AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ರಾಕಿ ಭಾಯ್ ಯಶ್​ಗೆ ಸಲಾಂ ಹೇಳಿದ ಕ್ರಿಕೆಟಿಗ ದಿನೇಶ್ ಕಾರ್ತಿಕ್

Dinesh Karthik Meets Yash: ಕ್ರಿಕೆಟರ್​ ದಿನೇಶ್ ಕಾರ್ತಿಕ್ ಮತ್ತು ಸ್ಯಾಂಡಲ್​ವುಡ್ ಸ್ಟಾರ್ ಯಶ್ ಪರಸ್ಪರ ಭೇಟಿಯಾಗಿದ್ದಾರೆ. ಈ ಸಂದರ್ಭದ ಫೋಟೋವನ್ನು ದಿನೇಶ್ ಕಾರ್ತಿಕ್ ಅವರ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮದನ್​ ಕುಮಾರ್​
| Edited By: |

Updated on:Feb 25, 2023 | 11:38 AM

Share

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಯಾಂಡಲ್​ವುಡ್ ಸಿನಿಮಾ ಸೆಲೆಬ್ರಿಟಿಗಳ ಕೆಸಿಸಿ (KCC) ಟೂರ್ನಿ ಜೋರಾಗಿ ನಡೆಯುತ್ತಿದೆ. ಈ ಪಂದ್ಯಗಳಲ್ಲಿ ನಟ ಯಶ್​ ಭಾಗವಹಿಸಿಲ್ಲ. ಆದರೂ ಕ್ರಿಕೆಟಿಗರಿಗೆ ಯಶ್ ದೂರವೇನಲ್ಲ. ಇದಕ್ಕೆ ತಾಜಾ ಸಾಕ್ಷಿಯಾಗಿ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಭಾರತ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ (Dinesh Karthik) ಅವರು ನಟ ಯಶ್ ಅವರನ್ನು ಭೇಟಿಯಾಗಿದ್ದಾರೆ. ಯಶ್ ಅವರೊಟ್ಟಿಗಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆರ್​ಸಿಬಿ ಆಟಗಾರರೂ ಆಗಿರುವ ದಿನೇಶ್ ಕಾರ್ತಿಕ್, ತಮ್ಮ ಹಾಗೂ ನಟ (Yash) ಯಶ್​ರ ಫೋಟೋಗೆ ‘ಸಲಾಂ ರಾಕಿ ಭಾಯ್’ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ.

ಯಾವುದೋ ಕಾರ್ಯಕ್ರಮದಲ್ಲಿ ದಿನೇಶ್ ಹಾಗೂ ಯಶ್ ಭೇಟಿಯಾಗಿದ್ದು, ಭೇಟಿಯ ಉದ್ದೇಶ ಮತ್ತು ಸ್ಥಳದ ಬಗ್ಗೆ ಮಾಹಿತಿ ಸದ್ಯಕ್ಕಿಲ್ಲ. ಆದರೆ ಈ ಫೋಟೋ ಯಶ್ ಅಭಿಮಾನಿಗಳಿಗಂತೂ ಖುಷಿ ನೀಡಿದೆ. ‘ಬೆಂಗಳೂರು ಬ್ಲಡ್’ ಎಂದು ಕೆಲವು ನೆಟ್ಟಿಗರು ಕಮೆಂಟ್ ಸಹ ಮಾಡಿದ್ದಾರೆ. ದಿನೇಶ್ ಕಾರ್ತಿಕ್ ಮಾತ್ರವೇ ಅಲ್ಲದೆ ಕೆಲವು ದಿನಗಳ ಹಿಂದೆ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಹಾಗೂ ಅವರ ಸಹೋದರ ಕೃನಾಲ್ ಪಾಂಡ್ಯ ಕೂಡ ನಟ ಯಶ್ ಅವರನ್ನು ಭೇಟಿಯಾಗಿದ್ದರು. ಆ ಚಿತ್ರವೂ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ಸಿನಿಮಾ ವಿಚಾರಕ್ಕೆ ಬರೋದಾದರೆ, ‘ಕೆಜಿಎಫ್ 2’ ಬಳಿಕ ಇನ್ನೂ ಯಾವ ಸಿನಿಮಾವನ್ನು ಘೋಷಿಸದಿರುವ ಯಶ್ ಅವರ ನಡೆ ಕುತೂಹಲ ಮೂಡಿಸಿದೆ. ತಮ್ಮ ಮುಂದಿನ ಸಿನಿಮಾಕ್ಕಾಗಿ ಅವರು ಭರ್ಜರಿ ಯೋಜನೆ ರೂಪಿಸುತ್ತಿದ್ದಾರೆ. ಆದಷ್ಟು ಬೇಗ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ: Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ

ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದ ಯಶ್​:

‘ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ’ ಎಂದು ಜನ್ಮದಿನದ (ಜನವರಿ 8) ಸಂದರ್ಭದಲ್ಲಿ ಯಶ್​ ಬರೆದುಕೊಂಡಿದ್ದರು. ಅವರ ಮುಂದಿನ ಪ್ರಾಜೆಕ್ಟ್​​ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ದೊಡ್ಡ ದೊಡ್ಡ ನಿರ್ದೇಶಕರ ಹೆಸರುಗಳು ಕೇಳಿಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:11 pm, Fri, 24 February 23

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್