ಅವರು ರಶೀ, ಇವರು ವಿಜು: ರಶ್ಮಿಕಾ, ವಿಜಯ್ ದೇವರಕೊಂಡ ಪರಸ್ಪರ ಕರೆಯೋದು ಹೀಗೆ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ನಡುವೆ ಪ್ರೀತಿ, ಪ್​ರೇಮ ಚಿಗುರಿದ್ದು ಇಂದು, ನಿನ್ನೆ ಅಲ್ಲ. ಹಲವು ವರ್ಷಗಳಿಂದ ಅವರಿಬ್ಬರು ಪ್ರೀತಿಸುತ್ತಿದ್ದಾರೆ. ಆದರೆ ಬಹಿರಂಗವಾಗಿ ಒಪ್ಪಿಕೊಂಡಿರಲಿಲ್ಲ ಅಷ್ಟೇ. ಈಗ ಅವರಿಬ್ಬರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ಅವರು ರಶೀ, ಇವರು ವಿಜು: ರಶ್ಮಿಕಾ, ವಿಜಯ್ ದೇವರಕೊಂಡ ಪರಸ್ಪರ ಕರೆಯೋದು ಹೀಗೆ
Rashmika Mandanna, Vijay Deverakonda

Updated on: Feb 23, 2026 | 3:34 PM

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ (Vijay Deverakonda) ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಉದಯಪುರದಲ್ಲಿ ಫೆಬ್ರವರಿ 26ರಂದು ಈ ಸೆಲೆಬ್ರಿಟಿ ಜೋಡಿಯ ಮದುವೆ ನಡೆಯಲಿದೆ. ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿದ್ದ ರಶ್ಮಿಕಾ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಈ ಮೊದಲೇ ಹಲವು ಬಾರಿ ಸೂಚನೆ ನೀಡಿದ್ದರು. ನೇರವಾಗಿ ಪ್ರೀತಿಯನ್ನು ಒಪ್ಪಿಕೊಳ್ಳದೇ ಇದ್ದರೂ ಕೂಡ ಅವರ ವರ್ತನೆಯಲ್ಲಿ ಎಲ್ಲವೂ ಗೋಚರ ಆಗುತ್ತಿತ್ತು. ಪರಸ್ಪರ ಪ್ರೀತಿಯಿಂದ ಅಡ್ಡಹೆಸರು (Nickname) ಕರೆಯುತ್ತಿದ್ದಿದ್ದೇ ಈ ಮಾತಿಗೆ ಸಾಕ್ಷಿ.

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಅವರನ್ನು ವಿಜು ಎಂದು ಕರೆಯುತ್ತಿದ್ದರು. ಅದೇ ರೀತಿ, ರಶ್ಮಿಕಾ ಮಂದಣ್ಣ ಅವರನ್ನು ವಿಜಯ್ ದೇವರಕೊಂಡ ಅವರು ರಶೀ ಎಂದು ಕರೆಯುತ್ತಿದ್ದರು. ಇದೆಲ್ಲ ಗುಟ್ಟಾಗಿ ನಡೆದಿದ್ದಲ್ಲ. ಸೋಶಿಯಲ್ ಮೀಡಿಯಾದಲ್ಲಿ ಕೂಡ ರಶ್ಮಿಕಾ ಮಂದಣ್ಣ ಅವರು ಪ್ರೀತಿಯಿಂದ ವಿಜು ಎಂದು ಕರೆದಿದ್ದರು. ಆಗಲೇ ಅಭಿಮಾನಿಗಳಿಗೆ ಎಲ್ಲವೂ ಖಚಿತ ಆಗಿತ್ತು.

ಕನ್ನಡ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿದ ಬಳಿಕ ರಶ್ಮಿಕಾ ಮಂದಣ್ಣ ಅವರು ತೆಲುಗು ಚಿತ್ರರಂಗಕ್ಕೆ ಹಾರಿದರು. ಅಲ್ಲಿ ಅವರಿಗೆ ವಿಜಯ್ ದೇವರಕೊಂಡ ಜೊತೆ ಆಪ್ತತೆ ಬೆಳೆಯಿತು. ಇಬ್ಬರು ಜೊತೆಯಾಗಿ ‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಸಿನಿಮಾಗಳನ್ನು ಮಾಡಿದರು. ಆ ನಂತರ ಅವರು ಇನ್ನಷ್ಟು ಕ್ಲೋಸ್ ಆದರು. ಅವರಿಬ್ಬರ ನಡುವೆ ಪ್ರೀತಿ ಚಿಗುರಿತು.

2025ರ ಅಕ್ಟೋಬರ್​ ತಿಂಗಳಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ನಿಶ್ಚಿತಾರ್ಥ ಮಾಡಿಕೊಂಡರು. ಆದರೆ ಒಂದೇ ಒಂದು ಫೋಟೋ ಕೂಡ ಹೊರಬರಲಿಲ್ಲ. ಆ ನಂತರ ‘ದಿ ಗರ್ಲ್​ಫ್ರೆಂಡ್’ ಸಿನಿಮಾದ ಸಕ್ಸಸ್ ಮೀಟ್​​ನಲ್ಲಿ ರಶ್ಮಿಕಾ ಕೈಗೆ ವಿಜಯ್ ದೇವರಕೊಂಡ ಕಿಸ್ ಮಾಡಿದರು. ಆ ಮೂಲಕ ಅವರು ಪರೋಕ್ಷವಾಗಿ ತಮ್ಮ ಎಂಗೇಜ್​​ಮೆಂಟ್ ವಿಷಯವನ್ನು ಒಪ್ಪಿಕೊಂಡಂತೆ ಆಗಿತ್ತು.

ಇದನ್ನೂ ಓದಿ: ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್

ಬಣ್ಣದ ಲೋಕದಲ್ಲಿ ಇಬ್ಬರಿಗೂ ಬೇಡಿಕೆ ಇದೆ. ಸಾಲು ಸಾಲು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ‘ರಣಬಾಲಿ’ ಸಿನಿಮಾದಲ್ಲಿ ಮತ್ತೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಒಟ್ಟಿಗೆ ಅಭಿನಯಿಸಲಿದ್ದಾರೆ. ಸದ್ಯಕ್ಕೆ ಮದುವೆ ಸಲುವಾಗಿ ಬ್ರೇಕ್ ಪಡೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.