‘ಡಿ51’ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ; ಧನುಶ್​ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯೋ ಖುಷಿ

ಈ ಮೊದಲು ಕಾರ್ತಿ ನಟನೆಯ ‘ಸುಲ್ತಾನ್​’, ದಳಪತಿ ವಿಜಯ್​ ನಟನೆಯ ‘ವಾರಿಸು’ ಸಿನಿಮಾಗಳಿಗೆ ರಶ್ಮಿಕಾ ಮಂದಣ್ಣ ಅವರು ಹೀರೋಯಿನ್​ ಆಗಿದ್ದರು. ಈಗ ‘ಡಿ 51’ ಮೂಲಕ ಅವರ ಖಾತೆಗೆ ಮತ್ತೊಂದು ತಮಿಳು ಸಿನಿಮಾ ಸೇರ್ಪಡೆ ಆದಂತಾಗಿದೆ. ಈ ಅವಕಾಶ ಪಡೆದಿರುವುದಕ್ಕೆ ಅವರಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ಡಿ51’ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ; ಧನುಶ್​ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯೋ ಖುಷಿ
ಧನುಶ್​, ರಶ್ಮಿಕಾ ಮಂದಣ್ಣ

Updated on: Aug 14, 2023 | 3:05 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಡೀ ಸೌತ್​ ಇಂಡಿಯಾದಲ್ಲಿ ಅವರದ್ದೇ ಹವಾ. ಅದರಲ್ಲೂ ತೆಲುಗು ಮತ್ತು ತಮಿಳಿನಲ್ಲಿ ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿದೆ. ಎಲ್ಲ ಟಾಪ್​ ನಟರ ಸಿನಿಮಾಗಳಿಗೆ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಸೇರ್ಪಡೆ ‘ಡಿ51’ ಸಿನಿಮಾ. ಧನುಶ್​ ನಟನೆಯ 51ನೇ ಸಿನಿಮಾವನ್ನು ‘ಡಿ 51’ (D 51 Movie) ಎಂದು ಕರೆಯಲಾಗುತ್ತಿದೆ. ಈ ಚಿತ್ರದಲ್ಲಿನ ನಾಯಕಿ ಪಾತ್ರಕ್ಕೆ ರಶ್ಮಿಕಾ ಆಯ್ಕೆ ಆಗಿದ್ದಾರೆ. ಈ ಖುಷಿಯ ಸಮಾಚಾರವನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಈ ಸುದ್ದಿ ಖುಷಿ ನೀಡಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ‘ಡಿ 51’ ಸಿನಿಮಾದಲ್ಲಿ ಧನುಶ್​ (Dhanush)​ ಅವರು ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರಿಗೆ ತೆಲುಗಿನಿಂದ ಆಫರ್​ ಬಂತು. ಬಳಿಕ ಕಾಲಿವುಡ್​ ಕೂಡ ಕೈ ಬೀಸಿ ಕರೆಯಿತು. ಈ ಮೊದಲು ಕಾರ್ತಿ ನಟನೆಯ ‘ಸುಲ್ತಾನ್​’, ದಳಪತಿ ವಿಜಯ್​ ನಟನೆಯ ‘ವಾರಿಸು’ ಸಿನಿಮಾಗಳಿಗೆ ರಶ್ಮಿಕಾ ಮಂದಣ್ಣ ಅವರು ಹೀರೋಯಿನ್​ ಆಗಿದ್ದರು. ಈಗ ‘ಡಿ 51’ ಮೂಲಕ ಅವರ ಖಾತೆಗೆ ಮತ್ತೊಂದು ತಮಿಳು ಸಿನಿಮಾ ಸೇರ್ಪಡೆ ಆದಂತಾಗಿದೆ.

ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಪೋಸ್ಟ್​:

ಧನುಶ್​ ಅವರು ಈಗ ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಬಳಿಕ ಅವರು 50ನೇ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತಾರೆ. ಆ ಬಳಿಕ ‘ಡಿ 51’ ಸಿನಿಮಾ ಸೆಟ್ಟೇರಲಿದೆ. ಆ ಸಿನಿಮಾಗೆ ಶೇಖರ್​ ಕಮ್ಮುಲ ಅವರು ನಿರ್ದೇಶನ ಮಾಡಲಿದ್ದಾರೆ. ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಶ್​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

ಇದನ್ನೂ ಓದಿ: ‘ಡಿಸೆಂಬರ್ ನನಗೆ ಲಕ್ಕಿ’; ತಿಂಗಳ ವಿಶೇಷತೆ ಬಗ್ಗೆ ಹೇಳಿಕೊಂಡ ರಶ್ಮಿಕಾ ಮಂದಣ್ಣ

ಬಾಲಿವುಡ್​ನಲ್ಲೂ ರಶ್ಮಿಕಾ ಮಂದಣ್ಣ ಅವರು ಬ್ಯುಸಿ ಆಗಿದ್ದಾರೆ. ರಣಬೀರ್​ ಕಪೂರ್​ ಜೊತೆ ಅವರು ನಟಿಸಿರುವ ‘ಅನಿಮಲ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಪ್ರಿವ್ಯೂ ವಿಡಿಯೋ ಸಖತ್​ ಗಮನ ಸೆಳೆದಿದೆ. ಡಿಸೆಂಬರ್ 1ರಂದು ಈ ಚಿತ್ರ ರಿಲೀಸ್​ ಆಗಲಿದೆ. ‘ಅನಿಮಲ್​’ ತೆರೆಕಂಡ ಬಳಿಕ ಬಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣ ಅವರ ಚಾರ್ಮ್​ ಇನ್ನಷ್ಟು ಹೆಚ್ಚಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us