Nayanthara Net Worth: ನಯನತಾರಾ ಬಳಿ 77 ಕೋಟಿ ರೂ. ಮೌಲ್ಯದ ಆಸ್ತಿ; ಪತಿ ವಿಘ್ನೇಶ್​ ಆಸ್ತಿಯೂ ಸೇರಿದ್ರೆ ಎಷ್ಟಾಗಲಿದೆ?

Nayanthara | Vignesh Shivan: ಪ್ರತಿ ಸಿನಿಮಾಗೆ ನಯನತಾರಾ ಅವರು 4ರಿಂದ 5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎಂಬ ಮಾಹಿತಿ ಇದೆ. ಹಲವು ಐಷಾರಾಮಿ ಕಾರುಗಳು ಅವರ ಬಳಿ ಇವೆ.

Nayanthara Net Worth: ನಯನತಾರಾ ಬಳಿ 77 ಕೋಟಿ ರೂ. ಮೌಲ್ಯದ ಆಸ್ತಿ; ಪತಿ ವಿಘ್ನೇಶ್​ ಆಸ್ತಿಯೂ ಸೇರಿದ್ರೆ ಎಷ್ಟಾಗಲಿದೆ?
ನಯನತಾರಾ, ವಿಘ್ನೇಶ್ ಶಿವನ್
Follow us
TV9 Web
| Updated By: ಮದನ್​ ಕುಮಾರ್​

Updated on: Jun 09, 2022 | 2:21 PM

ದಕ್ಷಿಣ ಭಾರತದ ಬಹುಬೇಡಿಕೆಯ ಹೀರೋಯಿನ್​ಗಳ ಪಟ್ಟಿಯಲ್ಲಿ ನಯನತಾರಾ (Nayanthara Vignesh Wedding) ಹೆಸರು ಕೂಡ ಪ್ರಮುಖವಾಗಿದೆ. 2003ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಂದಿಗೂ ಅವರಿಗೆ ದೊಡ್ಡ ಮಟ್ಟದ ಡಿಮ್ಯಾಂಡ್​ ಇದೆ. ಅನೇಕ ಸ್ಟಾರ್​ ಕಲಾವಿದರ ಜೊತೆ ನಟಿಸಿ ನಯನತಾರಾ ಗೆಲುವು ಕಂಡಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಇರುವ ಅನುಭವ ಅಪಾರ. ಈಗ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ (Vignesh Shivan) ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಂದು (ಜೂನ್​ 9) ಮಹಾಬಲಿಪುರಂನಲ್ಲಿ ಅವರ ವಿವಾಹ ಸಮಾರಂಭ ನಡೆಯುತ್ತಿದೆ. ಅನೇಕ ಗಣ್ಯರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಶಾರುಖ್​ ಖಾನ್​, ರಜನಿಕಾಂತ್​, ಕಾರ್ತಿ, ಬೋನಿ ಕಪೂರ್​ ಸೇರಿದಂತೆ ಹಲವರು ಬಂದು ನವಜೋಡಿಗೆ ಶುಭ ಕೋರಿದ್ದಾರೆ. ಭಾರತದ ಶ್ರೀಮಂತ ನಟಿಯರಲ್ಲಿ ನಯನತಾರಾ ಕೂಡ ಪ್ರಮುಖರು. ಅವರ ಒಟ್ಟು ಆಸ್ತಿ ಮೌಲ್ಯ (Nayanthara Net Worth) 77 ಕೋಟಿ ರೂಪಾಯಿ ಎನ್ನಲಾಗಿದೆ. ಹಾಗಾದರೆ ಅವರ ಪತಿ ವಿಘ್ನೇಶ್​ ಶಿವನ್​ ಬಳಿ ಎಷ್ಟು ಆಸ್ತಿ ಇದೆ? ಈ ಕುರಿತು ಇಲ್ಲಿದೆ ಮಾಹಿತಿ..

ಪ್ರತಿ ಸಿನಿಮಾಗೆ ನಯನತಾರಾ ಅವರು 4ರಿಂದ 5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎಂಬ ಮಾಹಿತಿ ಇದೆ. ಈ ಸಂಖ್ಯೆಗಳ ಬಗ್ಗೆ ಅವರು ಎಲ್ಲಿಯೂ ಬಾಯಿ ಬಿಟ್ಟಿಲ್ಲವಾದರೂ ಕೆಲವು ಕಡೆಗಳಲ್ಲಿ ಈ ಕುರಿತು ವರದಿ ಪ್ರಕಟ ಆಗಿದೆ. ಹಲವು ಪ್ರತಿಷ್ಠಿತ ಕಂಪನಿಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಪ್ರತಿ ಬ್ರ್ಯಾಂಡ್​ನಿಂದ ಅವರು 50ರಿಂದ 60 ಲಕ್ಷ ರೂಪಾಯಿ ಗಳಿಸುತ್ತಾರೆ. ಬೆಂಗಳೂರು, ಚೆನ್ನೈ, ಹೈದರಾಬಾದ್​ ಮತ್ತು ಕೇರಳದಲ್ಲಿ ನಯನತಾರಾ ಅವರು ಪ್ರಾಪರ್ಟಿ ಹೊಂದಿದ್ದಾರೆ. ಹಲವು ಬಗೆಯ ಐಷಾರಾಮಿ ಕಾರುಗಳು ಅವರ ಬಳಿ ಇವೆ.

ಇದನ್ನೂ ಓದಿ: ನಯನತಾರಾ-ವಿಘ್ನೇಶ್​ ಮದುವೆ ಒಟಿಟಿಯಲ್ಲಿ ಪ್ರಸಾರ? ಇದನ್ನು ಖರೀದಿಸಿದ್ದು ಯಾರು?

ಇದನ್ನೂ ಓದಿ
Image
Nayanthara Marriage: ಪ್ರಭುದೇವ ಜತೆ ಡೇಟಿಂಗ್​ ಮಾಡುತ್ತಿದ್ದ ನಯನತಾರಾ ಬ್ರೇಕಪ್​ ಮಾಡಿಕೊಂಡಿದ್ದು ಯಾಕೆ?
Image
Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು
Image
Nayanthara Vignesh Wedding: ‘ಸೂಪರ್​’ ಚಿತ್ರದ ನಟಿ​ ನಯನತಾರಾಗೆ ಮದುವೆ ಸಂಭ್ರಮ; ವಿಘ್ನೇಶ್​ ಶಿವನ್​ ಕೈ ಹಿಡಿದ ಸುಂದರಿ
Image
Nayanthara Wedding: ನಯನತಾರಾ ಜತೆ ಮದುವೆ ಆಗೋಕಿಂತ ಕೆಲವೇ ಗಂಟೆ ಮುನ್ನ ಪ್ರಮುಖರಿಗೆ ಧನ್ಯವಾದ ತಿಳಿಸಿದ ವಿಘ್ನೇಶ್​ ಶಿವನ್​

ಇನ್ನು, ವಿಘ್ನೇಶ್​ ಶಿವನ್​ ಅವರು ನಿರ್ದೇಶಕನಾಗಿ ಮಾತ್ರವಲ್ಲದೇ ಗೀತರಚನಾಕಾರನಾಗಿಯೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಪ್ರತಿ ಹಾಡಿಗೆ ಅವರು ಮೂರು ಲಕ್ಷ ರೂಪಾಯಿಗಳವರೆಗೆ ಸಂಭಾವನೆ ಪಡೆಯುತ್ತಾರೆ. ಸಿನಿಮಾ ನಿರ್ದೇಶನಕ್ಕೆ 2ರಿಂದ 3 ಕೋಟಿ ರೂಪಾಯಿ ಡಿಮ್ಯಾಂಡ್​ ಮಾಡುತ್ತಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ವಿಘ್ನೇಶ್​ ಶಿವನ್​ ಬಳಿ ಅಂದಾಜು 50 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ ಎನ್ನಲಾಗಿದೆ. ಇಬ್ಬರ ಆಸ್ತಿಯೂ ಸೇರಿಸಿದರೆ ಸುಮಾರು 130 ಕೋಟಿ ರೂಪಾಯಿ ನೆಟ್​ ವರ್ಥ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ