ಟಿವಿಕೆ ಜಯಭೇರಿ: ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ

ಖ್ಯಾತ ನಟ ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗುವ ಸಮಯ ಬಂದಿದೆ. ಅವರ ಈ ಸಾಧನೆಗಾಗಿ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಕನ್ನಡದ ಸ್ಟಾರ್ ನಟರಾದ ಶಿವರಾಜ್​ಕುಮಾರ್, ರಿಷಬ್ ಶೆಟ್ಟಿ ಕೂಡ ಅಭಿನಂದನೆ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಟಿವಿಕೆ ಜಯಭೇರಿ: ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ
Thalapathy Vijay, Rishab Shetty

Updated on: May 05, 2026 | 4:45 PM

ಮೊದಲ ಬಾರಿಗೆ ಚುನಾವಣೆಯ ಅಖಾಡಕ್ಕೆ ಇಳಿದ ನಟ ದಳಪತಿ ವಿಜಯ್ (Thalapathy Vijay) ಅವರಿಗೆ ಗೆಲುವು ಸಿಕ್ಕಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಬರೋಬ್ಬರಿ 108 ಸ್ಥಾನಗಳನ್ನು ಗೆದ್ದಿದೆ. ಇದು ಸಾಧಾರಣ ಗೆಲುವಲ್ಲ. ಸಿನಿಮಾ ಕ್ಷೇತ್ರದಿಂದ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ನೀಡಿ, ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದ ದಳಪತಿ ವಿಜಯ್ ಅವರಿಗೆ ಅನೇಕ ಸೆಲೆಬ್ರಿಟಿಗಳು ಕೂಡ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಕೂಡ ವಿಜಯ್ ಅವರನ್ನು ಅಭಿನಂದಿಸಿದ್ದಾರೆ.

1. ದಳಪತಿ ವಿಜಯ್ ಅವರಿಗೆ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

2. ಸೋಶಿಯಲ್ ಮೀಡಿಯಾದಲ್ಲಿ ರಿಷಬ್ ಶೆಟ್ಟಿ ಅವರು ಪೋಸ್ಟ್ ಮಾಡಿದ್ದಾರೆ.

3. ‘ಯುವ ಜನರಿಗೆ ನಿಮ್ಮ ಈ ಸಾಧನೆಯು ಸ್ಫೂರ್ತಿಯಾಗಲಿ’ ಎಂದ ರಿಷಬ್ ಶೆಟ್ಟಿ.

 

ಸೋಶಿಯಲ್ ಮೀಡಿಯಾದಲ್ಲಿ ರಿಷಬ್ ಶೆಟ್ಟಿ ಅವರು ಪೋಸ್ಟ್ ಮಾಡಿದ್ದಾರೆ. ‘ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದ ವಿಜಯ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಆಗಲಿ. ಇನ್ನಷ್ಟು ಯುವ ಜನರಿಗೆ ನಿಮ್ಮ ಈ ಸಾಧನೆಯು ಸ್ಫೂರ್ತಿಯಾಗಲಿ’ ಎಂದು ರಿಷಬ್ ಶೆಟ್ಟಿ ಅವರು ಶುಭ ಹಾರೈಸಿದ್ದಾರೆ.

ನಟ ಶಿವರಾಜ್​ಕುಮಾರ್ ಕೂಡ ಅಭಿನಂದನೆ ತಿಳಿಸಿದ್ದಾರೆ. ‘ವಿಜಯ್ ಅವರಿಗೆ ಇದು ಅರ್ಹ ಗೆಲುವು. ತೀವ್ರವಾದ ಟೀಕೆ-ದಾಳಿಗಳ ನಡುವೆಯೂ ಮೌನವಾಗಿರುವುದು ಮತ್ತು ನಿಮ್ಮ ಕೆಲಸವೇ ಮಾತನಾಡುವಂತೆ ಮಾಡುವುದು ಎಲ್ಲಕ್ಕಿಂತ ದೊಡ್ಡ ಗೆಲುವು. ಈ ಹಿಂದೆ ಮಾಧ್ಯಮಗಳ ಜೊತೆಗಿನ ಸಂವಾದವೊಂದರಲ್ಲಿ ನಾನು ತಮಾಷೆಯಾಗಿ ‘TVK ಎಂದರೆ – Try Vijay As King’ (ವಿಜಯ್ ಅವರನ್ನು ರಾಜನನ್ನಾಗಿ ನೋಡಿ) ಎಂದು ಹೇಳಿದ್ದೆ. ಇಂದು ನೀವು ನಿಜವಾಗಿಯೂ ಒಬ್ಬ ರಾಜನಂತೆ ಎತ್ತರಕ್ಕೆ ಬೆಳೆದು ನಿಂತಿದ್ದೀರಿ. ತಮಿಳುನಾಡಿನ ಜನತೆಗೆ ನೀವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವಂತಾಗಲಿ ಮತ್ತು ಅಲ್ಲಿ ಸದಾ ಪ್ರಗತಿಯುಂಟಾಗಲಿ’ ಎಂದು ಶಿವಣ್ಣ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ದಳಪತಿ ವಿಜಯ್ ಮನೆ ಎದುರು ಜಮಾಯಿಸಿದ ಅಭಿಮಾನಿಗಳು; ಧನ್ಯವಾದ ತಿಳಿಸಿದ ನಟ

ನಾನಿ, ವಿಜಯ್ ದೇವರಕೊಂಡ, ಶಿವಕಾರ್ತಿಕೇಯನ್, ಟೈಗರ್ ಶ್ರಾಫ್, ರವಿತೇಜ, ರಂಭಾ, ವೆಂಕಟ್ ಕೆ. ನಾರಾಯಣ, ಕಾಜಲ್ ಅಗರ್​​ವಾಲ್, ಚಿಯಾನ್ ವಿಕ್ರಮ್, ಚಿರಂಜೀವಿ, ಮಹೇಶ್ ಬಾಬು, ರಾಮ್ ಚರಣ್, ಸೂರ್ಯ, ರಜನಿಕಾಂತ್, ಎ.ಆರ್. ರೆಹಮಾನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ದಳಪತಿ ವಿಜಯ್ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಚಿತ್ರರಂಗಕ್ಕೆ ವಿಜಯ್ ಅವರು ನೀಡಿರುವ ಕೊಡುಗೆ ಅಪಾರ. 1992ರಿಂದಲೂ ಹೀರೋ ಆಗಿ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿರುವ ಅವರು ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಹಲವು ಸಮಾಜಮುಖಿ ಕೆಲಸಗಳ ಮೂಲಕವೂ ಅವರು ಗುರುತಿಸಿಕೊಂಡಿದ್ದಾರೆ. ಈಗ ಪೂರ್ಣಪ್ರಮಾಣದ ರಾಜಕಾರಣಿ ಆಗಿದ್ದು, ಅವರಿಂದ ಅಭಿವೃದ್ಧಿ ನಿರೀಕ್ಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:11 pm, Tue, 5 May 26

Follow Us