AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಜೊತೆ ರೊಮ್ಯಾನ್ಸ್ ಮಾಡ್ತಾರೆ ರವೀನಾ ಟಂಡನ್ ಮಗಳು?

ರವೀನಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 1991ರಲ್ಲಿ. ಆ ಬಳಿಕ ಅವರು ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದರು. ಅವರ ಪತಿ ಅನಿಲ್ ತಡಾನಿ ಬಾಲಿವುಡ್​ನಲ್ಲಿ ಸಿನಿಮಾ ಹಂಚಿಕೆದಾರರು. ಈಗ ಮಗಳಿಗೆ 18 ವರ್ಷ ತುಂಬಿದೆ. ಈ ಕಾರಣದಿಂದ ಮಗಳನ್ನು ಚಿತ್ರರಂಗಕ್ಕೆ ಪರಿಚಯಿಸಲು ಇಬ್ಬರೂ ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.

ರಾಮ್ ಚರಣ್ ಜೊತೆ ರೊಮ್ಯಾನ್ಸ್ ಮಾಡ್ತಾರೆ ರವೀನಾ ಟಂಡನ್ ಮಗಳು?
ರಾಮ್​ ಚರಣ್​, ರಾಶಾ ತಡಾನಿ
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​|

Updated on:Oct 01, 2023 | 4:16 PM

Share

ನಟಿ ರವೀನಾ ಟಂಡನ್ (Raveena Tandon) ಅವರು ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಕೆಜಿಎಫ್ 2’ ಚಿತ್ರದಲ್ಲಿ ಅವರು ಮಾಡಿದ ರಮಿಕಾ ಸೇನ್ ಪಾತ್ರ ಭರ್ಜರಿ ಗಮನ ಸೆಳೆದಿತ್ತು. ಈ ಚಿತ್ರದ ಮೂಲಕ ಅವರ ಜನಪ್ರಿಯತೆ ಹೆಚ್ಚಿತು. ಈಗ ಅವರ ಮಗಳು ರಾಶಾ ತಡಾನಿ (Rasha Thadani) ಕೂಡ ಚಿತ್ರರಂಗದಲ್ಲಿ ಮಿಂಚಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ. ರಾಮ್ ಚರಣ್ ಅವರ ಮುಂದಿನ ಸಿನಿಮಾದಲ್ಲಿ ರಾಶಾ ನಟಿಸಲಿದ್ದಾರಂತೆ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ಸಿನಿಮಾದಲ್ಲಿ ರಾಮ್ ಚರಣ್​ಗೆ (Ram Charan) ಹೀರೋಯಿನ್ ಆಗಿ ಕಾಣಿಸಿಕೊಳ್ತಾರಾ ಅಥವಾ ಮಗಳ ಪಾತ್ರ ಮಾಡುತ್ತಾರಾ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ.

ರವೀನಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 1991ರಲ್ಲಿ. ಆ ಬಳಿಕ ಅವರು ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದರು. ಅವರ ಪತಿ ಅನಿಲ್ ತಡಾನಿ ಬಾಲಿವುಡ್​ನಲ್ಲಿ ಸಿನಿಮಾ ಹಂಚಿಕೆದಾರರು. ಈಗ ಮಗಳಿಗೆ 18 ವರ್ಷ ತುಂಬಿದೆ. ಈ ಕಾರಣದಿಂದ ಮಗಳನ್ನು ಚಿತ್ರರಂಗಕ್ಕೆ ಪರಿಚಯಿಸಲು ಇಬ್ಬರೂ ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ. ದಕ್ಷಿಣ ಭಾರತದ ಚಿತ್ರರಂಗದ ಮೂಲಕ ಸಿನಿ ಪಯಣ ಆರಂಭಿಸಲು ರಾಶಾ ರೆಡಿ ಆಗಿದ್ದಾರೆ. ಈ ವಿಚಾರದ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

ಅಮ್ಮನ ಜೊತೆ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟ ನಟಿ ರವೀನಾ ಟಂಡನ್ ಮಗಳು

ರಾಮ್ ಚರಣ್ ಅವರು ಬುಚಿ ಬಾಬು ಸನಾ ಜೊತೆ ಸಿನಿಮಾ ಮಾಡಬೇಕಿದೆ. ‘ಉಪ್ಪೇನಾ’ ಸಿನಿಮಾ ಮಾಡಿ ಅವರು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರು ಹೊಸ ಕಥೆ ಸಿದ್ಧಪಡಿಸಿಕೊಂಡಿದ್ದಾರೆ. ಈ ಚಿತ್ರದ ಬಜೆಟ್ 300 ಕೋಟಿ ರೂಪಾಯಿಯಲ್ಲಿ ಮೀರಲಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

Rasha Tadani: 18ನೇ ವಯಸ್ಸಿಗೆ ಪದವಿ ಶಿಕ್ಷಣ ಪಡೆದ ರವೀನಾ ಟಂಡನ್​ ಮಗಳು ರಾಶಾ ತಡಾನಿ; ನೆನಪಿನ ಪುಟ ತೆರೆದ ಸ್ಟಾರ್​ ನಟಿ

ರವೀನಾ ಹಾಗೂ ಅನಿಲ್ ತಡಾನಿ ಅವರು ಬುಚ್ಚಿ ಬಾಬುನ ಆಯ್ಕೆ ಮಾಡಿಕೊಳ್ಳಲು ಮತ್ತೊಂದು ಕಾರಣ ಇದೆ. ‘ಉಪ್ಪೇನಾ’ ಸಿನಿಮಾದಲ್ಲಿ ನಟಿಸುವಾಗ ಕೃತಿ ಶೆಟ್ಟಿಗೆ 17 ವರ್ಷ ಆಗಿತ್ತು. ಆದರೂ ಅವರ ಪಾತ್ರವನ್ನು ಒಳ್ಳೆಯ ರೀತಿಯಲ್ಲಿ ಕಟ್ಟಿಕೊಟ್ಟಿದ್ದು ಬುಚ್ಚಿ ಬಾಬು. ಈಗ ಅವರು ರಾಶಾಗಾಗಿ ಒಂದೊಳ್ಳೆಯ ಕಥೆ ರೆಡಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

View this post on Instagram

A post shared by Rasha (@rashathadani)

ಈ ಮೊದಲು ಮಾತನಾಡಿದ್ದ ರವೀನಾ ಅವರು ಮಗಳ ಸಿನಿಮಾಗೆ ಕಾಲಿಡುವ ಬಗ್ಗೆ ಮಾಹಿತಿ ನೀಡಿದ್ದರು. ‘ರಾಶಾ ತನ್ನ ಶಿಕ್ಷಣವನ್ನು ಪೂರ್ಣಗೊಳಿಸಿಕೊಳ್ಳಬೇಕಿದೆ. ಸಿನಿಮಾ ರಂಗದಲ್ಲಿ ಅವಳು ಹಿಟ್ ಆಗಬಹುದು, ಆಗದೇ ಇರಬಹುದು. ಚಿತ್ರರಂಗದಲ್ಲಿ ಯಶಸ್ಸು ಕಾಣದೇ ಇದ್ದರೆ ಅವಳು ಕೆಲಸವನ್ನು ಆಯ್ಕೆ ಮಾಡಿಕೊಳ್ಳಬಹುದು. ಅದಕ್ಕೆ ಶಿಕ್ಷಣ ಬೇಕು’ ಎಂದು ಅವರು ಹೇಳಿದ್ದರು. ಸದ್ಯ ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಶಂಕರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:16 pm, Sun, 1 October 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?