ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್

ರಶ್ಮಿಕಾ ಮಂದಣ್ಣ ‘ಪುಷ್ಪ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ಗೆ ತೆರಳಿದ್ದಾರೆ. ವಿಜಯ್​ ದೇವರಕೊಂಡ ಕೂಡ ಅಲ್ಲಿಯೇ ಇದ್ದಾರೆ.

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 22, 2021 | 11:16 AM

ವಿಜಯ್​ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಬೆಸ್ಟ್ ಫ್ರೆಂಡ್ಸ್​​. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ಇವರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಇಬ್ಬರೂ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡ ಉದಾಹರಣೆ ಕೂಡ ಇದೆ. ಈಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಜಿಮ್​ನಲ್ಲಿ ಒಟ್ಟಿಗೆ ವರ್ಕೌಟ್​ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರಶ್ಮಿಕಾ ಮಂದಣ್ಣ ‘ಪುಷ್ಪ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ಗೆ ತೆರಳಿದ್ದಾರೆ. ವಿಜಯ್​ ದೇವರಕೊಂಡ ಕೂಡ ಅಲ್ಲಿಯೇ ಇದ್ದಾರೆ. ಹೀಗಾಗಿ, ಹೈದರಾಬಾದ್​ ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ್ದಾರೆ. ವರ್ಕೌಟ್​ ಮುಗಿದ ನಂತರದಲ್ಲಿ ಇಬ್ಬರೂ ಸೆಲ್ಫಿ ತೆಗೆದುಕೊಂಡಿದ್ದಾರೆ. ಸದ್ಯ, ಈ ಫಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

‘ಗೀತ ಗೋವಿಂದಂ’ ಸಿನಿಮಾ ರಿಲೀಸ್​ಗೂ ಮುನ್ನ ರಶ್ಮಿಕಾ ಹಾಗೂ ವಿಜಯ್​ ನಡುವೆ ಏನೋ ನಡೆಯುತ್ತಿದೆ ಎನ್ನುವ ಮಾತು ಹರಿದಾಡಿತ್ತು. ಆದರೆ, ನಾವು ಬೆಸ್ಟ್​ ಫ್ರೆಂಡ್ಸ್​ ಎನ್ನುವುದನ್ನು ಇಬ್ಬರೂ ಸ್ಪಷ್ಟಪಡಿಸಿದ್ದರು. ಈಗ ಇವರಿಬ್ಬರೂ ಪದೇಪದೇ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಮತ್ತೆ ಈ ಬಗ್ಗೆ ಗಾಸಿಪ್​ ಹರಿದಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆ ಕೂಡ ಆಗುತ್ತಿದೆ.

View this post on Instagram

A post shared by Kuldep Sethi (@kuldepsethi)

ಸಿನಿಮಾ ವಿಚಾರಕ್ಕೆ ಬರುವುದಾದರೆ ವಿಜಯ್​, ‘ಲೈಗರ್’​ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಪುರಿ ಜಗನ್ನಾಥ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಹಿಂದಿಯಲ್ಲಿ ಸಿದ್ಧಾರ್ಥ್​ ಮಲ್ಹೋತ್ರಾ ಅಭಿನಯದ ‘ಮಿಷನ್​ ಮಜ್ನು’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಮಿತಾಭ್​ ಮುಖ್ಯಭೂಮಿಕೆಯಲ್ಲಿರುವ ‘ಗುಡ್​ಬೈ’ನಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ತೆಲುಗಿನ ಪುಷ್ಪ ಚಿತ್ರದ ಶೂಟಿಂಗ್​ನಲ್ಲೂ ಅವರು ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ