AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾರ ಭೇಟಿಯಾದ ರಿಷಬ್ ಶೆಟ್ಟಿ: ನಟ ಹೇಳಿದ್ದೇನು?

Rishab Shetty movie: ರಾಜಕಾರಣಿಗಳು ತಮ್ಮ ಪಕ್ಷದ ಪ್ರಚಾರಕ್ಕೆ, ಪಕ್ಷದ ನೀತಿಗಳ ಪ್ರಚಾರಕ್ಕೆ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ, ಜನಪ್ರಿಯ ನಟ-ನಟಿಯರು ರಾಜಕಾರಣಿಗಳ ಭೇಟಿ ಆಗುವುದು ಸಾಮಾನ್ಯ ಮತ್ತು ಕುತೂಹಲಕಾರಿಯೂ ಹೌದು. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಕೇಂದ್ರ ಗೃಹ ಮಂತ್ರಿ, ರಾಷ್ಟ್ರೀಯ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿ ಆಗಿದ್ದಾರೆ.

ಅಮಿತ್ ಶಾರ ಭೇಟಿಯಾದ ರಿಷಬ್ ಶೆಟ್ಟಿ: ನಟ ಹೇಳಿದ್ದೇನು?
Rishab Shetty Amit Shah
ಮಂಜುನಾಥ ಸಿ.
|

Updated on:May 02, 2026 | 6:44 PM

Share

ಸಿನಿಮಾ (Cinema) ಮತ್ತು ರಾಜಕೀಯ ಭಾರತದಲ್ಲಿ ಜೊತೆ-ಜೊತೆಯಾಗಿಯೇ ಸಾಗುತ್ತದೆ. ಸಿನಿಮಾ ತಾರೆಯರು ರಾಜಕಾರಣಕ್ಕೆ ಬರುವುದು ಭಾರತದಲ್ಲಿ ಬಹಳ ಸಾಮಾನ್ಯ. ಈಗಲೂ ಸಹ ಹಲವಾರು ಮಂದಿ ಸಿನಿಮಾ ತಾರೆಯರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇನ್ನು ರಾಜಕಾರಣಿಗಳು ಸಹ ತಮ್ಮ ಪಕ್ಷದ ಪ್ರಚಾರಕ್ಕೆ, ಪಕ್ಷದ ನೀತಿಗಳ ಪ್ರಚಾರಕ್ಕೆ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ, ಜನಪ್ರಿಯ ನಟ-ನಟಿಯರು ರಾಜಕಾರಣಿಗಳ ಭೇಟಿ ಆಗುವುದು ಸಾಮಾನ್ಯ ಮತ್ತು ಕುತೂಹಲಕಾರಿಯೂ ಹೌದು. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಕೇಂದ್ರ ಗೃಹ ಮಂತ್ರಿ, ರಾಷ್ಟ್ರೀಯ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿ ಆಗಿದ್ದಾರೆ.

ರಿಷಬ್ ಶೆಟ್ಟಿ ಅವರು, ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಮಿತ್ ಶಾ ಜೊತೆಗಿನ ಭೇಟಿಯ ಚಿತ್ರಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಅಮಿತ್ ಶಾ ಮತ್ತು ರಿಷಬ್ ಶೆಟ್ಟಿ ಅವರು ನಗುತ್ತಾ ಚರ್ಚಿಸುತ್ತಿರುವುದು ಕಾಣುತ್ತಿದೆ. ಚಿತ್ರ ಹಂಚಿಕೊಂಡಿರುವ ರಿಷಬ್ ಶೆಟ್ಟಿ, ‘ಗೌರವಾನ್ವಿತ ಗೃಹ ಸಚಿವ ಶ್ರೀ ಅಮಿತ್ ಶಾ ಅವರನ್ನು ಭೇಟಿಯಾಗುವ ಸೌಭಾಗ್ಯ ಸಿಕ್ಕಿತು. ಅವರು ಕಾಂತಾರ ಮತ್ತು ಕಾಂತಾರ ಅಧ್ಯಾಯ 1 ಸಿನಿಮಾಗಳ ಬಗ್ಗೆ ತಮ್ಮ ಮೆಚ್ಚುಗೆಯ ಮಾತುಗಳನ್ನು ಹಂಚಿಕೊಂಡರು. ಅದು ನನ್ನ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಯಿತು. ನನ್ನ ಮುಂಬರುವ ಸಿನಿಮಾಗಳ ಬಗ್ಗೆ ಕೇಳಿ ಮಾಹಿತಿ ಪಡೆದರು. ಅವರು ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಚಲನಚಿತ್ರ ನಿರ್ಮಾಣದ ಬಗ್ಗೆ ತಮ್ಮ ಆಳವಾದ ಜ್ಞಾನ ಮತ್ತು ತಿಳುವಳಿಕೆಯನ್ನು ಹೊಂದಿದ್ದಾರೆ. ಇಬ್ಬರೂ ಸಹ ಈ ಬಗ್ಗೆ ಚರ್ಚಿಸಿದ್ದು ಬಹಳ ಸಂತೋಷ ಎನಿಸಿತು’ ಎಂದಿದ್ದಾರೆ.

ಇದನ್ನೂ ಓದಿ:ಸದ್ದಿಲ್ಲದೆ ತೆಲುಗಿನಲ್ಲಿ ರಿಲೀಸ್ ಆಗೋಕೆ ರೆಡಿ ಆಯ್ತು ರಿಷಬ್ ಶೆಟ್ಟಿ ಸಿನಿಮಾ

ರಿಷಬ್ ಶೆಟ್ಟಿ ಅವರು 2023 ರಲ್ಲಿ ಪ್ರಧಾನಿ ಮೋದಿ ಅವರನ್ನು ಸಹ ಭೇಟಿ ಆಗಿದ್ದರು. ಮೋದಿ ಅವರು ಕರ್ನಾಟಕಕ್ಕೆ ಬಂದಾಗ ಯಶ್, ರಿಷಬ್ ಶೆಟ್ಟಿ ಅವರುಗಳನ್ನು ಭೇಟಿ ಆಗಿದ್ದರು. ಆ ವೇಳೆ ಮೋದಿ ಅವರ ಭೇಟಿ ಬಗ್ಗೆ ಮಾತನಾಡಿದ್ದ ನಟ ರಿಷಬ್ ಶೆಟ್ಟಿ, ‘ಪ್ರಧಾನಿ ಮೋದಿ ಅವರನ್ನು ನಾನು ಒಬ್ಬ ಮಹಾನ್ ನಾಯಕ ಎಂದು ಪರಿಗಣಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ನನಗೆ ತುಂಬಾ ಸಂತೋಷವಾಗಿದೆ. ಅವರು ಕನ್ನಡ ಚಲನಚಿತ್ರೋದ್ಯಮದ ಬಗ್ಗೆ, ಚಿತ್ರರಂಗದಲ್ಲಿ ಏನು ನಡೆಯುತ್ತಿದೆ ಮತ್ತು ನಮಗೆ ಯಾವ ವಿಷಯಗಳ ಅಗತ್ಯ ಇದೆ. ಇತ್ಯಾದಿಗಳ ಬಗ್ಗೆ ಕೇಳಿದರು ಮತ್ತು ಅವರು ಏನು ಮಾಡಬಹುದು ಎಂಬುದನ್ನು ಸಹ ಹೇಳಿದರು. ಅವರು ಕಾಂತಾರ ಚಿತ್ರವನ್ನು ಶ್ಲಾಘಿಸಿದರು’ ಎಂದಿದ್ದರು.

ರಿಷಬ್ ಶೆಟ್ಟಿ ಅವರು ಸಿನಿಮಾ ಮಂದಿಯ ಜೊತೆಗೆ ಮಾತ್ರವೇ ಅಲ್ಲದೆ ಹಲವಾರು ರಾಜಕಾರಣಿಗಳ ಜೊತೆಗೂ ಆಪ್ತ ನಂಟು ಹೊಂದಿದ್ದಾರೆ. ವಿಶೇಷವಾಗಿ ಬಿಜೆಪಿ ಮುಖಂಡರುಗಳ ಜೊತೆಗೆ ರಿಷಬ್ ಶೆಟ್ಟಿ ಅವರಿಗೆ ಆಪ್ತ ನಂಟು ಇದೆ. ಕೆಲ ವರ್ಷಗಳ ಬಳಿಕ ರಿಷಬ್ ಶೆಟ್ಟಿ ಅವರು ರಾಜಕೀಯಕ್ಕೆ ಪದಾರ್ಪಣೆ ಮಾಡಿದರೂ ಆಶ್ಚರ್ಯವಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Sat, 2 May 26

Follow Us
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ