Rashmika Mandanna: ಒಂದೇ ದಿನ ಬಿಡುಗಡೆ ಆಗುತ್ತಿದೆ ರಶ್ಮಿಕಾ ಮಂದಣ್ಣರ ಎರಡು ಸಿನಿಮಾ

Rashmika Mandanna: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಟಿಸಿರುವ ಎರಡು ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿವೆ. ಆ ಎರಡು ಸಿನಿಮಾಗಳು ಯಾವುವು? ಯಾವ ದಿನ ಬಿಡುಗಡೆ ಆಗಲಿವೆ?

Rashmika Mandanna: ಒಂದೇ ದಿನ ಬಿಡುಗಡೆ ಆಗುತ್ತಿದೆ ರಶ್ಮಿಕಾ ಮಂದಣ್ಣರ ಎರಡು ಸಿನಿಮಾ
Follow us
ಮಂಜುನಾಥ ಸಿ.
|

Updated on: Aug 21, 2024 | 1:03 PM

ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಅಭಿನಯ ಆರಂಭಿಸಿ ಬಳಿಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಅಲ್ಲಿಯೂ ತಮ್ಮ ಅಭಿನಯ ಹಾಗೂ ಸೌಂದರ್ಯದಿಂದ ಟಾಪ್ ನಟಿಯಾದ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್​ನಲ್ಲಿಯೂ ತಮ್ಮ ಹವಾ ಎಬ್ಬಿಸಿದ್ದಾರೆ. ರಶ್ಮಿಕಾ ಮಂದಣ್ಣ ಅದೆಷ್ಟು ಬ್ಯುಸಿ ನಟಿಯಾಗಿದ್ದಾರೆಂದರೆ ಅವರ ನಟನೆಯ ಎರಡೆರಡು ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿವೆ. ರಶ್ಮಿಕಾ ಮಂದಣ್ಣರ ಸಿನಿಮಾಕ್ಕೆ ಅವರ ಸಿನಿಮಾವೇ ಪ್ರತಿಸ್ಪರ್ಧಿ ಆಗಿದೆ.

ರಶ್ಮಿಕಾ ಮಂದಣ್ಣ ನಟನೆಯ ಎರಡು ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗಲಿಕ್ಕಿವೆ. ರಶ್ಮಿಕಾ ನಟಿಸಿರುವ ತೆಲುಗಿನ ಬಹುನಿರೀಕ್ಷಿತ ದೊಡ್ಡ ಬಜೆಟ್ ಸಿನಿಮಾ ‘ಪುಷ್ಪ 2’ ಸಿನಿಮಾ ಆಗಸ್ಟ್ 15 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ತಡವಾದ ಕಾರಣ ಸಿನಿಮಾ ಈಗ ಡಿಸೆಂಬರ್ 6ಕ್ಕೆ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಇದೇ ದಿನ ರಶ್ಮಿಕಾ ಮಂದಣ್ಣ ನಟಿಸಿರುವ ಮತ್ತೊಂದು ಪ್ರಮುಖ ಸಿನಿಮಾ ಬಿಡುಗಡೆ ಆಗಲಿದೆ.

ರಶ್ಮಿಕಾ ಮಂದಣ್ಣ ಹಿಂದಿಯ ‘ಚಾವಾ’ ಸಿನಿಮಾದಲ್ಲಿ ನಟಿಸಿದ್ದು ಆ ಸಿನಿಮಾ ಸಹ ಡಿಸೆಂಬರ್ 6ಕ್ಕೆ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಬಾಲಿವುಡ್​ ನಟ ವಿಕ್ಕಿ ಕೌಶಲ್ ಎದುರು ನಾಯಕಿಯಾಗಿ ನಟಿಸಿದ್ದಾರೆ. ‘ಚಾವಾ’ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಚಾಲ್ತಿಯಲ್ಲಿದೆ. ಚಿತ್ರತಂಡ ಇತ್ತೀಚೆಗಷ್ಟೆ ಬಿಡುಗಡೆ ದಿನಾಂಕ ಘೋಷಿಸಿದ್ದು, ಡಿಸೆಂಬರ್ 06ಕ್ಕೆ ಈ ಸಿನಿಮಾ ತೆರೆಗೆ ಬರಲಿದೆ.

ಇದನ್ನೂ ಓದಿ:ಒಂದೇ ದಿನ ರಿಲೀಸ್ ಆಗಲಿವೆ ರಶ್ಮಿಕಾ ಮಂದಣ್ಣ ನಟನೆಯ 2 ಬಹುನಿರೀಕ್ಷಿತ ಸಿನಿಮಾಗಳು

‘ಪುಷ್ಪ 2’ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ತೆಲುಗು, ತಮಿಳು, ಮಲಯಾಳಂ, ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲದಲ್ಲಿ ಸಿನಿಮಾ ತೆರೆಗೆ ಬರಲಿದೆ. ಆದರೆ ‘ಚಾವಾ’ ಸಿನಿಮಾ ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ತೆರೆಗೆ ಬರಲಿದೆ. ಆದರೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಏಕಕಾಲಕ್ಕೆ ‘ಪುಷ್ಪ 2’ ಹಿಂದಿ ಆವೃತ್ತಿ ಹಾಗೂ ‘ಚಾವಾ’ ಸಿನಿಮಾ ಒಟ್ಟೊಟ್ಟಿಗೆ ಪ್ರದರ್ಶನ ಕಾಣಲಿವೆ. ರಶ್ಮಿಕಾ ಅಭಿಮಾನಿಗಳಿಗಂತೂ ಡಿಸೆಂಬರ್ 6 ಹಬ್ಬವೇ ಆಗಲಿದೆ.

ರಶ್ಮಿಕಾ, ವಿಕ್ಕಿ ಕೌಶಲ್ ನಟಿಸಿರುವ ‘ಚಾವಾ’ ಸಿನಿಮಾ ಛತ್ರಪತಿ ಸಾಂಬಾಜಿ ಮಹಾರಾಜ್ ಕುರಿತ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ರಶ್ಮಿಕಾ, ಯಸುಭಾಯಿ ಬೊನ್ಸಾಲೆ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ರಶ್ಮಿಕಾ ಪಾಲಿಗೆ ಮೊದಲ ಪೀರಿಯಾಡಿಕ್ ಸಿನಿಮಾ ಆಗಿರಲಿದೆ. ಸಿನಿಮಾವನ್ನು ಲಕ್ಷ್ಮಣ್ ಉಟೇಕರ್ ನಿರ್ದೇಶನ ಮಾಡಿದ್ದು, ನಿರ್ಮಾಣ ಮಾಡಿರುವುದು ದಿನೇಶ್ ವಿಜನ್. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಇನ್ನು ‘ಪುಷ್ಪ 2’ ನಲ್ಲಿ ಅಲ್ಲು ಅರ್ಜುನ್, ಡಾಲಿ ಧನಂಜಯ್, ಫಹಾದ್ ಫಾಸಿಲ್ ಅವರುಗಳು ನಟಿಸಿದ್ದು, ಸಿನಿಮಾವನ್ನು ಸುಕುಮಾರ್ ನಿರ್ದೇಶಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್