AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜೊತೆ ಸಿನಿಮಾ ಮಾಡಿ ಕೋಟಿ ಕೋಟಿ ಕೈ ಸುಟ್ಟುಕೊಂಡ ನಿರ್ಮಾಪಕ?

ರಶ್ಮಿಕಾ ಮಂದಣ್ಣ ಅವರ 'ದಿ ಗರ್ಲ್ ಫ್ರೆಂಡ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆ ಹುಸಿ ಮಾಡಿದೆ. 40 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಚಿತ್ರ ಕೇವಲ 7 ಕೋಟಿ ರೂ. ಕಲೆಕ್ಷನ್ ಮಾಡಿದೆ. ಮೊದಲ ಬಾರಿಗೆ ದೊಡ್ಡ ಹೀರೋ ಇಲ್ಲದೆ ನಟಿಸಿರುವ ರಶ್ಮಿಕಾ ಅವರಿಗೆ ಇದು ದೊಡ್ಡ ಸವಾಲಾಗಿದೆ. ಈ ಚಿತ್ರ ನಿರ್ಮಾಪಕರಿಗೆ ಭಾರೀ ನಷ್ಟ ತರುವ ಭೀತಿ ಮೂಡಿಸಿದೆ.

ರಶ್ಮಿಕಾ ಜೊತೆ ಸಿನಿಮಾ ಮಾಡಿ ಕೋಟಿ ಕೋಟಿ ಕೈ ಸುಟ್ಟುಕೊಂಡ ನಿರ್ಮಾಪಕ?
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Nov 10, 2025 | 12:51 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಓಡುವ ಕುದುರೆ. ಅವರು ಯಾವುದೇ ಸಿನಿಮಾ ಮಾಡಿದರೂ ಅದು ಗೆಲ್ಲುತ್ತದೆ ಎಂಬ ನಂಬಿಕೆ ನಿರ್ಮಾಪಕರದ್ದು. ಆದರೆ, ಇತ್ತೀಚೆಗೆ ರಿಲೀಸ್ ಆದ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಈ ನಂಬಿಕೆಯನ್ನು ಸುಳ್ಳು ಮಾಡಿತೇ ಎಂಬ ಪ್ರಶ್ನೆ ಹುಟ್ಟುಹಾಕುವಂತೆ ಮಾಡಿದೆ. ರಶ್ಮಿಕಾ ಸಿನಿಮಾಗೆ ಕೋಟಿ ಕೋಟಿ ಬಂಡವಾಳ ಹೂಡಿ ನಿರ್ಮಾಪಕರು ಕೈ ಸುಟ್ಟುಕೊಂಡರೇ ಎಂಬ ಪ್ರಶ್ನೆ ಮೂಡಿದೆ.

ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅವರು ‘ದಿ ಗರ್ಲ್​ಫ್ರೆಂಡ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಕಳೆದ ಶುಕ್ರವಾರ (ನವೆಂಬರ್ 7) ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಮೊದಲ ದಿನ ಕಲೆಕ್ಷನ್ ಮಾಡಿದ್ದು ಕೇವಲ 1.30 ಕೋಟಿ ರೂಪಾಯಿ. ಎರಡನೇ ದಿನ 2.5 ಕೋಟಿ ರೂಪಾಯಿ ಹಾಗೂ ಮೂರನೇ ದಿನ 3.1 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 7 ಕೋಟಿ ರೂಪಾಯಿ ಸಮೀಪಿಸಿದೆ. ಆದರೆ, ಇದರಿಂದ ನಿರ್ಮಾಪಕರು ಲಾಭ ಕಾಣೋದಿಲ್ಲ.

ಕೆಲವು ವರದಿಗಳ ಪ್ರಕಾರ ಈ ಚಿತ್ರದ ಬಜೆಟ್ 40 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾದಿಂದ ನಿರ್ಮಾಪಕರು ಲಾಭ ಕಾಣಬೇಕು ಎಂದರೆ ಸಿನಿಮಾ ಭಾರತದಲ್ಲಿ ಕನಿಷ್ಠ 80 ಕೋಟಿ ರೂಪಾಯಿ ಕಲೆಕ್ಷನ್ ದಾಟಬೇಕು. 80 ಕೋಟಿ ರೂಪಾಯಿ ಅಲ್ಲಿ ತೆರಿಗೆ, ಚಿತ್ರಮಂದಿರದವರ ಷೇರನ್ನು ತೆಗೆದರೆ ನಿರ್ಮಾಪಕರಿಗೆ ಹಾಕಿದ ಬಂಡವಾಳ ಬರುತ್ತದೆ.

ರಶ್ಮಿಕಾ ಮಂದಣ್ಣ ಫ್ಯಾನ್ಸ್ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾದ ಒಟ್ಟಾರೆ ಕಲೆಕ್ಷನ್ 20 ಕೋಟಿ ರೂಪಾಯಿ ದಾಟುವುದು ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ, ವಾರದ ದಿನಗಳಲ್ಲಿ  ಸಿನಿಮಾದ ಕಲೆಕ್ಷನ್ ಪಾತಾಳಕ್ಕೆ ಕುಸಿಯೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ನಾನು ವಿಜಯ್​ನ ಮದುವೆ ಆಗ್ತೀನಿ’; ಕೊನೆಗೂ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಇಷ್ಟು ದಿನ ಸ್ಟಾರ್ ಹೀರೋಗಳ ಜೊತೆ ನಟಿಸಿ ಗೆದ್ದಿದ್ದಾರೆ. ಇದೇ ಮೊದಲ ಬಾರಿಗೆ ತಾವಷ್ಟೇ ಹೈಲೈಟ್ ಆಗುವ ಸಿನಿಮಾ ಮಾಡಿದ್ದಾರೆ. ಈ ಚಿತ್ರದಿಂದ ಗೆಲುವು ಕಾಣಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ