AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ-ಆರತಿ ವಿಚ್ಛೇದನ ಪ್ರಕರಣ; ತಿಂಗಳಿಗೆ 40 ಲಕ್ಷ ರೂ. ಜೀವನಾಂಶ ಬೇಡಿಕೆ ನಿರಾಕರಿಸಿದ ಕೋರ್ಟ್

ನಟ ರವಿ ಮೋಹನ್ ಮತ್ತು ಆರತಿ ವಿಚ್ಛೇದನ ಪ್ರಕರಣದಲ್ಲಿ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಪತ್ನಿ ಕೇಳಿದ್ದ 40 ಲಕ್ಷ ರೂ. ಜೀವನಾಂಶ ಬೇಡಿಕೆಯನ್ನು ತಿರಸ್ಕರಿಸಿದ ನ್ಯಾಯಾಲಯ, ಮಾಸಿಕ 3 ಲಕ್ಷ ರೂ. ನಿಗದಿಪಡಿಸಿದೆ. ಅಷ್ಟೇ ಅಲ್ಲದೆ, ಇಬ್ಬರು ಮಕ್ಕಳನ್ನು ಭೇಟಿಯಾಗಲು ನಟ ರವಿ ಮೋಹನ್ ಅವರಿಗೆ ಮುಕ್ತ ಅವಕಾಶ ಕಲ್ಪಿಸಿಕೊಟ್ಟಿದೆ.

ರವಿ-ಆರತಿ ವಿಚ್ಛೇದನ ಪ್ರಕರಣ; ತಿಂಗಳಿಗೆ 40 ಲಕ್ಷ ರೂ. ಜೀವನಾಂಶ ಬೇಡಿಕೆ ನಿರಾಕರಿಸಿದ ಕೋರ್ಟ್
ರವಿ ಮೋಹನ್
ರಾಜೇಶ್ ದುಗ್ಗುಮನೆ
|

Updated on:Jul 29, 2026 | 2:55 PM

Share

ಮುಖ್ಯಾಂಶಗಳು

  • 40 ಲಕ್ಷ ರೂ. ಜೀವನಾಂಶ ಕೇಳಿದ್ದ ರವಿ ಮೋಹನ್ ಪತ್ನಿಗೆ ಕೋರ್ಟ್ ಶಾಕ್
  • ಮಕ್ಕಳನ್ನು ಮುಕ್ತವಾಗಿ ಭೇಟಿಯಾಗಲಿದ್ದಾರೆ ನಟ
  • 15 ವರ್ಷಗಳ ಸ್ಟಾರ್ ದಂಪತಿಯ ಸಂಸಾರದಲ್ಲಿ ಬಿರುಗಾಳಿ

ಖ್ಯಾತ ನಟ ರವಿ ಮೋಹನ್ ಹಾಗೂ ಅವರ ಪತ್ನಿ ಆರತಿ ನಡುವಿನ ವಿಚ್ಛೇದನ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಪತ್ನಿ ಬೇಡಿಕೆಯಿಟ್ಟಿದ್ದ ಬೃಹತ್ ಮೊತ್ತದ ಜೀವನಾಂಶವನ್ನು ಕೋರ್ಟ್ ನಿರಾಕರಿಸಿದೆ. ಜೊತೆಗೆ, ತಂದೆಗೆ ತನ್ನ ಮಕ್ಕಳನ್ನು ಭೇಟಿಯಾಗಲು ಮುಕ್ತ ಅವಕಾಶ ನೀಡಿದೆ. ಚಿತ್ರರಂಗದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸ್ಟಾರ್ ದಂಪತಿಯ ಕಾನೂನು ಹೋರಾಟದಲ್ಲಿ ರವಿ ಮೋಹನ್​ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.

ಕೋರ್ಟ್ ನೀಡಿದ ಆದೇಶವೇನು?

ನಟ ರವಿ ಮೋಹನ್ ಅವರಿಂದ ಪ್ರತಿ ತಿಂಗಳು 40 ಲಕ್ಷ ರೂಪಾಯಿ ಜೀವನಾಂಶ ಕೊಡಿಸಬೇಕು ಎಂದು ಪತ್ನಿ ಆರತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಚೆನ್ನೈನ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ಅಂತಿಮ ತೀರ್ಪು ಬರುವವರೆಗೂ ಪ್ರತಿ ತಿಂಗಳು 3 ಲಕ್ಷ ರೂಪಾಯಿ ನೀಡುವಂತೆ ನಟನಿಗೆ ಕೋರ್ಟ್ ನಿರ್ದೇಶನ ನೀಡಿದೆ.

ಮಕ್ಕಳನ್ನು ಭೇಟಿಯಾಗಲು ಗ್ರೀನ್ ಸಿಗ್ನಲ್

ದುಡ್ಡಿನ ವಿಚಾರದ ಜೊತೆಗೆ ಮಕ್ಕಳ ಭೇಟಿಗೆ ಸಂಬಂಧಿಸಿದಂತೆ ಕೋರ್ಟ್ ಮಹತ್ವದ ಆದೇಶ ನೀಡಿದೆ. ರವಿ ಮೋಹನ್ ತಮ್ಮ ಇಬ್ಬರು ಗಂಡು ಮಕ್ಕಳಾದ ಆರವ್ ಮತ್ತು ಅಯಾನ್ ಅವರನ್ನು ಭೇಟಿ ಮಾಡಲು ಯಾವುದೇ ನಿರ್ಬಂಧ ಇರಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನಟನಿಗೆ ಕಾಡಿದ್ದ ಬೇಸರವೇನು?

ಪತ್ನಿ ಆರತಿ ತನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ ಎಂದು ರವಿ ಮೋಹನ್ ಈ ಹಿಂದೆ ಸಾರ್ವಜನಿಕವಾಗಿ ಆರೋಪಿಸಿದ್ದರು. ಮಕ್ಕಳಿಗೆ ಭದ್ರತೆ ನೀಡಿ ಶಾಲೆಗೆ ಕಳುಹಿಸಲಾಗುತ್ತಿದೆ ಎಂದು ದೂರಿದ್ದರು. ಅಷ್ಟೇ ಅಲ್ಲ, ಮಕ್ಕಳು ಕಾರು ಅಪಘಾತಕ್ಕೆ ಒಳಗಾಗಿದ್ದಾಗಲೂ ತಮಗೆ ಮಾಹಿತಿ ನೀಡಿರಲಿಲ್ಲ ಎಂದು ತೀವ್ರ ಆತಂಕ ಹಾಗೂ ಬೇಸರ ವ್ಯಕ್ತಪಡಿಸಿದ್ದರು. ಈ ಆದೇಶದ ಮೂಲಕ ನಟನಿಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ.

ಇದನ್ನೂ ಓದಿ: ವಿಚ್ಛೇದನ ಸಿಗೋ ತನಕ ಸಿನಿಮಾ ಮಾಡಲ್ಲ ಅಂತ ಹೇಳಿ ಈಗ ಉಲ್ಟಾ ಹೊಡೆದ ಜಯಂ ರವಿ

ಅಂತ್ಯದತ್ತ 15 ವರ್ಷಗಳ ದಾಂಪತ್ಯ

ರವಿ ಮೋಹನ್ ಹಾಗೂ ಆರತಿ 2009ರ ಜೂನ್ ತಿಂಗಳಲ್ಲಿ ವಿವಾಹವಾಗಿದ್ದರು. ಸುಮಾರು 15 ವರ್ಷಗಳ ಕಾಲ ಒಟ್ಟಿಗೆ ಇದ್ದ ಇವರ ಸಂಸಾರದಲ್ಲಿ ನಂತರ ಭಿನ್ನಾಭಿಪ್ರಾಯಗಳು ಮೂಡಿದವು. ಪರಿಣಾಮ, 2024ರ ಸೆಪ್ಟೆಂಬರ್‌ನಲ್ಲಿ ರವಿ ಮೋಹನ್ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ತಮ್ಮ ಗಮನಕ್ಕೆ ಬಾರದೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರತಿ ಆರೋಪಿಸಿದ್ದರು. ಸದ್ಯ ಮಧ್ಯಂತರ ಆದೇಶ ಹೊರಬಿದ್ದಿದ್ದು, ಮುಖ್ಯ ವಿಚ್ಛೇದನ ಪ್ರಕರಣದ ವಿಚಾರಣೆ ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:54 pm, Wed, 29 July 26

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ