ರಶ್ಮಿಕಾ ನಟನೆಯ ‘ದಿ ಗರ್ಲ್‌ಫ್ರೆಂಡ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ
ರಾಷ್ಟ್ರೀಯ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ 'ದಿ ಗರ್ಲ್‌ಫ್ರೆಂಡ್' ಚಿತ್ರವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರ ಈಗ ಒಟಿಟಿಗೆ ಬರುತ್ತಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಈ ಚಿತ್ರ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಲಭ್ಯವಿರಲಿದೆ. ರಾಹುಲ್ ರವೀಂದ್ರನ್ ನಿರ್ದೇಶನದ ಈ ಮಹಿಳಾ ಪ್ರಧಾನ ಸಿನಿಮಾ ಟಾಕ್ಸಿಕ್ ಸಂಬಂಧಗಳ ಕುರಿತಾಗಿತ್ತು.

ರಾಷ್ಟ್ರೀಯ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಸತತ ಸೂಪರ್ ಹಿಟ್ ಸಿನಿಮಾಗಳ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಸ್ಟಾರ್ ಹೀರೋ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಮಹಿಳಾ ಪ್ರಧಾನ ಸಿನಿಮಾಗಳ ಮೂಲಕವೂ ಗಮನ ಸೆಳೆಯುತ್ತಿದ್ದಾರೆ. ರಶ್ಮಿಕಾ ಅವರ ಇತ್ತೀಚಿನ ಮಹಿಳಾ ಪ್ರಧಾನ ಸಿನಿಮಾ ‘ದಿ ಗರ್ಲ್‌ಫ್ರೆಂಡ್’ ಗಮನ ಸೆಳೆಯಿತು. ನಿರ್ದೇಶಕ ರಾಹುಲ್ ರವೀಂದ್ರನ್ ಈ ಮಹಿಳಾ ಪ್ರಧಾನ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ದೀಕ್ಷಿತ್ ಶೆಟ್ಟಿ ರಶ್ಮಿಕಾ ಅವರ ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾ ಈಗ ಒಟಿಟಿಗೆ ಬರಲು ರೆಡಿ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.
ನವೆಂಬರ್ 07 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ದಿ ಗರ್ಲ್‌ಫ್ರೆಂಡ್’ ಚಿತ್ರ ಸೂಪರ್ ಹಿಟ್ ಆಯಿತು. ನಿರೀಕ್ಷೆಗೂ ಮೀರಿ ಕಲೆಕ್ಷನ್ ಮಾಡಿತು. ಸೀಮಿತ ಬಜೆಟ್‌ನಲ್ಲಿ ನಿರ್ಮಿಸಲಾದ ಇದು ರೂ. 28 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಟಾಕ್ಸಿಕ್ ಬಾಯ್ಫ್ರೆಂಡ್ ಹೊಂದಿದ್ದರೆ ಹುಡುಗಿಯರು ವೈಯ ಜೀವನದಲ್ಲಿ ಮತ್ತು ವೃತ್ತಿಪರವಾಗಿ ಹೇಗೆ ತೊಂದರೆಗೊಳಗಾಗುತ್ತಾರೆ ಎಂಬುದನ್ನು ನಿರ್ದೇಶಕ ರಾಹುಲ್ ರವೀಂದ್ರನ್ ಈ ಚಿತ್ರದಲ್ಲಿ ತೋರಿಸಿದ್ದಾರೆ. ‘ದಿ ಗರ್ಲ್‌ಫ್ರೆಂಡ್’ ಚಿತ್ರವನ್ನು ಅನೇಕರಿಗೆ ಇಷ್ಟ ಆಗಿದ್ದು ಇದೇ ಕಾರಣಕ್ಕೆ.
ಚಿತ್ರಮಂದಿರಗಳಲ್ಲಿ ಸೂಪರ್ ಹಿಟ್ ಆಗಿದ್ದ ‘ದಿ ಗರ್ಲ್‌ಫ್ರೆಂಡ್’ ಚಿತ್ರ ಈಗ ಒಟಿಟಿಗೆ ಬರುತ್ತಿದೆ. ಈ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪ್ರಮುಖ ಒಟಿಟಿ ಕಂಪನಿ ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ರಶ್ಮಿಕಾ ಅವರ ಸಿನಿಮಾದ ಸ್ಟ್ರೀಮಿಂಗ್ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ.
Meet Bhooma Devi, 𝚃̶𝚑̶𝚎̶ ̶𝙶̶𝚒̶𝚛̶𝚕̶𝚏̶𝚛̶𝚒̶𝚎̶𝚗̶𝚍̶ MA Literature 🙂 ❤️ pic.twitter.com/0gNg7aMPW4
— Netflix India South (@Netflix_INSouth) November 30, 2025
ಡಿಸೆಂಬರ್ 05 ರಿಂದ ‘ದಿ ಗರ್ಲ್‌ಫ್ರೆಂಡ್’ ಚಿತ್ರವನ್ನು ಒಟಿಟಿ ಸ್ಟ್ರೀಮಿಂಗ್‌ಗೆ ತರಲಾಗುವುದು ಎಂದು ನೆಟ್‌ಫ್ಲಿಕ್ಸ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ. ತೆಲುಗು ಜೊತೆಗೆ, ಈ ಚಿತ್ರ ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಲಭ್ಯವಿರುತ್ತದೆ. ಥಿಯೇಟರ್ ಅಲ್ಲಿ ಬಿಡುಗಡೆ ಆಗಿ ಒಂದು ತಿಂಗಳು ಮೊದಲೇ ‘ದಿ ಗರ್ಲ್‌ಫ್ರೆಂಡ್’ ಒಟಿಟಿಗೆ ಬರುತ್ತಿರುವುದು ವಿಶೇಷ.
ಇದನ್ನೂ ಓದಿ: ಎಲ್ಲರ ಎದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಟ್ಟ ವಿಜಯ್ ದೇವರಕೊಂಡ; ವಿಡಿಯೋ ನೋಡಿ
‘ದಿ ಗರ್ಲ್‌ಫ್ರೆಂಡ್’ ಚಿತ್ರವನ್ನು ಗೀತಾ ಆರ್ಟ್ಸ್ ಮುಖ್ಯಸ್ಥ ಅಲ್ಲು ಅರವಿಂದ್ ಪ್ರಸ್ತುತಪಡಿಸಿದರು ಮತ್ತು ಧೀರಜ್ ಮೊಗಿಲಿನೇನಿ ಮತ್ತು ವಿದ್ಯಾ ಕೊಪ್ಪಿನೀಡಿ ನಿರ್ಮಿಸಿದರು. ಅನು ಎಮ್ಯಾನುಯೆಲ್, ರಾವ್ ರಮೇಶ್, ರೋಹಿಣಿ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



