AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ಬಳಿಕ ಬ್ರೇಕ್​​ಲೆಸ್ ಆಗಿ ಶೂಟ್ ಮಾಡಿದ ರಶ್ಮಿಕಾ; ಬಿಗ್ ಅಪ್​​ಡೇಟ್

ಮದುವೆಯಾದ ನಂತರವೂ ಯಾವುದೇ ವಿರಾಮವಿಲ್ಲದೆ, ರಶ್ಮಿಕಾ ಮಂದಣ್ಣ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಅವರ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ 'ಮೈಸಾ' ಚಿತ್ರದ 5ನೇ ಶೆಡ್ಯೂಲ್ ಯಶಸ್ವಿಯಾಗಿ ಮುಗಿದಿದ್ದು, ಚಿತ್ರತಂಡ ಶೀಘ್ರದಲ್ಲೇ ಟೀಸರ್ ಬಿಡುಗಡೆಗೆ ಸಜ್ಜಾಗಿದೆ. ಬುಡಕಟ್ಟು ಜನಾಂಗದ ಹಿನ್ನೆಲೆಯ ಹೈ-ವೋಲ್ಟೇಜ್ ಆಕ್ಷನ್ ಡ್ರಾಮಾ ಇದಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ವಿವಾಹದ ಬಳಿಕ ಬ್ರೇಕ್​​ಲೆಸ್ ಆಗಿ ಶೂಟ್ ಮಾಡಿದ ರಶ್ಮಿಕಾ; ಬಿಗ್ ಅಪ್​​ಡೇಟ್
ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 10, 2026 | 11:06 AM

Share

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿಹಿ ಸುದ್ದಿ ಸಿಗುತ್ತಿದೆ. ಇತ್ತೀಚೆಗಷ್ಟೇ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟಿದ್ದ ಕೊಡಗಿನ ಬೆಡಗಿ, ಮದುವೆಯ ನಂತರವೂ ಯಾವುದೇ ಬ್ರೇಕ್ ತೆಗೆದುಕೊಳ್ಳದೆ ಸಖತ್ ಸ್ಪೀಡ್ ಆಗಿ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯ ಸಂಭ್ರಮ ಮುಗಿಯುತ್ತಿದ್ದಂತೆ ಮಗದೊಮ್ಮೆ ಕ್ಯಾಮೆರಾ ಮುಂದೆ ನಿಂತಿರುವ ರಶ್ಮಿಕಾ, ತಮ್ಮ ಬಹುನಿರೀಕ್ಷಿತ ಸಿನಿಮಾದ ಶೂಟಿಂಗ್ ಅನ್ನು ವೇಗವಾಗಿ ಮುಗಿಸುತ್ತಿದ್ದಾರೆ.

ಖ್ಯಾತ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಬಯೋಪಿಕ್‌ನಲ್ಲಿ ರಶ್ಮಿಕಾ ನಟಿಸಲಿದ್ದಾರೆ ಎಂಬ ಬಿಸಿಬಿಸಿ ಸುದ್ದಿಯ ನಡುವೆಯೇ, ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪ್ಯಾನ್ ಇಂಡಿಯಾ ಬಿಗ್ ಪ್ರಾಜೆಕ್ಟ್ ‘ಮೈಸಾ’ ಚಿತ್ರದ ಕೆಲಸಗಳು ಸದ್ದಿಲ್ಲದೆ ಭರದಿಂದ ಸಾಗುತ್ತಿವೆ. ಇದೊಂದು ಬುಡಕಟ್ಟು ಜನಾಂಗದ ಹಿನ್ನೆಲೆಯುಳ್ಳ ಹೈ-ವೋಲ್ಟೇಜ್ ಆಕ್ಷನ್ ಡ್ರಾಮಾ ಸಿನಿಮಾವಾಗಿದ್ದು, ಚಿತ್ರದ 5ನೇ ಹಂತದ ಶೂಟಿಂಗ್ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

ಸಾಮಾನ್ಯವಾಗಿ ನಟಿಯರು ಮದುವೆಯ ನಂತರ ಸಿನಿಮಾಗಳಿಂದ ಕೊಂಚ ಬ್ರೇಕ್ ಪಡೆಯುತ್ತಾರೆ. ಆದರೆ ರಶ್ಮಿಕಾ ಮಾತ್ರ ಮದುವೆಯ ಬೆನ್ನಲ್ಲೇ ದುಪ್ಪಟ್ಟು ಉತ್ಸಾಹದಿಂದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದು, ‘ಮೈಸಾ’ ಚಿತ್ರದ ಹೊಸ ಶೆಡ್ಯೂಲ್ ಮುಗಿಸಿ ಮುನ್ನುಗ್ಗುತ್ತಿದ್ದಾರೆ.

ಇದನ್ನೂ ಓದಿ: ಸ್ಟಾರ್ ನಟಿಗೆ ಫಿಕ್ಸ್ ಆಗಿದ್ದ ಪ್ರಮುಖ ಸಿನಿಮಾ ಈಗ ರಶ್ಮಿಕಾ ಮಂದಣ್ಣ ಕೈಗೆ

ಚಿತ್ರದ 5ನೇ ಶೆಡ್ಯೂಲ್ ಕಂಪ್ಲೀಟ್ ಆಗಿರುವ ಖುಷಿಯ ಬೆನ್ನಲ್ಲೇ ಚಿತ್ರದ ನಿರ್ಮಾಪಕ ಅಜಯ್ ಸಾಯಿಪುರೆಡ್ಡಿ ಅಭಿಮಾನಿಗಳಿಗೆ ಮತ್ತೊಂದು ಬಿಗ್ ಅಪ್‌ಡೇಟ್ ನೀಡಿದ್ದಾರೆ. ಸದ್ಯದಲ್ಲೇ ಚಿತ್ರದ ಅಧಿಕೃತ ಟೀಸರ್ ಅನ್ನು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗುತ್ತಿದೆಯಂತೆ. ಮದುವೆಯ ನಂತರ ರಶ್ಮಿಕಾ ಅವರ ಮೊದಲ ಪ್ಯಾನ್ ಇಂಡಿಯಾ ಅಪ್‌ಡೇಟ್ ಇದಾಗಿರುವುದರಿಂದ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಹೈ ಬಜೆಟ್‌ನಲ್ಲಿ ‘ಮೈಸಾ’ ಉದಯ ನವನಿರ್ದೇಶಕ ರವೀಂದ್ರ ಪುಲ್ಲೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ‘ಅನ್‌ಫಾರ್ಮುಲಾ ಫಿಲ್ಮ್ಸ್’ ಸಂಸ್ಥೆ ಅತ್ಯಂತ ಬೃಹತ್ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ. ಚಿತ್ರಕ್ಕೆ ಜೇಕ್ಸ್ ಬಿಜಾಯ್ ಸಂಗೀತ ನೀಡುತ್ತಿದ್ದಾರೆ. ವಿಶೇಷವೆಂದರೆ, ಕನ್ನಡದ ಪ್ರತಿಭಾವಂತ ನಟ ತಾರಕ್ ಪೊನ್ನಪ್ಪ ಈ ಚಿತ್ರದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:05 am, Wed, 10 June 26

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ