AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​ಮೆಂಟ್​ನಲ್ಲಿ ರೇವ್ ಪಾರ್ಟಿ; ನಿರ್ಮಾಪಕ ವೆಂಕಟ್ ಸೇರಿ ಹಲವು ಸೆಲೆಬ್ರಿಟಿಗಳು ಅರೆಸ್ಟ್​

ಮಾದಾಪುರದ ವಿಠ್ಠಲ್​ರಾವ್ ನಗರದ ವೈಷ್ಣವಿ ಅಪಾರ್ಟ್​ಮೆಂಟ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಎನ್​ಸಿಬಿ ಅಧಿಕಾರಿಗಳು ದಾಳಿ ಮಾಡಿದರು. ಈ ವೇಳೆ ಕೊಕೆನ್, ಎಲ್​ಎಸ್​ಡಿ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್ಲರನ್ನೂ ಮಾದಾಪುರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಅಪಾರ್ಟ್​ಮೆಂಟ್​ನಲ್ಲಿ ರೇವ್ ಪಾರ್ಟಿ; ನಿರ್ಮಾಪಕ ವೆಂಕಟ್ ಸೇರಿ ಹಲವು ಸೆಲೆಬ್ರಿಟಿಗಳು ಅರೆಸ್ಟ್​
ರೇವ್ ಪಾರ್ಟಿ ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Aug 31, 2023 | 7:40 AM

Share

ಟಾಲಿವುಡ್ ಚಿತ್ರರಂಗದಲ್ಲಿ ಮತ್ತೆ ಡ್ರಗ್ಸ್ ವಿಚಾರ ಸುದ್ದಿಯಲ್ಲಿದೆ. ಡ್ರಗ್ ಹೊಂದಿದ್ದ ಆರೋಪದ ಮೇಲೆ ಇತ್ತೀಚೆಗೆ ನಿರ್ಮಾಪಕ ಕೆ.ಪಿ. ಚೌಧರಿಯನ್ನು (KP Chowdary) ಬಂಧಿಸಲಾಗಿತ್ತು. ಈಗ ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭರ್ಜರಿ ಬೇಟೆ ಆಡಿದ್ದಾರೆ. ಬುಧವಾರ (ಆಗಸ್ಟ್ 30) ಮಧ್ಯರಾತ್ರಿ ಹೈದರಾಬಾದ್​​ನ ಮಾದಾಪುರದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ದಾಳಿ ನಡೆದಿದೆ. ಈ ವೇಳೆ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿ ಆಗಿದೆ.

ಮಾದಾಪುರದ ವಿಠ್ಠಲ್​ರಾವ್ ನಗರದ ವೈಷ್ಣವಿ ಅಪಾರ್ಟ್​ಮೆಂಟ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಎನ್​ಸಿಬಿ ಅಧಿಕಾರಿಗಳು ದಾಳಿ ಮಾಡಿದರು. ಈ ವೇಳೆ ಕೊಕೆನ್, ಎಲ್​ಎಸ್​ಡಿ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್ಲರನ್ನೂ ಮಾದಾಪುರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಈ ಪಾರ್ಟಿಯಲ್ಲಿ ಭಾಗವಹಿಸಿದವರ ಹೆಸರು ಇನ್ನಷ್ಟೇ ಹೊರ ಬೀಳಬೇಕಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಈ ರೇವ್ ಪಾರ್ಟಿಯಲ್ಲಿ ಗಣ್ಯರ ಮಕ್ಕಳು ಭಾಗಿ ಆಗಿರುವ ಶಂಕೆ ಇದೆ. ಇವರಿಗೆ ಡ್ರಗ್ಸ್ ಸರಬರಾಜು ಮಾಡಿದವರು ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮತ್ತೆ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ವಿಚಾರ ಮುನ್ನೆಲೆಗೆ ಬಂದಿರುವುದು ಅನೇಕರ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ

ಚೌಧರಿ ಬಂಧನದ ನಂತರ ಅಲರ್ಟ್ ಆಗಿದ್ದ ಎನ್​ಸಿಬಿ

ಕಳೆದ ಕೆಲ ವರ್ಷಗಳ ಹಿಂದೆ ಟಾಲಿವುಡ್ ಅಂಗಳದಲ್ಲಿ ಡ್ರಗ್ಸ್ ವಿಚಾರ ಸದ್ದು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅನೇಕ ಸೆಲೆಬ್ರಿಟಿಗಳ ಹೇಳಿಕೆಯನ್ನು ಪಡೆಯಲಾಗಿತ್ತು. ಆ ಬಳಿಕ ಡ್ರಗ್ಸ್ ಬಳಕೆ ಕಡಿಮೆ ಆಗಿದೆ ಎಂದು ಎಲ್ಲರೂ ಭಾವಿಸಿದರು. ಆದರೆ, ನಿರ್ಮಾಪಕ ಕೆ.ಪಿ. ಚೌಧರಿ ಅರೆಸ್ಟ್ ಆದ ಬಳಿಕ ಎನ್​ಸಿಬಿ ಅಲರ್ಟ್ ಆಗಿದೆ. ಚೌಧರಿಯಿಂದ ಹೆಚ್ಚಿನ ಮಾಹಿತಿ ಪಡೆದು ಆ ನಿಟ್ಟಿನಲ್ಲಿ ವಿಚಾರಣೆ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್