಟೇಜ್​ ಸಿನಿಮಾಗಳು

‘ಅನಿಮಲ್​’ ಸಿನಿಮಾದಿಂದ ದೊಡ್ಡ ಯಶಸ್ಸು ಪಡೆದ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಹೊಸ ಹೊಸ ಆಫರ್​ ಸಿಗುತ್ತಿವೆ. ಸಲ್ಮಾನ್​ ಖಾನ್​, ಧನುಷ್​, ಅಲ್ಲು ಅರ್ಜುನ್​, ವಿಕ್ಕಿ ಕೌಶಲ್​ ಮುಂತಾದ ಸ್ಟಾರ್​ ನಟರ ಜೊತೆ ರಶ್ಮಿಕಾ ಅಭಿನಯಿಸುತ್ತಿದ್ದಾರೆ. ಪ್ಯಾನ್​ ಇಂಡಿಯಾ ನಟಿಯಾಗಿ ಅವರು ಮಿಂಚುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಹೆಚ್ಚು ನಿರೀಕ್ಷೆ ಮನೆ ಮಾಡಿದೆ.

‘ಸಿಕಂದರ್​’ ಮಾತ್ರವಲ್ಲ, ರಶ್ಮಿಕಾ ಮಂದಣ್ಣ ಕೈಯಲ್ಲಿವೆ 5 ಹೈವೋಲ್ಟೇಜ್​ ಸಿನಿಮಾಗಳು
ರಶ್ಮಿಕಾ ಮಂದಣ್ಣ
Follow us
ಮದನ್​ ಕುಮಾರ್​
|

Updated on: May 10, 2024 | 5:57 PM

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರನ್ನು ನೋಡಿ ಇನ್ನುಳಿದ ಹೀರೋಯಿನ್​ಗಳಿಗೆ ಹೊಟ್ಟೆಕಿಟ್ಟು ಉಂಟಾಗುವುದು ಗ್ಯಾರಂಟಿ. ಯಾಕೆಂದರೆ, ಒಂದಕ್ಕಿಂತ ಒಂದು ದೊಡ್ಡ ಪ್ರಾಜೆಕ್ಟ್​ಗಳಿಗೆ ರಶ್ಮಿಕಾ ಮಂದಣ್ಣ ಸಹಿ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗದಿಂದ ಶುರುವಾದ ಅವರ ಸಿನಿಮಾ ಪಯಣ ಈಗ ಬಾಲಿವುಡ್​ನಲ್ಲಿ ಮಿಂಚುತ್ತಿದೆ. ಬಾಲಿವುಡ್​ನ ಸ್ಟಾರ್​ ಹೀರೋ ಸಲ್ಮಾನ್​ ಖಾನ್​ (Salman Khan) ಜೊತೆ ಸಿನಿಮಾ ಮಾಡುವ ಅವಕಾಶ ರಶ್ಮಿಕಾ ಮಂದಣ್ಣ ಅವರಿಗೆ ಸಿಕ್ಕಿದೆ. ಅಷ್ಟೇ ಅಲ್ಲದೇ, ಇನ್ನೂ ಅನೇಕ ಸಿನಿಮಾಗಳು ಅವರ ಕೈಯಲ್ಲಿವೆ. ರಶ್ಮಿಕಾ ಮಂದಣ್ಣ ಅವರ ಮುಂಬರುವ ಸಿನಿಮಾಗಳ (Rashmika Mandanna Upcoming Movies) ಬಗ್ಗೆ ಇಲ್ಲಿದೆ ಮಾಹಿತಿ..

ಸಿಕಂದರ್​: ಈ ಸಿನಿಮಾಗೆ ದಕ್ಷಿಣ ಭಾರತ ಮತ್ತು ಬಾಲಿವುಡ್​ನ ಖ್ಯಾತ ನಿರ್ದೇಶಕ ಎ.ಆರ್​. ಮುರುಗದಾಸ್​ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಸಲ್ಮಾನ್​ ಖಾನ್​ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾ ಅನೌನ್ಸ್​ ಆಗಿದೆ. ಸಾಜಿದ್​ ನಾಡಿಯದ್ವಾಲಾ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಪುಷ್ಪ 2: ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿರುವ ‘ಪುಷ್ಪ 2’ ಸಿನಿಮಾ ಆಗಸ್ಟ್​ 15ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಈ ಸಿನಿಮಾ ರಿಲೀಸ್​ ಆದ ನಂತರ ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನ ಇನ್ನೊಂದು ಹಂತಕ್ಕೆ ಮೇಲೇರಲಿದೆ. ಸುಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಭಾರಿ ನಿರೀಕ್ಷೆ ಹುಟ್ಟುಹಾಕಿದೆ.

ಕುಬೇರ: ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಕಾಲಿವುಡ್​ನ ಸ್ಟಾರ್​ ನಟ ಧನುಷ್​ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಈ ಸಿನಿಮಾ ಮೇಲೆ ಕೂಡ ಭಾರಿ ನಿರೀಕ್ಷೆ ಇದೆ. ಹೀಗೆ ಹಲವು ಸ್ಟಾರ್​ ನಟರ ಜೊತೆ ರಶ್ಮಿಕಾ ನಟಿಸುತ್ತಿರುವುದು ಅವರ ಅಭಿಮಾನಿಗಳಿಗೆ ಹೆಮ್ಮೆ ಎಂದಿದೆ.

ಇದನ್ನೂ ಓದಿ: ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ಬೇಕು ಅಂತ ಹಠ ಹಿಡಿದಿದ್ದಾರಾ ವಿಜಯ್​ ದೇವರಕೊಂಡ?

ದಿ ಗರ್ಲ್​ಫ್ರೆಂಡ್​: ಬೇರೆ ಬೇರೆ ರೀತಿಯ ಸ್ಕ್ರಿಪ್ಟ್​ಗಳನ್ನು ರಶ್ಮಿಕಾ ಮಂದಣ್ಣ ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ‘ದಿ ಗರ್ಲ್​ಫ್ರೆಂಡ್​’ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಕನ್ನಡದ ನಟ ದೀಕ್ಷಿತ್​ ಶೆಟ್ಟಿ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಚವ್ವಾ: ಬಾಲಿವುಡ್​ನಲ್ಲಿ ರಶ್ಮಿಕಾ ನಟಿಸುತ್ತಿರುವ ಇನ್ನೊಂದು ಸಿನಿಮಾ ‘ಚವ್ವಾ’. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಕ್ಕಿ ಕೌಶಲ್​ ಜೊತೆ ಅಭಿನಯಿಸುತ್ತಿದ್ದಾರೆ. ಐತಿಹಾಸಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಛತ್ರಪತಿ ಶಂಬಾಜಿ ಮಹಾರಾಜ್​ ಜೀವನದ ಕುರಿತು ತೋರಿಸಲಾಗುವುದು. ಅಕ್ಷಯ್​ ಖನ್ನಾ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಲಕ್ಷಣ್​ ಉಟೇಕರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.