AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ವಿದೇಶಿ ಕೈದಿಗಳಿಂದ ಬೆದರಿಕೆ: ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕಣ್ಣೀರು ಹಾಕಿದ ಪವಿತ್ರಾ ಗೌಡ

59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟಿ ಪವಿತ್ರಾ ಗೌಡ ಅವರು ಮನವಿ ಮಾಡಿದ್ದಾರೆ. ವಿಚಾರಣೆ ವೇಳೆ ಅವರು ಕಣ್ಣೀರು ಹಾಕಿದ್ದಾರೆ. ತಮಗೆ ಜೈಲಿನಲ್ಲಿ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಹಾಗಾಗಿ ಬೇರೆ ಬ್ಯಾರಕ್​ಗೆ ಸ್ಥಳಾಂತರ ಮಾಡುವಂತೆ ಕೋರಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಜೈಲಿನಲ್ಲಿ ವಿದೇಶಿ ಕೈದಿಗಳಿಂದ ಬೆದರಿಕೆ: ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕಣ್ಣೀರು ಹಾಕಿದ ಪವಿತ್ರಾ ಗೌಡ
Pavithra Gowda, Darshan
ರಮೇಶ್​ ಎಮ್​.
| Edited By: |

Updated on: Sep 22, 2026 | 4:16 PM

Share

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಮೊದಲ ಆರೋಪಿ (A1) ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ಸೂಕ್ತ ಭದ್ರತೆ ಇಲ್ಲ ಹಾಗೂ ನೈಜೀರಿಯಾ ದೇಶದ ಕೈದಿಗಳಿಂದ ಬೆದರಿಕೆ ಎದುರಾಗಿದೆ ಎಂದು ಆರೋಪಿಸಿ ಕೋರ್ಟ್ ಮುಂದೆ ಕಣ್ಣೀರಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ 59ನೇ ಸಿಸಿಹೆಚ್ ಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಪವಿತ್ರಾ ಗೌಡ ಪರ ವಕೀಲರು ವಾದ ಮಂಡಿಸಿ, ‘ಪವಿತ್ರಾ ಅವರನ್ನು ಇಂದಿಗೂ 35 ಜನರ ಜೊತೆ ಒಂದೇ ಬ್ಯಾರಕ್‌ನಲ್ಲಿ ಇರಿಸಲಾಗಿದೆ. ಅದೇ ಬ್ಯಾರಕ್‌ನಲ್ಲಿ ವಿದೇಶಿ (ನೈಜೀರಿಯಾ) ಆರೋಪಿಗಳೂ ಇದ್ದಾರೆ. ಪೊಲೀಸರು ಅವರಿಗೆ ಎಚ್ಚರಿಕೆ ನೀಡಿದ್ದರಿಂದ, ಅವರು ಪವಿತ್ರಾ ಅವರಿಗೆ ಜೈಲಿನಲ್ಲಿ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಅವರು ಸಾಕಷ್ಟು ಮಾನಸಿಕ ಹಾಗೂ ದೈಹಿಕ ಕಷ್ಟ ಅನುಭವಿಸುತ್ತಿದ್ದಾರೆ’ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದೇ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ಪವಿತ್ರಾ ಗೌಡ, ಕಣ್ಣೀರು ಒರೆಸಿಕೊಳ್ಳುತ್ತಾ ತಮಗೆ ಬೇರೆ ಬ್ಯಾರಕ್ ವ್ಯವಸ್ಥೆ ಮಾಡುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡರು. ಈ ಕುರಿತು ತಕ್ಷಣ ವರದಿ ನೀಡುವಂತೆ ಜೈಲು ಅಧಿಕಾರಿಗಳಿಗೆ 59ನೇ ಸಿಸಿಹೆಚ್ ಕೋರ್ಟ್ ಸೂಚನೆ ನೀಡಿದೆ.

ರೇಣುಕಾಸ್ವಾಮಿ ಕೇಸ್ ಹಿನ್ನೆಲೆ:

2024ರ ಜೂನ್‌ನಲ್ಲಿ ನಟ ದರ್ಶನ್‌ ಅವರ ಆಪ್ತೆ ಪವಿತ್ರಾ ಗೌಡ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಎಂಬ ಕಾರಣಕ್ಕೆ, ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಅಪಹರಿಸಿ ತಂದು ಬರ್ಬರವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪವಿತ್ರಾ ಗೌಡ (A1) ಹಾಗೂ ನಟ ದರ್ಶನ್‌ (A2) ಸೇರಿದಂತೆ ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಪವಿತ್ರಾ ಗೌಡ ಬ್ಯಾರಕ್ ಬದಲಾವಣೆಗೆ ಕೋರ್ಟ್ ಅನುಮತಿ; ಖುದ್ದು ಹಾಜರಿ ಕೋರಿ ದರ್ಶನ್ ರಿಟ್ ಅರ್ಜಿ

ಈ ಪ್ರಕರಣದ ಆರೋಪಿಗಳು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಸೂತ್ರಧಾರಿಯಾಗಿ ಪವಿತ್ರಾ ಗೌಡ ಹೆಸರು ಕೇಳಿಬಂದಿದ್ದು, ಪ್ರಸ್ತುತ ಜೈಲಿನಲ್ಲಿದ್ದುಕೊಂಡೇ ಜಾಮೀನು ಪಡೆಯಲು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಮಟ್ಟದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ