
ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಓಡುವ ಕುದುರೆ. ಅವರು ಯಾವುದೇ ಸಿನಿಮಾ ಮಾಡಿದರೂ ಅದು ಗೆಲ್ಲುತ್ತದೆ ಎಂಬ ನಂಬಿಕೆ ನಿರ್ಮಾಪಕರದ್ದು. ಆದರೆ, ಇತ್ತೀಚೆಗೆ ರಿಲೀಸ್ ಆದ ‘ದಿ ಗರ್ಲ್ಫ್ರೆಂಡ್’ ಸಿನಿಮಾ ಈ ನಂಬಿಕೆಯನ್ನು ಸುಳ್ಳು ಮಾಡಿತೇ ಎಂಬ ಪ್ರಶ್ನೆ ಹುಟ್ಟುಹಾಕುವಂತೆ ಮಾಡಿದೆ. ರಶ್ಮಿಕಾ ಸಿನಿಮಾಗೆ ಕೋಟಿ ಕೋಟಿ ಬಂಡವಾಳ ಹೂಡಿ ನಿರ್ಮಾಪಕರು ಕೈ ಸುಟ್ಟುಕೊಂಡರೇ ಎಂಬ ಪ್ರಶ್ನೆ ಮೂಡಿದೆ.
ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅವರು ‘ದಿ ಗರ್ಲ್ಫ್ರೆಂಡ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಕಳೆದ ಶುಕ್ರವಾರ (ನವೆಂಬರ್ 7) ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಮೊದಲ ದಿನ ಕಲೆಕ್ಷನ್ ಮಾಡಿದ್ದು ಕೇವಲ 1.30 ಕೋಟಿ ರೂಪಾಯಿ. ಎರಡನೇ ದಿನ 2.5 ಕೋಟಿ ರೂಪಾಯಿ ಹಾಗೂ ಮೂರನೇ ದಿನ 3.1 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 7 ಕೋಟಿ ರೂಪಾಯಿ ಸಮೀಪಿಸಿದೆ. ಆದರೆ, ಇದರಿಂದ ನಿರ್ಮಾಪಕರು ಲಾಭ ಕಾಣೋದಿಲ್ಲ.
ಕೆಲವು ವರದಿಗಳ ಪ್ರಕಾರ ಈ ಚಿತ್ರದ ಬಜೆಟ್ 40 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾದಿಂದ ನಿರ್ಮಾಪಕರು ಲಾಭ ಕಾಣಬೇಕು ಎಂದರೆ ಸಿನಿಮಾ ಭಾರತದಲ್ಲಿ ಕನಿಷ್ಠ 80 ಕೋಟಿ ರೂಪಾಯಿ ಕಲೆಕ್ಷನ್ ದಾಟಬೇಕು. 80 ಕೋಟಿ ರೂಪಾಯಿ ಅಲ್ಲಿ ತೆರಿಗೆ, ಚಿತ್ರಮಂದಿರದವರ ಷೇರನ್ನು ತೆಗೆದರೆ ನಿರ್ಮಾಪಕರಿಗೆ ಹಾಕಿದ ಬಂಡವಾಳ ಬರುತ್ತದೆ.
ರಶ್ಮಿಕಾ ಮಂದಣ್ಣ ಫ್ಯಾನ್ಸ್ ‘ದಿ ಗರ್ಲ್ಫ್ರೆಂಡ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾದ ಒಟ್ಟಾರೆ ಕಲೆಕ್ಷನ್ 20 ಕೋಟಿ ರೂಪಾಯಿ ದಾಟುವುದು ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ, ವಾರದ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ಪಾತಾಳಕ್ಕೆ ಕುಸಿಯೋ ಸಾಧ್ಯತೆ ಇದೆ.
ಇದನ್ನೂ ಓದಿ: ‘ನಾನು ವಿಜಯ್ನ ಮದುವೆ ಆಗ್ತೀನಿ’; ಕೊನೆಗೂ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಅವರು ಇಷ್ಟು ದಿನ ಸ್ಟಾರ್ ಹೀರೋಗಳ ಜೊತೆ ನಟಿಸಿ ಗೆದ್ದಿದ್ದಾರೆ. ಇದೇ ಮೊದಲ ಬಾರಿಗೆ ತಾವಷ್ಟೇ ಹೈಲೈಟ್ ಆಗುವ ಸಿನಿಮಾ ಮಾಡಿದ್ದಾರೆ. ಈ ಚಿತ್ರದಿಂದ ಗೆಲುವು ಕಾಣಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.