AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷದ ಮಧ್ಯೆಯೂ ದಾಖಲೆ ಬರೆದ ರಶ್ಮಿಕಾ-ವಿಜಯ್ ವಿವಾಹ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ಸುದ್ದಿ ಟೀಕೆಗಳಿಗೆ ಕಾರಣವಾದರೂ, ಉದಯಪುರದಲ್ಲಿ ನಡೆದ ಅದ್ದೂರಿ ಮದುವೆಯ ನಂತರ ದಂಪತಿ ಹಂಚಿಕೊಂಡ ಇನ್​​ಸ್ಟಾಗ್ರಾಮ್ ಫೋಟೋಗಳು ಹೊಸ ದಾಖಲೆ ಬರೆದವು. 24 ಗಂಟೆಯಲ್ಲಿ 40.7 ಮಿಲಿಯನ್ ಲೈಕ್ಸ್ ಪಡೆದು, ಹಿಂದಿನ ಎಲ್ಲಾ ಸೆಲೆಬ್ರಿಟಿ ದಾಖಲೆಗಳನ್ನು ಮುರಿದು, ಅಭಿಮಾನಿಗಳ ಅಪಾರ ಪ್ರೀತಿಯನ್ನು ಗಳಿಸಿದರು.

ದ್ವೇಷದ ಮಧ್ಯೆಯೂ ದಾಖಲೆ ಬರೆದ ರಶ್ಮಿಕಾ-ವಿಜಯ್ ವಿವಾಹ
ವಿಜಯ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Feb 28, 2026 | 12:09 PM

Share

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಒಂದು ವರ್ಗದ ಜನರು ರಶ್ಮಿಕಾನ ಟೀಕಿಸಲು ಆರಂಭಿಸಿದರು. ರಶ್ಮಿಕಾ ಅವರು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ರದ್ದು ಮಾಡಿಕೊಂಡಿದ್ದನ್ನು ನೆನಪಿಸಿಕೊಂಡು ತಕರಾರು ತೆಗೆದಿದ್ದರು. ದ್ವೇಷದ ಸಂದೇಶಗಳನ್ನು ಹಬ್ಬಿಸಿದ್ದರು. ಇದರ ಮಧ್ಯೆಯೂ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಇನ್​​ಸ್ಟಾಗ್ರಾಮ್ ಪೋಸ್ಟ್ ಹೊಸ ದಾಖಲೆಯನ್ನೇ ಬರೆದಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಉದಯಪುರದಲ್ಲಿ ಅದ್ದೂರಿಯಾಗಿ ನಡೆಯಿತು. ರಾಜರ ಥೀಮ್​​​ನಲ್ಲಿ ಈ ಮದುವೆ ನಡೆದಿದೆ. ಈ ವಿವಾಹಕ್ಕೆ ಕೋಟ್ಯಂತರ ರೂಪಾಯಿಯನ್ನು ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಸುರಿದಿದ್ದಾರೆ. ಇವರ ವಿವಾಹ ಫೋಟೋಗಳಿಗೆ ಅಭಿಮಾನಿಗಳು ಕಾದಿದ್ದರು. ವಿವಾಹವಾದ (ಫೆಬ್ರವರಿ 26) ದಿನವೇ ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಹಾಗೂ ರಶ್ಮಿಕಾ ಪ್ರತ್ಯೇಕವಾಗಿ ಫೋಟೋ ಪೋಸ್ಟ್ ಮಾಡಿದರು. ಈ ಫೋಟೋ ದಾಖಲೆ ಬರೆದಿದೆ. 24 ಗಂಟೆ ಅವಧಿಯಲ್ಲಿ ಈ ಫೋಟೋಗೆ 40.7 ಮಿಲಿಯನ್ ವೀವ್ಸ್ ಸಿಕ್ಕಿದೆ.

ವಿಜಯ್ ಅವರ ಪೋಸ್ಟ್​​ಗೆ 18.1 ಮಿಲಿಯನ್ ಹಾಗೂ ರಶ್ಮಿಕಾಗೆ 22.6 ಮಿಲಿಯನ್ಸ್ ಲೈಕ್ಸ್ ಸಿಕ್ಕಿದೆ. ಇವುಗಳನ್ನು ಸೇರಿಸಿದ್ರೆ 4 ಕೋಟಿ ಆಗುತ್ತದೆ. ಇದು ಈ ದಂಪತಿ ಮೇಲೆ ಅಭಿಮಾನಿಗಳಿಗೆ ಇರೋ ಪ್ರೀತಿಯನ್ನು ತೋರಿಸುತ್ತದೆ. ಒಂದು ವರ್ಗ ಹಬ್ಬಿಸುತ್ತಿರುವ ದ್ವೇಷದ ಮಧ್ಯೆಯೂ ರಶ್ಮಿಕಾ ಸೋಶಿಯಲ್ ಮೀಡಿಯಾದಲ್ಲಿ ಅಪಾರ ಪ್ರೀತಿ ಸಿಕ್ಕಿದೆ.

ಈ ಮೊದಲು ವಿವಾಹ ಆದ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ದಂಪತಿಯ ಫೋಟೋ ಬರೋಬ್ಬರಿ 27 ಮಿಲಿಯನ್ ಲೈಕ್ಸ್ (24 ಗಂಟೆಯಲ್ಲಿ) ಪಡೆದಿತ್ತು. ಈಗ ಈ ದಾಖಲೆಯನ್ನು ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಮುರಿದಿದ್ದಾರೆ.

ಇದನ್ನೂ ಓದಿ: ನಗು ಚೆಲ್ಲುತ್ತಾ ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ (14 ಮಿಲಿಯನ್), ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ (12.6 ಮಿಲಿಯನ್), ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ (7.8 ಮಿಲಿಯನ್) ಪಡೆದಿತ್ತು. ಈಗ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಈ ಎಲ್ಲಾ ದಾಖಲೆಯನ್ನು ಮುರಿದು ಹಾಕಿದ್ದಾರೆ. ಈ ಮೂಲಕ 24 ಗಂಟೆಯಲ್ಲಿ ಅತಿ ಹೆಚ್ಚು ಲೈಕ್ಸ್ ಪಡೆದ ಸೆಲೆಬ್ರಿಟಿ ಜೋಡಿ ಇವರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ