‘ಅಧ್ಯಾಯ ಎರಡು’: ‘ಕಾಂತಾರ: ಚಾಪ್ಟರ್ 2’ ಆರಂಭಿಸಿದರೇ ರಿಷಬ್ ಶೆಟ್ಟಿ?

Rishab Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಪೌರಾಣಿಕ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಸದ್ಯಕ್ಕೆ ನನ್ನ ಕೈಯಲ್ಲಿ ‘ಜೈ ಹನುಮಾನ್’ ಸಿನಿಮಾ ಮಾತ್ರವೇ ಇದೆ ಎಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಸಮಯದಲ್ಲಿ ಹೇಳಿದ್ದರು. ಆದರೆ ಇದೀಗ ಯುಗಾದಿಯಂದು ರಿಷಬ್ ಶೆಟ್ಟಿ ಹೊಸ ಸಿನಿಮಾ ಪ್ರಾರಂಭ ಮಾಡಿದಂತಿದ್ದಾರೆ.

‘ಅಧ್ಯಾಯ ಎರಡು’: ‘ಕಾಂತಾರ: ಚಾಪ್ಟರ್ 2’ ಆರಂಭಿಸಿದರೇ ರಿಷಬ್ ಶೆಟ್ಟಿ?
Rishab Shetty

Updated on: Mar 19, 2026 | 8:54 PM

ರಿಷಬ್ ಶೆಟ್ಟಿ (Rishab Shetty) ನಟಿಸಲಿರುವ, ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ನ ಮುಹೂರ್ತ ಹಂಪಿಯಲ್ಲಿ ನೆರವೇರಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಪೌರಾಣಿಕ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಸದ್ಯಕ್ಕೆ ನನ್ನ ಕೈಯಲ್ಲಿ ‘ಜೈ ಹನುಮಾನ್’ ಸಿನಿಮಾ ಮಾತ್ರವೇ ಇದೆ ಎಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಸಮಯದಲ್ಲಿ ಹೇಳಿದ್ದರು. ಆದರೆ ಇದೀಗ ಯುಗಾದಿಯಂದು ರಿಷಬ್ ಶೆಟ್ಟಿ ಹೊಸ ಸಿನಿಮಾ ಪ್ರಾರಂಭ ಮಾಡಿದಂತಿದ್ದಾರೆ.

ಇಂದು ಯುಗಾದಿ ಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಅವರು ಕಮಲಶಿಲೆಯ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ವಿಶೇಷ ಪೂಜೆ ಮಾಡಿಸಿದ್ದಾರೆ. ಆ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಮತ್ತೊಂದು ಪೋಸ್ಟ್​​ನಲ್ಲಿ ‘ಅಧ್ಯಾಯ ಎರಡು, ಇಲ್ಲಿಂದ ಶುರು’ ಎಂದು ಬರೆದಿರುವ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಹೊಸ ವರ್ಷ, ಹೊಸ ಚಾಪ್ಟರ್’ ಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ಅವರ ಈ ಪೋಸ್ಟ್ ಅಮಾನಿಗಳಲ್ಲಿ ಕುತೂಹಲದ ಜೊತೆಗೆ ನಿರೀಕ್ಷೆಯನ್ನು ಸಹ ಮೂಡಿಸಿದೆ. ‘ಕಾಂತಾರ ಚಾಪ್ಟರ್ 2’ ಸಿನಿಮಾದ ಬಗ್ಗೆ ರಿಷಬ್ ಅವರು ಈ ಪೋಸ್ಟ್ ಹಂಚಿಕೊಂಡಿದ್ದಾರೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅಂತ್ಯದಲ್ಲಿ, ‘ಚಾಪ್ಟರ್ 2’ನ ಸುಳಿವನ್ನು ರಿಷಬ್ ಶೆಟ್ಟಿ ನೀಡಿದ್ದರು. ‘ಕಾಂತಾರ: ಚಾಪ್ಟರ್ 1’ ಬಿಡುಗಡೆ ಬಳಿಕ ಮಾತನಾಡಿದ್ದ ರಿಷಬ್, ‘ಚಾಪ್ಟರ್ 2’ ಸಹ ಬರಲಿದೆ ಎಂದಿದ್ದರು. ಅಂತೆಯೇ ಇದೀಗ ‘ಅಧ್ಯಾಯ ಎರಡು’ ಎನ್ನುವ ಮೂಲಕ ‘ಚಾಪ್ಟರ್ 2’ ಆರಂಭದ ಸುಳಿವನ್ನು ನೀಡಿದ್ದಾರೆ.

ಇದನ್ನೂ ಓದಿ:ವಿಡಿಯೋ: ರಶ್ಮಿಕಾ ಮದುವೆ ಕುರಿತ ಪ್ರಶ್ನೆಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ಹೀಗಿತ್ತು ನೋಡಿ

ಆದರೆ ರಿಷಬ್ ಶೆಟ್ಟಿ ಈಗ ಹಂಚಿಕೊಂಡಿರುವ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರ ನಿರ್ಮಾಣ ಸಂಸ್ಥೆಯ ಲೋಗೊ ಇದೆ, ‘ಕಾಂತಾರ’ ಸಿನಿಮಾ ಸರಣಿಯ ನಿರ್ಮಾಣ ಮಾಡಿರುವ ಹೊಂಬಾಳೆಯ ಲೋಗೊ ಇಲ್ಲ. ಇದು ಸಹ ಸಣ್ಣ ಅನುಮಾನ ಮೂಡಿಸಿದ್ದು, ‘ಕಾಂತಾರ’ ಸರಣಿಯ ಹೊರತಾದ ಸಿನಿಮಾ ಇದಾಗಿರಬಹುದೆ ಎಂಬ ಅನುಮಾನವೂ ಇದೆ. ಒಟ್ಟಾರೆ ಸ್ವತಃ ರಿಷಬ್ ಅವರೇ ಇದಕ್ಕೆಲ್ಲ ಉತ್ತರ ನೀಡಬೇಕಿದೆ.

ರಿಷಬ್ ಅವರು ಪ್ರಸ್ತುತ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ ಸಿನಿಮಾನಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಸಿನಿಮಾದ ಬಳಿಕ ಹಿಂದಿಯ ‘ಛತ್ರಪತಿ ಶಿವಾಜಿ’ ಸಿನಿಮಾನಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ‘ಲಗಾನ್’ ಸಿನಿಮಾ ನಿರ್ದೇಶಕ ಅಶುತೋಶ್ ಗೋವರಿಕರ್ ನಿರ್ದೇಶನದ ಸಿನಿಮಾನಲ್ಲಿಯೂ ರಿಷಬ್ ಶೆಟ್ಟಿ ನಟಿಸಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಆ ಸಿನಿಮಾ ಸಹ ಇದೇ ವರ್ಷ ಪ್ರಾರಂಭ ಆಗುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us