ಟಾಲಿವುಡ್ ಚಿತ್ರರಂಗದಲ್ಲಿ ಮತ್ತೆ ಡ್ರಗ್ಸ್ ವಿಚಾರ ಸುದ್ದಿಯಲ್ಲಿದೆ. ಡ್ರಗ್ ಹೊಂದಿದ್ದ ಆರೋಪದ ಮೇಲೆ ಇತ್ತೀಚೆಗೆ ನಿರ್ಮಾಪಕ ಕೆ.ಪಿ. ಚೌಧರಿಯನ್ನು (KP Chowdary) ಬಂಧಿಸಲಾಗಿತ್ತು. ಈಗ ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭರ್ಜರಿ ಬೇಟೆ ಆಡಿದ್ದಾರೆ. ಬುಧವಾರ (ಆಗಸ್ಟ್ 30) ಮಧ್ಯರಾತ್ರಿ ಹೈದರಾಬಾದ್ನ ಮಾದಾಪುರದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ದಾಳಿ ನಡೆದಿದೆ. ಈ ವೇಳೆ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿ ಆಗಿದೆ.
ಮಾದಾಪುರದ ವಿಠ್ಠಲ್ರಾವ್ ನಗರದ ವೈಷ್ಣವಿ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಎನ್ಸಿಬಿ ಅಧಿಕಾರಿಗಳು ದಾಳಿ ಮಾಡಿದರು. ಈ ವೇಳೆ ಕೊಕೆನ್, ಎಲ್ಎಸ್ಡಿ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್ಲರನ್ನೂ ಮಾದಾಪುರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಈ ಪಾರ್ಟಿಯಲ್ಲಿ ಭಾಗವಹಿಸಿದವರ ಹೆಸರು ಇನ್ನಷ್ಟೇ ಹೊರ ಬೀಳಬೇಕಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಈ ರೇವ್ ಪಾರ್ಟಿಯಲ್ಲಿ ಗಣ್ಯರ ಮಕ್ಕಳು ಭಾಗಿ ಆಗಿರುವ ಶಂಕೆ ಇದೆ. ಇವರಿಗೆ ಡ್ರಗ್ಸ್ ಸರಬರಾಜು ಮಾಡಿದವರು ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮತ್ತೆ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ವಿಚಾರ ಮುನ್ನೆಲೆಗೆ ಬಂದಿರುವುದು ಅನೇಕರ ಬೇಸರಕ್ಕೆ ಕಾರಣ ಆಗಿದೆ.
ಇದನ್ನೂ ಓದಿ: ಡ್ರಗ್ ಕೇಸ್ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್ಜಿವಿ
ಕಳೆದ ಕೆಲ ವರ್ಷಗಳ ಹಿಂದೆ ಟಾಲಿವುಡ್ ಅಂಗಳದಲ್ಲಿ ಡ್ರಗ್ಸ್ ವಿಚಾರ ಸದ್ದು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅನೇಕ ಸೆಲೆಬ್ರಿಟಿಗಳ ಹೇಳಿಕೆಯನ್ನು ಪಡೆಯಲಾಗಿತ್ತು. ಆ ಬಳಿಕ ಡ್ರಗ್ಸ್ ಬಳಕೆ ಕಡಿಮೆ ಆಗಿದೆ ಎಂದು ಎಲ್ಲರೂ ಭಾವಿಸಿದರು. ಆದರೆ, ನಿರ್ಮಾಪಕ ಕೆ.ಪಿ. ಚೌಧರಿ ಅರೆಸ್ಟ್ ಆದ ಬಳಿಕ ಎನ್ಸಿಬಿ ಅಲರ್ಟ್ ಆಗಿದೆ. ಚೌಧರಿಯಿಂದ ಹೆಚ್ಚಿನ ಮಾಹಿತಿ ಪಡೆದು ಆ ನಿಟ್ಟಿನಲ್ಲಿ ವಿಚಾರಣೆ ಮಾಡಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ