AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಪ್ರಕರಣ: ನ್ಯಾಯಾಲಯದಲ್ಲಿ ದರ್ಶನ್‌ ಸಲ್ಲಿಸಿದ್ದ ಎರಡು ಅರ್ಜಿಗಳು ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರಿಗೆ ಪದೇ ಪದೇ ಹಿನ್ನಡೆ ಆಗುತ್ತಿದೆ. ಅವರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳು ವಜಾಗೊಂಡಿವೆ. ಇದರಿಂದಾಗಿ ಅವರ ಕಾನೂನು ಹೋರಾಟಕ್ಕೆ ಹಿನ್ನಡೆ ಆಗಿದೆ. ಆ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.

ರೇಣುಕಾಸ್ವಾಮಿ ಪ್ರಕರಣ: ನ್ಯಾಯಾಲಯದಲ್ಲಿ ದರ್ಶನ್‌ ಸಲ್ಲಿಸಿದ್ದ ಎರಡು ಅರ್ಜಿಗಳು ವಜಾ
Darshan
ರಮೇಶ್​ ಎಮ್​.
| Edited By: |

Updated on: Oct 06, 2026 | 7:19 PM

Share

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೋರ್ಟ್ ವಿಚಾರಣೆ ಚುರುಕುಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಹಾಗೂ ಅವರ ಗ್ಯಾಂಗ್‌ಗೆ 59ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ವಿಚಾರಣೆ ವೇಳೆ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

59ನೇ ಸಿಸಿಹೆಚ್ ಕೋರ್ಟ್‌ನ ನ್ಯಾಯಾಧೀಶರಾದ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಈ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಸಾಕ್ಷಿ ಪ್ರದೋಷ್ ಅವರ ವಿಚಾರಣೆ ನಡೆಸುವ ವೇಳೆ, ‘ಪೊಲೀಸರು ಪ್ರದೋಷ್‌ಗೆ ಹೇಳಿಕೆ ನೀಡುವಂತೆ ತರಬೇತಿ ನೀಡುತ್ತಿದ್ದಾರೆ’ ಎಂದು ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಆಕ್ಷೇಪಣೆಯನ್ನು ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆ್ಯಕ್ಟ್ ಅಡಿಯಲ್ಲಿ ಸಾಕ್ಷ್ಯ ವಿಚಾರಣೆಯಲ್ಲಿ ಅಧಿಕೃತವಾಗಿ ದಾಖಲಿಸಿಕೊಳ್ಳಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಆದರೆ, ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಅದನ್ನು ಸಂಪೂರ್ಣವಾಗಿ ವಜಾಗೊಳಿಸಿದ್ದಾರೆ. ಮಾಫಿ ಸಾಕ್ಷಿ ಆಗಿರುವ ಪ್ರದೋಷ್ ಅವರ ವಿಚಾರಣೆ ಮತ್ತು ಮಹಜರ್‌ನಲ್ಲಿ ಸಂಗ್ರಹಿಸಲಾದ ಸಾಕ್ಷ್ಯಗಳ ಕುರಿತ ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ಮುಂದಿನ ದಿನದಲ್ಲೂ ಮುಂದುವರಿಯಲಿದೆ.

ಇನ್ನೊಂದೆಡೆ, ಜೈಲಿನಲ್ಲಿ ತಮಗೆ ಮೂಲಭೂತ ಸೌಕರ್ಯಗಳು ಮತ್ತು ಸೂಕ್ತ ರಕ್ಷಣೆ ಸಿಗುತ್ತಿಲ್ಲ ಎಂದು ಎ1 ಆರೋಪಿ ಪವಿತ್ರಾ ಗೌಡ ಹಾಗೂ ಪ್ರದೋಷ್ ಕೋರ್ಟ್ ಮೆಟ್ಟಿಲೇರಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನೈಜೀರಿಯಾ ಮೂಲದ ಮಹಿಳಾ ಸಹಕೈದಿಗಳಿಂದ ತಮಗೆ ಕಿರಿಕಿರಿಯಾಗುತ್ತಿದೆ ಎಂದು ಪವಿತ್ರಾ ಗೌಡ ದೂರಿದ್ದು, ತಮ್ಮ ಬ್ಯಾರಕ್ ಬದಲಾಯಿಸುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್

ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಸೂಕ್ತ ಅವಕಾಶ ನೀಡುತ್ತಿಲ್ಲ ಎಂದು ಪ್ರದೋಷ್ ಆಕ್ಷೇಪಿಸಿದ್ದರು. ಈ ಕುರಿತು ನ್ಯಾಯಾಲಯ ನೀಡಿದ್ದ ಸೂಚನೆಯಂತೆ ಜೈಲು ಅಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಿ ಇ-ಮೇಲ್ ಮೂಲಕ 59ನೇ ಸಿಸಿಹೆಚ್ ಕೋರ್ಟ್‌ಗೆ ಅಧಿಕೃತ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಪರಿಶೀಲಿಸಿ ನ್ಯಾಯಾಲಯವು ಆದೇಶ ಕಾಯ್ದಿರಿಸಿದ್ದು, ಶೀಘ್ರದಲ್ಲೇ ತೀರ್ಪು ಪ್ರಕಟಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ