ಚುನಾವಣೆಗೆ ಸ್ಪರ್ಧಿಸಿದ್ದ ಸಿನಿಮಾ ಸೆಲೆಬ್ರಿಟಿಗಳಲ್ಲಿ ಗೆದ್ದವರೆಷ್ಟು? ಸೋತವರೆಷ್ಟು?

ಲೋಕಸಭಾ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಬಿಜೆಪಿ ನೇತೃತ್ವದ ಎನ್​ಡಿಎ ಸರಳ ಬಹುಮತ ಪಡೆದುಕೊಂಡಿದೆ. ಕೆಲವು ಪ್ರಮುಖ ಸಿನಿಮಾ ತಾರೆಯರು ಚುನಾವಣೆಗೆ ಸ್ಪರ್ಧಿಸಿದ್ದರು, ಅವರಲ್ಲಿ ಗೆದ್ದವರು ಯಾರು? ಸೋತವರು ಯಾರು? ಇಲ್ಲಿದೆ ಪಟ್ಟಿ.

ಚುನಾವಣೆಗೆ ಸ್ಪರ್ಧಿಸಿದ್ದ ಸಿನಿಮಾ ಸೆಲೆಬ್ರಿಟಿಗಳಲ್ಲಿ ಗೆದ್ದವರೆಷ್ಟು? ಸೋತವರೆಷ್ಟು?
Follow us
ಮಂಜುನಾಥ ಸಿ.
|

Updated on:Jun 04, 2024 | 7:57 PM

ಲೋಕಸಭೆ ಚುನಾವಣೆ 2014ರ (Lok Sabha Election) ಫಲಿತಾಂಶ ಬಹುತೇಕ ಹೊರಬಿದ್ದಿದೆ. ಬಿಜೆಪಿಗ ನೇತೃತ್ವದ ಎನ್​ಡಿಎಗೆ ಸರಳ ಬಹುಮತ ಬಂದಿದೆ. ರಾಜಕೀಯ ಹಾಗೂ ಸಿನಿಮಾ ರಂಗ ಪರಸ್ಪರ ಆತ್ಮೀಯ ಬಂಧ ಹೊಂದಿರುವ ಕ್ಷೇತ್ರಗಳು. ಈ ಬಾರಿಯೂ ಸಹ ಕೆಲವು ಸಿನಿಮಾ ಸೆಲೆಬ್ರಿಟಿಗಳಿಗೆ ಕೆಲವು ರಾಜಕೀಯ ಪಕ್ಷಗಳು ಚುನಾವಣಾ ಟಿಕೆಟ್ ನೀಡಿದ್ದವು. ಅಂತೆಯೇ ಕೆಲವರು ಗೆಲುವು ಸಹ ಸಾಧಿಸಿದ್ದಾರೆ. ಕೆಲವರು ಸೋತಿದ್ದಾರೆ. ಯಾರು ಗೆದ್ದರು, ಯಾರು ಸೋತರು ಎಂಬ ಪಟ್ಟಿ ಇಲ್ಲಿದೆ.

ಗೀತಾ ಶಿವರಾಜ್ ಕುಮಾರ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ, ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಶಿವಣ್ಣ, ಪತ್ನಿ ಗೀತಾ ಪರವಾಗಿ ಚುರುಕಿನ ಪ್ರಚಾರ ಮಾಡಿದ್ದರು. ಆದರೆ ಗೀತಾ ಶಿವರಾಜ್ ಕುಮಾರ್ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ. ಬಿಜೆಪಿಯ ಬಿವೈ ರಾಘವೇಂದ್ರ ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.

ಕಂಗನಾ ರನೌತ್

ಬಾಲಿವುಡ್ ನಟಿ ಕಂಗನಾ ರನೌತ್ ಕಳೆದ ಐದಾರು ವರ್ಷದಿಂದ ಬಿಜೆಪಿ ಪರವಾಗಿ ಟ್ವೀಟ್​ಗಳನ್ನು ಮಾಡುತ್ತಲೇ ಬಂದಿದ್ದರು. ಅದರ ಪ್ರತಿಯಾಗಿ ಈ ಬಾರಿ ಲೋಕಸಭಾ ಟಿಕೆಟ್ ಅನ್ನು ಪಡೆದಿದ್ದರು. ಎದುರಿಸಿದ ಮೊದಲ ಚುನಾವಣೆಯಲ್ಲಿಯೇ ಕಂಗನಾ ಗೆದ್ದಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.

ನಂದಮೂರಿ ಬಾಲಕೃಷ್ಣ

ತೆಲುಗು ಚಿತ್ರರಂಗದ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ, ಟಿಡಿಪಿ ಪಕ್ಷದ ಅಭ್ಯರ್ಥಿಯಾಗಿ ಹಿಂದೂಪುರದಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದು ಅವರಿಗೆ ಮೂರನೇ ಗೆಲುವು. ಅವರು ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.

ರವಿಕಿಶನ್

ಭೋಜಪುರಿ ನಟನಾಗಿ ಆ ಬಳಿಕ ಬಾಲಿವುಡ್, ತೆಲುಗು, ಕನ್ನಡ ಸಿನಿಮಾಗಳಲ್ಲಿಯೂ ವಿಲನ್, ಪೋಷಕ ಪಾತ್ರಗಳಲ್ಲಿ ನಟಿಸಿರುವ ನಟ ರವಿಕಿಶನ್ ಬಿಜೆಪಿ ಅಭ್ಯರ್ಥಿಯಾಗಿ ಉತ್ತರ ಪ್ರದೇಶದ ಗೋರಖ್​ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಅವರು ಗೆಲುವು ಸಾಧಿಸಿದ್ದು, ಇದು ರವಿಕಿಶನ್ ಅವರಿಗೆ ಎರಡನೇ ಗೆಲುವಾಗಿದೆ.

ಮನೋಜ್ ತಿವಾರಿ

ಭೋಜ್​ಪುರಿ ಚಿತ್ರರಂಗದ ಜನಪ್ರಿಯ ನಾಯಕ ನಟ ಮತ್ತು ಗಾಯಕ ಮನೋಜ್ ತಿವಾರಿ ಈಶಾನ್ಯ ದೆಹಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಎದುರಾಳಿ ಕಾಂಗ್ರೆಸ್​ನ ಕನ್ಹಯ್ಯ ಕುಮಾರ್ ಎದುರು ಗೆದ್ದು ಬೀಗಿದ್ದಾರೆ. ಕಳೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲನುಭವಿಸಿದ್ದರು.

ಇದನ್ನೂ ಓದಿ:ಲೋಕಸಭೆ ಚುನಾವಣೆ ಫಲಿತಾಂಶ 2024 ಲೈವ್: ದೆಹಲಿ ಎಐಸಿಸಿ ಕಚೇರಿಯಲ್ಲಿ ರಾಹುಲ್, ಖರ್ಗೆ ಸುದ್ದಿಗೋಷ್ಠಿ

ಸುರೇಶ್ ಗೋಪಿ

ಮಲಯಾಳಂ ನಟ ಸುರೇಶ್ ಗೋಪಿ ಕೇರಳದಲ್ಲಿ ದಾಖಲೆಯನ್ನೇ ಬರೆದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಸುರೇಶ್ ಗೋಪಿ ವಿಜಯ ಸಾಧಿಸಿ, ಬಿಜೆಪಿಯ ಖಾತೆಯನ್ನು ಕೇರಳದಲ್ಲಿ ತೆರೆದಿದ್ದಾರೆ. ಶ್ರಿಶೂರ್ ಕ್ಷೇತ್ರದಿಂದ ಅವರು ಸ್ಪರ್ಧೆ ಮಾಡಿದ್ದರು. ತಮ್ಮ ವಿಜಯವನ್ನು ಅವರು ಮೋದಿಗೆ ಅರ್ಪಿಸಿದ್ದಾರೆ.

ಪವನ್ ಕಲ್ಯಾಣ್

ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಆಂಧ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಜನಸೇನಾ ಪಕ್ಷದ ಸಂಸ್ಥಾಪಕರೂ ಆಗಿರುವ ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರಿಗೆ ಭಾರಿ ಜಯ ದೊರೆತಿರುವುದು ಮಾತ್ರವೇ ಅಲ್ಲದೆ ಜನಸೇನಾ ಪಕ್ಷದ 21 ಅಭ್ಯರ್ಥಿಗಳು ಸಹ ಗೆಲುವು ಪಡೆದಿದ್ದಾರೆ.

ಅರುಣ್ ಗೋವಿಲ್

ಜನಪ್ರಿಯ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರಧಾರಿಯಾಗಿದ್ದ ಅರುಣ್ ಗೋವಿಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಮೀರಟ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರುಣ್ ಗೋವಿಲ್ ಆರಂಭಿಕ ಹಿನ್ನಡೆ ಅನುಭವಿಸಿದ್ದರು. ಆದರೆ ಬಳಿಕ ಅವರು ಮುನ್ನಡೆಗೆ ಬಂದರು. ಅವರ ಗೆಲುವು ಇನ್ನೂ ಖಾತ್ರಿ ಆಗಿಲ್ಲ. ಫಲಿತಾಂಶ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:Chanakya Exit Poll 2024: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಬಹುಮತ? ಚಾಣಕ್ಯ ಮತಗಟ್ಟೆ ಸಮೀಕ್ಷೆ ಹೀಗಿದೆ

ಶತ್ರುಜ್ಞ ಸಿಂಹ

ಈ ಹಿಂದೆ ಬಿಜೆಪಿಯಲ್ಲಿದ್ದ ಹಿರಿಯ ನಟ ಶತ್ರುಜ್ಞ ಸಿಂಹ ಮೋದಿಯ ಏಕಮೇವಾಧಿಪತ್ಯವನ್ನು ಟೀಕಿಸಿ ಪಕ್ಷದಿಂದ ಹೊರಬಂದಿದ್ದರು. ಅವರು ಟಿಎಂಸಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಹೇಮಾಮಾಲಿನಿ

ಮಥುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೇಮಾಮಾಲಿನಿ ಮತ್ತೊಮ್ಮೆ ಭಾರಿ ಅಂತರದ ಜಯ ಕಂಡಿದ್ದಾರೆ. ಈ ಹಿಂದೆಯೂ ಅವರು ಇದೇ ಕ್ಷೇತ್ರದಿಂದ ಗೆಲುವು ಕಂಡಿದ್ದರು. ಕೇವಲ ಚುನಾವಣೆ ಸಮಯದಲ್ಲಿ ಮಾತ್ರವೇ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಾರೆಂಬ ಆರೋಪ ಅವರ ಮೇಲಿದೆ. ಹಾಗಿದ್ದರೂ ಸಹ ಅವರು ಗೆಲುವು ಸಾಧಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Tue, 4 June 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ