ಅಂಬಾನಿ ಮಗನ ಮದುವೆಗೆ ಬಂದ ಗಾಯಕಿ ರಿಯಾನಾಗೆ 74 ಕೋಟಿ ರೂಪಾಯಿ ಸಂಭಾವನೆ

ಮಾರ್ಚ್​ 1ರಿಂದ 3ರ ತನಕ ಮೂರು ದಿನಗಳ ಕಾಲ ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಮದುವೆ ನಡೆಯಲಿದೆ. ಈ ಅದ್ದೂರಿ ವಿವಾಹ ಸಮಾರಂಭಕ್ಕೆ ದೇಶ-ವಿದೇಶದ ಸೆಲೆಬ್ರಿಟಿಗಳು ಬಂದು ಮನರಂಜನೆ ನೀಡಲಿದ್ದಾರೆ. ಜನಪ್ರಿಯ ಗಾಯಕಿ ರಿಯಾನಾ ಕೂಡ ಆಗಮಿಸಿದ್ದು, ಅವರಿಗೆ ಅಂಬಾನಿ ಕುಟುಂಬದವರು 74 ಕೋಟಿ ರೂಪಾಯಿ ಸಂಭಾವನೆ ನೀಡಿದ್ದಾರೆ ಎಂದು ಸುದ್ದಿ ಆಗಿದೆ.

ಅಂಬಾನಿ ಮಗನ ಮದುವೆಗೆ ಬಂದ ಗಾಯಕಿ ರಿಯಾನಾಗೆ 74 ಕೋಟಿ ರೂಪಾಯಿ ಸಂಭಾವನೆ
ಅನಂತ್​ ಅಂಬಾನಿ, ರಾಧಿಕಾ ಮರ್ಚೆಂಟ್​, ರಿಯಾನಾ

Updated on: Mar 01, 2024 | 1:10 PM

ಮುಕೇಶ್​ ಅಂಬಾನಿ ಅವರ ಮನೆಯಲ್ಲಿ ಶುಭ ಕಾರ್ಯ ನಡೆಯುತ್ತಿದೆ ಎಂದರೆ ಅದಕ್ಕೆ ಬಹುಕೋಟಿ ರೂಪಾಯಿ ಖರ್ಚಾಗುತ್ತದೆ. ದೇಶ ವಿದೇಶದ ಸೆಲೆಬ್ರಿಟಿಗಳು ಬಂದು ಮನರಂಜನಾ ಕಾರ್ಯಕ್ರಮ ನೀಡುತ್ತಾರೆ. ಅಂಥ ಸೆಲೆಬ್ರಿಟಿಗಳಿಗೆ ದೊಡ್ಡ ಮೊತ್ತದ ಸಂಭಾವನೆ ನೀಡಲಾಗುತ್ತದೆ. ಈಗ ಜನಪ್ರಿಯ ಗಾಯಕಿ ರಿಯಾನಾ (Rihanna) ಅವರು ಭಾರತಕ್ಕೆ ಬಂದಿದ್ದಾರೆ. ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರ ಅನಂತ್​ ಅಂಬಾನಿ (Anant Ambani) ಮದುವೆಯಲ್ಲಿ ಮನರಂಜನೆ ನೀಡಲು ರಿಯಾನಾ ಅವರನ್ನು ಕರೆಸಲಾಗಿದೆ. ಅವರಿಗೆ ಬರೋಬ್ಬರಿ 74 ಕೋಟಿ ರೂಪಾಯಿ ಸಂಭಾವನೆ (Rihanna Remuneration) ನೀಡಲಾಗಿದೆ ಎಂದು ವರದಿ ಆಗಿದೆ. ಈ ಸುದ್ದಿ ಕೇಳಿ ಎಲ್ಲರೂ ಹೌಹಾರಿದ್ದಾರೆ.

ರಿಯಾನಾ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಹಾಡುಗಳು ಸೂಪರ್​ ಹಿಟ್​ ಆಗಿವೆ. ರಿಯಾನಾ ಅವರ ಬಗ್ಗೆ ಯುವ ಜನತೆಗೆ ಸಿಕ್ಕಾಪಟ್ಟೆ ಕ್ರೇಜ್​ ಇದೆ. ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಮದುವೆಯಲ್ಲಿ ರಿಯಾನಾ ಮನರಂಜನಾ ಕಾರ್ಯಕ್ರಮ ನೀಡಲಿದ್ದಾರೆ. ದೂರದ ಬಾರ್ಬೆಡೋಸ್​ ದೇಶದಿಂದ ಬಂದಿರುವ ಅವರಿಗೆ ಈಗ 36 ವರ್ಷ. ವಿಶ್ವದ ಅತಿ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ರಿಯಾನಾ ಹೆಸರು ಕೂಡ ಇದೆ.

ಶ್ರೀಮಂತರ ಮದುವೆಗಳಲ್ಲಿ ಸೆಲೆಬ್ರಿಟಿಗಳು ಮನರಂಜನೆ ನೀಡುವುದು ಕಾಮನ್​. ಮುಕೇಶ್​ ಅಂಬಾನಿ ಅವರು ನೇರವಾಗಿ ವಿದೇಶದ ಟಾಪ್​ ಗಾಯಕರನ್ನು ಆಹ್ವಾನಿಸಿದ್ದಾರೆ. ಅವರಿಗೆ ಹತ್ತಾರು ಕೋಟಿ ರೂಪಾಯಿ ಸಂಭಾವನೆ ನೀಡುತ್ತಿದ್ದಾರೆ. ಸಿಂಗರ್​ ರಿಯಾನಾ ಅವರು ಕೇವಲ ಒಂದು ದಿನ ಸಂಗೀತ ಕಾರ್ಯಕ್ರಮ ನೀಡಲು 74 ಕೋಟಿ ರೂಪಾಯಿ ಪಡೆಯುತ್ತಿದ್ದಾರೆ ಎಂಬುದು ಅಚ್ಚರಿಯ ವಿಚಾರ.

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

ರಿಯಾನಾ ಪಡೆಯುತ್ತಿರುವ ಈ ಸಂಭಾವನೆಯಲ್ಲಿ ಹಲವು ಬಿಗ್ ಬಜೆಟ್​ ಸಿನಿಮಾಗಳನ್ನು ನಿರ್ಮಿಸಬಹುದು. ಅಷ್ಟು ದೊಡ್ಡ ಮೊತ್ತವನ್ನು ಅವರು ಒಂದೇ ದಿನಕ್ಕೆ ಪಡೆಯುತ್ತಿದ್ದಾರೆ. ಇನ್ನು, ರಿಯಾನಾ ಅವರು ತಮ್ಮ ಜೊತೆ ದೊಡ್ಡ ತಂಡವನ್ನು ಕರೆದುಕೊಂಡು ಬಂದಿದ್ದಾರೆ. ಅಚ್ಚರಿಯ ಸಂಗತಿ ಏನೆಂದರೆ, ಅವರ ಜೊತೆ ಟ್ರಕ್​ಗಟ್ಟಲೆ ಲಗೇಜ್​ ಕೂಡ ಭಾರತಕ್ಕೆ ಬಂದಿದೆ. ಗುಜರಾತ್​ನ ಜಾಮ್ನಗರ್​ ವಿಮಾನ ನಿಲ್ದಾಣದಲ್ಲಿ ರಿಯಾನಾ ಅವರ ಲಗೇಜ್​ಗಳನ್ನು ತೆಗೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್​ ಆಗಿದೆ. ಇದನ್ನು ನೋಡಿ ನೆಟ್ಟಿಗರಿಗೆ ಅಚ್ಚರಿ ಆಗಿದೆ. ‘ರಿಯಾನಾ ಅವರು ತಮ್ಮ ಇಡೀ ಮನೆಯನ್ನೇ ಮಡಚಿಕೊಂಡು ವಿಮಾನದಲ್ಲಿ ತಂದಿರಬಹುದಾ’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us