AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಮನೆ ಊಟಕ್ಕೆ ಸಂಪೂರ್ಣ ಬ್ರೇಕ್: ಹೈಕೋರ್ಟ್ ಆದೇಶ

Pavithra Gowda and Renuka Swamy: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ವಿಶೇಷ ಅನುಮತಿಗಳೊಂದಿಗೆ ಜೈಲಿಗೆ ಮನೆಯಿಂದಲೇ ಊಟ ತರಿಸಿಕೊಳ್ಳುತ್ತಿದ್ದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರುಗಳು ಮನೆಯಿಂದ ಊಟ ತರಿಸಿಕೊಳ್ಳುತ್ತಿದ್ದರು. ಇದೀಗ ಆ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದ್ದು, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ಮನೆ ಊಟಕ್ಕೆ ಬ್ರೇಕ್ ಬಿದ್ದಿದೆ. ಅವರ ಮನೆ ಊಟಕ್ಕೆ ಬ್ರೇಕ್ ಬಿದ್ದಿದೆ.

ಪವಿತ್ರಾ ಗೌಡ ಮನೆ ಊಟಕ್ಕೆ ಸಂಪೂರ್ಣ ಬ್ರೇಕ್: ಹೈಕೋರ್ಟ್ ಆದೇಶ
Darshan Toogdeep
ಮಂಜುನಾಥ ಸಿ.
|

Updated on:Mar 04, 2026 | 3:36 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡಗೆ ಹೈಕೋರ್ಟ್​ನಲ್ಲಿ ಹಿನ್ನಡೆ ಆಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ವಿಶೇಷ ಅನುಮತಿಗಳೊಂದಿಗೆ ಜೈಲಿಗೆ ಮನೆಯಿಂದಲೇ ಊಟ ತರಿಸಿಕೊಳ್ಳುತ್ತಿದ್ದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರುಗಳು ಮನೆಯಿಂದ ಊಟ ತರಿಸಿಕೊಳ್ಳುತ್ತಿದ್ದರು. ಇದೀಗ ಆ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದ್ದು, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ಮನೆ ಊಟಕ್ಕೆ ಬ್ರೇಕ್ ಬಿದ್ದಿದೆ. ಅವರ ಮನೆ ಊಟಕ್ಕೆ ಬ್ರೇಕ್ ಬಿದ್ದಿದೆ.

ಈ ಹಿಂದೆ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಈ ಕುರಿತು ವಿವರವಾದ ವಿಚಾರಣೆ ನಡೆದು, ವಾರಕ್ಕೊಮ್ಮೆ ಅಥವಾ ವೈದ್ಯಕೀಯ ಕಾರಣಗಳಿದ್ದರೆ ಮನೆ ಊಟ ತರಿಸಿಕೊಳ್ಳಬಹುದು ಎಂಬ ಆದೇಶ ಹೊರಬಿದ್ದಿತ್ತು. ಅದರಂತೆ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರುಗಳು ಮನೆಯಿಂದ ಊಟ ತರಿಸಿಕೊಳ್ಳುತ್ತಿದ್ದರು. ಈ ವಿಶೇಷ ಸೇವೆಯನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್​​ನಲ್ಲಿ ಈ ಬಗ್ಗೆ ವಿಚಾರಣೆ ನಡೆದಿದ್ದು, ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು 57ನೇ ಸಿಸಿಹೆಚ್ ಕೋರ್ಟ್ ನೀಡಿದ್ದ ಆದೇಶ ರದ್ದುಪಡಿಸಿದೆ. ಅಲ್ಲದೆ, ‘ಆರೋಪಿ ಕೇಳಿದ ಕೂಡಲೇ ಮನೆ ಊಟ ಕೊಡಲು ಅನುಮತಿ ನೀಡಲು ಆಗದು, ವೈದ್ಯಕೀಯ ಸಲಹೆ ಇದ್ದರೆ ಮಾತ್ರ ಮನೆ ಊಟಕ್ಕೆ ಅವಕಾಶ’ ಎಂದಿದೆ.

ಟ್ರಯಲ್ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿ ಪವಿತ್ರಾ, ನಾಗರಾಜ್ ಮತ್ತು ಲಕ್ಷ್ಮಣ್ ಅವರು ಮನೆ ಊಟ ಸಿಗುವಂತೆ ಮಾಡಿಕೊಂಡಿದ್ದರು. ಬಳಿಕ ಸಾಕಷ್ಟು ವಾದ-ವಿವಾದಗಳ ಬಳಿಕ ವಾರಕ್ಕೊಮ್ಮೆ ಮಾತ್ರ ತರಿಸಿಕೊಳ್ಳಬಹುದು ಎಂದಾಗಿತ್ತು. ಅಲ್ಲದೆ ವೈದ್ಯಕೀಯ ಕಾರಣ ನೀಡಿದರೆ ದರ್ಶನ್ ಹಾಗೂ ಇತರೆ ಆರೋಪಿಗಳೂ ಸಹ ಮನೆ ಊಟ ತರಿಸಿಕೊಳ್ಳಬಹುದು ಎಂದಾಯ್ತು. ಆದರೆ ಇದಕ್ಕೆ ಜೈಲಧಿಕಾರಿಗಳು ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಜೈಲಿನಲ್ಲಿ ಎಫ್​​ಎಸ್​​ಎಸ್​​ಎಐ ಸೂಚನೆಯಂತೆ ಫೋರ್ ಸ್ಟಾರ್ ಆಹಾರವನ್ನೇ ಎಲ್ಲ ಕೈದಿಗಳಿಗೂ ನೀಡಲಾಗುತ್ತಿದೆ. ಜೈಲಿನ ಆಹಾರ ಶುಚಿಯಾಗಿಯೂ, ರುಚಿಯಾಗಿಯೂ, ಆರೋಗ್ಯಕರವಾಗಿಯೂ ಇದೆ ಹೀಗಿರುವಾಗ ಮನೆಯಿಂದ ಊಟ ನೀಡುವ ಔಚಿತ್ಯ ಏನಿದೆ? ಎಂದಿದ್ದರು. ವಾದ ಆಲಿಸಿದ್ದ ಹೈಕೋರ್ಟ್ ಕಳೆದ ತಿಂಗಳೇ ಮನೆ ಊಟಕ್ಕೆ ತಡೆ ನೀಡಿತ್ತು. ಇದೀಗ ತಡೆಯನ್ನು ಆದೇಶವನ್ನಾಗಿ ಬದಲಾಯಿಸಿದ್ದು, ಇದೀಗ ಪವಿತ್ರಾ ಮತ್ತು ಇತರೆ ಆರೋಪಿಗಳ ಮನೆ ಊಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದೆ.

ಇದನ್ನೂ ಓದಿ:ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ

ನಿನ್ನೆಯೂ ಸಹ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಕೆಲವು ಮಹತ್ವದ ವಾದ ನಡೆದಿವೆ. ಎ3 ಆರೋಪಿ ಪರ ವಕೀಲರು ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಯನ್ನೇ ಆರೋಪಿಯನ್ನಾಗಿ ಮಾಡಲು ಹಾಕಿರುವ ಅರ್ಜಿ ಕುರಿತು ವಾದ ಮಂಡಿಸಿ, ಅದೊಂದು ಹಾಸ್ಯಾಸ್ಪದ ಅರ್ಜಿ ಎಂದರು. ಅಲ್ಲದೆ, ಒಂದೊಮ್ಮೆ ತನಿಖಾಧಿಕಾರಿ ಸಾಕ್ಷ್ಯ ತಿದ್ದಿದ್ದರೆ, ಸುಳ್ಳು ಸಾಕ್ಷ್ಯ ಸೃಷ್ಟಿಸಿದ್ದರೆ ವಿಚಾರಣೆ ವೇಳೆ ಅವರೇ ಅದಕ್ಕೆಲ್ಲ ಉತ್ತರ ನೀಡಲಿದ್ದಾರೆ ಎಂದರು. ಇನ್ನು ದರ್ಶನ್ ಪರ ವಕೀಲರು, ಪ್ರತಿದಿನವೂ ವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಅರ್ಜಿ ಹಾಕಿದರು. ಆದರೆ ಎಸ್​​ಪಿಪಿ ಅವರು ಪ್ರತಿದಿನವೂ ವಿಚಾರಣೆ ನಡೆಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Wed, 4 March 26

Follow Us