AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ನಟನೆಯ ‘ಮೈಸಾ’ ಟೀಸರ್ ರಿಲೀಸ್; ನಟಿಯ ಮಾಸ್ ಅವತಾರಕ್ಕೆ ಫ್ಯಾನ್ಸ್ ಫಿದಾ

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ನಟನೆಯ ಮಹಿಳಾ ಪ್ರಧಾನ ‘ಮೈಸಾ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಗೋಂಡ್ ಬುಡಕಟ್ಟು ಮಹಿಳೆಯಾಗಿ ರಶ್ಮಿಕಾ ಅಬ್ಬರಿಸಿದ್ದು, ಬೈಕ್ ರೈಡಿಂಗ್ ಹಾಗೂ ನೀರೊಳಗಿನ ಅಪಾಯಕಾರಿ ಆ್ಯಕ್ಷನ್ ದೃಶ್ಯಗಳಲ್ಲಿ ಮಿಂಚಿದ್ದಾರೆ. ನವೆಂಬರ್ 27ಕ್ಕೆ ಈ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದೆ.

ರಶ್ಮಿಕಾ ಮಂದಣ್ಣ ನಟನೆಯ ‘ಮೈಸಾ’ ಟೀಸರ್ ರಿಲೀಸ್; ನಟಿಯ ಮಾಸ್ ಅವತಾರಕ್ಕೆ ಫ್ಯಾನ್ಸ್ ಫಿದಾ
ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 21, 2026 | 7:54 AM

Share

ಮುಖ್ಯಾಂಶಗಳು

  • ಗೋಂಡ್ ಬುಡಕಟ್ಟು ಹೆಣ್ಣಾಗಿ ರಶ್ಮಿಕಾ ಕಂಬ್ಯಾಕ್
  • ನೀರೊಳಗಿನ ಕಠಿಣ ಸಾಹಸ 
  • ನವೆಂಬರ್ 27ಕ್ಕೆ 'ಮೈಸಾ' ಗ್ರ್ಯಾಂಡ್ ರಿಲೀಸ್

ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಭಾರತೀಯ ಚಿತ್ರರಂಗದ ಪ್ರಮುಖ ನಟಿಯಾಗಿ ಬೆಳೆದಿರುವ ಅವರು, ಈಗ ‘ಮೈಸಾ’ ಎಂಬ ಮಹಿಳಾ ಪ್ರಧಾನ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದ್ದಾರೆ. ಈ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ. ರಶ್ಮಿಕಾ ಈ ಸಾಹಸಮಯ ಪಾತ್ರವನ್ನು ಏಕೆ ಒಪ್ಪಿಕೊಂಡರು ಎಂಬ ಪ್ರಶ್ನೆಗೆ ಟೀಸರ್‌ನಲ್ಲಿ ಉತ್ತರ ಸಿಕ್ಕಿದೆ.

ಚಿತ್ರದಲ್ಲಿ ರಶ್ಮಿಕಾ ‘ಮೈಸಾ’ ಎನ್ನುವ ಗೋಂಡ್ ಬುಡಕಟ್ಟು ಮಹಿಳೆಯಾಗಿ ಅಭಿನಯಿಸಿದ್ದಾರೆ. ಸಮಾಜದ ಕಷ್ಟಗಳು ಮತ್ತು ಅಡೆತಡೆಗಳನ್ನು ಎದುರಿಸುವ ನಾಯಕಿ, ಎಂದಿಗೂ ಮಂಡಿಯೂರುವುದಿಲ್ಲ. ತನ್ನ ಹಕ್ಕಿಗಾಗಿ ರಣಕಹಳೆ ಮೊಳಗಿಸುವ ಆಕೆ, ಶತ್ರುಗಳ ವಿರುದ್ಧ ಸಮರ ಸಾರುತ್ತಾಳೆ. ಈ ಹೋರಾಟದ ಪಯಣವೇ ಸಿನಿಮಾದ ಮುಖ್ಯ ಕಥಾವಸ್ತು.

ಈ ವಿಭಿನ್ನ ಪಾತ್ರಕ್ಕಾಗಿ ರಶ್ಮಿಕಾ ಕಠಿಣ ಸಿದ್ಧತೆ ಮಾಡಿಕೊಂಡಿದ್ದಾರೆ. ಆ್ಯಕ್ಷನ್ ದೃಶ್ಯಗಳಲ್ಲಿ ಅವರ ಕಟ್ಟುಮಸ್ತಾದ ದೇಹದಂಡನೆ ಎದ್ದು ಕಾಣುತ್ತದೆ. ಟೀಸರ್‌ನಲ್ಲಿ ಬೈಕ್ ರೈಡಿಂಗ್ ಹಾಗೂ ನೀರೊಳಗಿನ ಸಾಹಸ ದೃಶ್ಯಗಳು ಗಮನ ಸೆಳೆಯುತ್ತವೆ. ರಶ್ಮಿಕಾ ಅವರ ಈ ರಗಡ್ ಅವತಾರ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ.

ಇದನ್ನೂ ಓದಿ: ಎಂಎಸ್ ಸುಬ್ಬಲಕ್ಷ್ಮಿಯಾಗಿ ರಶ್ಮಿಕಾ ಮಂದಣ್ಣ, ರಾಕ್​ಲೈನ್ ವೆಂಕಟೇಶ್ ನಿರ್ಮಾಣ

ತಾಂತ್ರಿಕವಾಗಿಯೂ ಈ ಸಿನಿಮಾ ಅತ್ಯಂತ ಶ್ರೀಮಂತವಾಗಿ ಮೂಡಿಬಂದಿದೆ. ನಿರ್ದೇಶಕ ರವೀಂದ್ರ ಪುಲ್ಲೆ ಅವರ ಕಲ್ಪನೆಗೆ ಶ್ರೇಯಾಸ್ ಪಿ. ಕೃಷ್ಣ ಅವರ ಛಾಯಾಗ್ರಹಣ ಅದ್ಭುತ ಮೆರುಗು ನೀಡಿದೆ. ಜೇಕ್ಸ್ ಬಿಜಾಯ್ ಅವರ ಹಿನ್ನೆಲೆ ಸಂಗೀತ ಸಸ್ಪೆನ್ಸ್ ವಾತಾವರಣವನ್ನು ಹೆಚ್ಚಿಸಿದೆ. ‘ಅನ್‌ಫಾರ್ಮುಲಾ ಫಿಲ್ಮ್ಸ್’ ಸಂಸ್ಥೆಯ ನಿರ್ಮಾಣ ಮೌಲ್ಯ ಹೈಲೈಟ್ ಆಗಿದೆ.

ಈ ಬಹುನಿರೀಕ್ಷಿತ ‘ಮೈಸಾ’ ಸಿನಿಮಾ ನವೆಂಬರ್ 27ರಂದು ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಟೀಸರ್‌ನಲ್ಲಿರುವ ಮಾಸ್ ಹಾಗೂ ಆ್ಯಕ್ಷನ್ ದೃಶ್ಯಗಳು ಸಿನಿಮಾದ ಮೇಲಿನ ನಿರೀಕ್ಷೆಯನ್ನು ದ್ವಿಗುಣಗೊಳಿಸಿವೆ. ರಶ್ಮಿಕಾ ಅವರ ಕೆರಿಯರ್‌ನಲ್ಲಿ ಈ ಚಿತ್ರ ಹೊಸ ಮೈಲಿಗಲ್ಲು ಸೃಷ್ಟಿಸುವ ಸೂಚನೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು