AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಸ್ ಏಂಜಲೀಸ್​​ಗೆ ‘ರಾಮಾಯಣ’ ಟೀಸರ್; ಭರ್ಜರಿ ಪ್ರತಿಕ್ರಿಯೆ

Yash: ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾವಣನಾಗಿ ಯಶ್ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಶೋನಲ್ಲಿ ಭಾಗವಹಿಸಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಗ್ರಾಫಿಕ್ಸ್​​ನ ಹಾಡಿ ಹೊಗಳಿದ್ದಾರೆ.

ಲಾಸ್ ಏಂಜಲೀಸ್​​ಗೆ ‘ರಾಮಾಯಣ’ ಟೀಸರ್; ಭರ್ಜರಿ ಪ್ರತಿಕ್ರಿಯೆ
ಯಶ್
ರಾಜೇಶ್ ದುಗ್ಗುಮನೆ
|

Updated on:Mar 31, 2026 | 4:01 PM

Share

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಯಲ್ಲಿ ರಿಲೀಸ್ ಆಗಲಿದೆ. ಮೊದಲ ಪಾರ್ಟ್​ ಈ ವರ್ಷ ತೆರೆಗೆ ಬಂದರೆ, ಎರಡನೇ ಭಾಗ 2027ರ ದೀಪಾವಳಿಗೆ ತೆರೆಗೆ ಬರಲಿದೆ. ಈ ಚಿತ್ರದ ಪ್ರಚಾರವನ್ನು ಇನ್ನೂ ಆರಂಭಿಸಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈಗ ಇದಕ್ಕೆ ಉತ್ತರವಾಗಿ ಸಿನಿಮಾ ತಂಡ ಪ್ರಚಾರ ಆರಂಭಿಸಿದೆ. ‘ರಾಮಾಯಣ’ ತಂಡ ಇತ್ತೀಚೆಗೆ ಲಾಸ್ ಏಂಜಲೀಸ್​​ಗೆ ತೆರಳಿತ್ತು. ಅಲ್ಲಿ ‘ರಾಮಾಯಣ’ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದ್ದು, ಮೆಚ್ಚುಗೆ ಪಡೆದಿದೆ.

ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾವಣನಾಗಿ ಯಶ್ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಶೋನಲ್ಲಿ ಭಾಗವಹಿಸಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಗ್ರಾಫಿಕ್ಸ್​​ನ ಹಾಡಿ ಹೊಗಳಿದ್ದಾರೆ. ಈ ವಿಮರ್ಶೆಗಳನ್ನು ಕೇಳಿ ರಣಬೀರ್ ಕಪೂರ್ ಕೂಡ ಖುಷಿಪಟ್ಟಿದ್ದಾರೆ.

‘ಅದ್ಭುತ ವಿಶ್ಯುವಲ್ಸ್’ ಎಂದು ಕೆಲವರು ಹೇಳಿದ್ದಾರೆ. ‘ಈ ಸಿನಿಮಾ ನೋಡಲು ಕಾದಿದ್ದೇವೆ’ ಎಂದು ಇನ್ನೂ ಕೆಲವರು ಹೇಳಿದ್ದಾರೆ. ಈ ಟೀಸರ್ ನೋಡಲು ಅಭಿಮಾನಿಗಳು ಕಾದಿದ್ದಾರೆ. ಏಪ್ರಿಲ್ 2ರಂದು ಟೀಸರ್ ಪ್ರೇಕ್ಷಕರ ಎದುರು ಬರಲಿದೆ. ಯಶ್ ಅವರನ್ನು ರಾವಣನಾಗಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ರಣಬೀರ್, ಸಾಯಿ ಪಲ್ಲವಿ ‘ರಾಮಾಯಣ’ ಫೋಟೋ ಫೇಕ್; ಅಸಲಿ ವಿಷಯ ಬಿಚ್ಚಿಟ್ಟ ನಟ

‘ರಾಮಾಯಣ’ ಚಿತ್ರಕ್ಕೆ 2 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ರಿಕವರಿ ಮಾಡಲಿದೆಯೇ ಎಂಬುದು ಸದ್ಯದ ಪ್ರಶ್ನೆ. ಎಲ್ಲಕ್ಕಿಂತ ಮುಖ್ಯವಾಗಿ, ಸಿನಿಮಾ ಸೂಕ್ಷ್ಮ ವಿಷಯಗಳ ಮೇಲಿದೆ. ಹೀಗಾಗಿ, ಕಥೆಯಲ್ಲಿ ಕೊಂಚ ಬದಲಾವಣೆ ಆದರೂ ಸಾಕಷ್ಟು ಟ್ರೋಲ್​​​ಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:16 pm, Tue, 31 March 26

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್