AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Health: ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ವದಂತಿ; ಗೊಂದಲದಲ್ಲಿ ಅಭಿಮಾನಿಗಳು

Samantha Ruth Prabhu: ಸಮಂತಾ ರುತ್​ ಪ್ರಭು ಆರೋಗ್ಯದ ಬಗ್ಗೆ ಹಲವು ವರದಿಗಳು ಪ್ರಕಟ ಆಗಿವೆ. ಇದರಿಂದ ಅಭಿಮಾನಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

Samantha Health: ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ವದಂತಿ; ಗೊಂದಲದಲ್ಲಿ ಅಭಿಮಾನಿಗಳು
ಸಮಂತಾ
TV9 Web
| Edited By: |

Updated on:Nov 24, 2022 | 4:25 PM

Share

ಸೋಶಿಯಲ್ ಮೀಡಿಯಾ ಬಳಕೆ ಹೆಚ್ಚಾದ ಬಳಿಕ ಸುಳ್ಳು ಸುದ್ದಿಗಳ ಹರಡುವಿಕೆ ಕೂಡ ಹೆಚ್ಚಾಗಿದೆ. ಸೆಲೆಬ್ರಿಟಿಗಳ ಆರೋಗ್ಯದ ಬಗ್ಗೆ ಕೆಲವು ಕಿಡಿಗೇಡಿಗಳು ಆಗಾಗ ವದಂತಿ ಹಬ್ಬಿಸುತ್ತಾರೆ. ಇತ್ತೀಚಿನ ದಿನಗಳಲ್ಲಂತೂ ಇದು ಅತಿಯಾಗಿದೆ. ಯಾವುದನ್ನು ನಂಬಬೇಕು, ಯಾವುದನ್ನು ಬಿಡಬೇಕು ಎಂಬ ಅನುಮಾನ ಅಭಿಮಾನಿಗಳನ್ನು ಕಾಡುತ್ತದೆ. ನಟಿ ಸಮಂತಾ ರುತ್​ ಪ್ರಭು ಅವರ ಆರೋಗ್ಯ (Samantha Health) ಪೂರ್ತಿಯಾಗಿ ಸುಧಾರಿಸಿಲ್ಲ ಎಂಬುದು ಗೊತ್ತಿರುವ ವಿಚಾರ. ಈ ನಡುವೆಯೇ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಅವರಿಗೆ ಏನೂ ಗಂಭೀರ ಸಮಸ್ಯೆ ಇಲ್ಲ ಎಂದು ಆಪ್ತ ಮೂಲಗಳು ತಿಳಿಸಿರುವುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಒಟ್ಟಿನಲ್ಲಿ ಸಮಂತಾ (Samantha Ruth Prabhu) ಅಭಿಮಾನಿಗಳಂತೂ ಗೊಂದಲಕ್ಕೆ ಸಿಲುಕಿದ್ದಾರೆ.

ಸಮಂತಾ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅವರು ಕೇವಲ ಟಾಲಿವುಡ್​ಗೆ ಸೀಮಿತವಾಗಿಲ್ಲ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನಲ್ಲಿ ನಟಿಸಿದ ಬಳಿಕ ಅವರು ಉತ್ತರ ಭಾರತದಲ್ಲಿ ಹೆಚ್ಚು ಫೇಮಸ್​ ಆದರು. ‘ಪುಷ್ಪ 2’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ ಬಳಿಕ ಇನ್ನಷ್ಟು ಜನಪ್ರಿಯತೆ ಪಡೆದುಕೊಂಡರು. ಈಗ ಅವರ ಕೈಯಲ್ಲಿ ಅನೇಕ ಆಫರ್​ಗಳಿವೆ. ಆದರೆ ಅವರ ವೇಗಕ್ಕೆ ಅನಾರೋಗ್ಯದಿಂದ ಬ್ರೇಕ್​ ಬಿದ್ದಿದೆ.

Myositis ಎಂಬ ಆರೋಗ್ಯ ಸಮಸ್ಯೆಯಿಂದ ಸಮಂತಾ ಬಳಲುತ್ತಿದ್ದಾರೆ ಎಂಬುದು ನಿಜ. ಅದರ ಸಲುವಾಗಿ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ಹಂತಕ್ಕೆ ಗುಣಮುಖರಾದ ಬಳಿಕ ‘ಯಶೋದಾ’ ಚಿತ್ರದ ಕೆಲಸಗಳಲ್ಲಿ ಪಾಲ್ಗೊಂಡರು. ಅಂತೂ ಆ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಅಭಿಮಾನಿಗಳ ಗಮನ ಸೆಳೆದಿದೆ. ‘ಯಶೋದಾ’ ಚಿತ್ರದ ಗೆಲುವನ್ನು ಸಂಭ್ರಮಿಸುತ್ತಿರುವಾಗಲೇ ಅನಾರೋಗ್ಯದ ಬಗ್ಗೆ ವದಂತಿ ಹಬ್ಬಿದೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಈ ಹಿಂದೆ ಕೆಲವು ಯೂಟ್ಯೂಬ್​ ಚಾನೆಲ್​ಗಳು ಸಮಂತಾ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಗಳನ್ನು ಬಿತ್ತರ ಮಾಡಿದ್ದವು. ಇದರಿಂದ ಸಮಂತಾ ವೃತ್ತಿಜೀವನಕ್ಕೆ ತೊಂದರೆ ಆಗುವಂತಿತ್ತು. ಹಾಗಾಗಿ ಅವರು ಅಂಥ ಯೂಟ್ಯೂಬ್ ಚಾನೆಲ್​ಗಳ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳುವ ಬಗ್ಗೆ ಯೋಚಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಈಗ ಮತ್ತೆ ಸಮಂತಾ ಕುರಿತು ಗಾಸಿಪ್​ ಹಬ್ಬಿರುವುದರಿಂದ ಅವರು ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬ ಕೌತುಕ ಮನೆ ಮಾಡಿದೆ.

ವಿಜಯ್​ ದೇವರಕೊಂಡ ಜೊತೆ ಸಮಂತಾ ಅವರು ಖುಷಿ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದರ ಜೊತೆಗೆ ‘ಶಾಕುಂತಲಂ’ ಸಿನಿಮಾಗೆ ಕೊನೇ ಹಂತದ ಪೋಸ್ಟ್​ ಕೆಲಸಗಳು ನಡೆಯುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:25 pm, Thu, 24 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು