ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿಜಯ್ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್
Vijay Deverakonda, Rashmika Mandanna

Updated on: Feb 22, 2026 | 8:06 AM

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ (Rashmika Mandanna Marriage) ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಡೆಯಲಿದೆ. ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಹಾಗಿದ್ದರೂ ಕೂಡ ಅವರು ಸಾರ್ವಜನಿಕವಾಗಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಕೇವಲ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬ್ರೇಕ್ ತೆಗೆದುಕೊಂಡಿದ್ದಾರೆ. ವಿಜಯ್ ದೇವರಕೊಂಡ ಕೂಡ ಮದುವೆ ಸಲುವಾಗಿ ಬಿಡುವು ಮಾಡಿಕೊಂಡಿದ್ದಾರೆ. ಅವರಿಬ್ಬರು ಈಗ ಹೈದರಾಬಾದ್​ನಿಂದ ಬೇರೆ ಕಡೆಗೆ ಹಾರಿದ್ದಾರೆ. ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಬಂದ ಅವರು ಪಾಪಪಾಜಿಗಳ ಕ್ಯಾಮೆರಾದಲ್ಲಿ ಸೆರೆ ಆಗಿದ್ದಾರೆ.

ಸಾಮಾನ್ಯವಾಗಿ ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳನ್ನು ನೋಡಿದಾಗ ರಶ್ಮಿಕಾ ಮಂದಣ್ಣ ಅವರು ಪೋಸ್ ನೀಡುತ್ತಾರೆ. ಸಾಧ್ಯವಾದರೆ ಒಂದೆರಡು ಮಾತನಾಡುತ್ತಾರೆ. ವಿಜಯ್ ದೇವರಕೊಂಡ ಕೂಡ ಹಾಗೆಯೇ ಮಾಡುತ್ತಾರೆ. ಆದರೆ ಈ ಬಾರಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ನೀಡಲು ಕೂಡ ಅವರು ಒಂದು ಕ್ಷಣ ನಿಂತಿಲ್ಲ. ಸಖತ್ ಗಡಿಬಿಡಿಯಲ್ಲಿ ಅವರು ಮುಂದೆ ಸಾಗಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ವಿವಾಹ ಆಗುತ್ತಿರೋ ಹೋಟೆಲ್​​ ಸಖತ್ ದುಬಾರಿ; ಇಲ್ಲಿದೆ ದರ ವಿವರ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇದೆ. ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಕೆಲಸ ಮಾಡಿದ್ದಾರೆ. ವಿಜಯ್ ದೇವರಕೊಂಡ ಕೂಡ ತೆಲುಗು ಮತ್ತು ಬಾಲಿವುಡ್​​ನಲ್ಲಿ ಫೇಮಸ್ ಆಗಿದ್ದಾರೆ. ಈ ಜೋಡಿಯ ಮದುವೆಗೆ ಯಾರೆಲ್ಲ ಬರುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us