AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ

ಕಾಂತಾರ ಗೆಲುವಿನ ಬಳಿಕ ರಿಷಬ್ ಶೆಟ್ಟಿ ಅವರು ವಿಶ್ರಾಂತಿ ಪಡೆಯುತ್ತಿದ್ದು, ಈಗ ನಿಂತುಹೋಗಿದ್ದ ದೊಡ್ಡ ಬಜೆಟ್ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಸುದ್ದಿ ಇದೆ. ಎಂ.ಟಿ. ವಾಸುದೇವನ್ ನಾಯರ್ ಅವರ 'ರಂಡಮೂಳಂ' ಕಾದಂಬರಿ ಆಧರಿಸಿದ ಈ ಸಿನಿಮಾವನ್ನು ರಿಷಬ್ ಅವರೇ ನಿರ್ದೇಶಿಸಿ, ನಟಿಸಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹಲವಾರು ಪ್ರಯತ್ನಗಳು ವಿಫಲವಾಗಿದ್ದ ಈ ಮಹತ್ವಾಕಾಂಕ್ಷಿ ಯೋಜನೆಗೆ ರಿಷಬ್ ಮರುಜೀವ ನೀಡಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ
ರಿಷಬ್ ಶೆಟ್ಟಿ
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Feb 02, 2026 | 1:15 PM

Share

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಗೆಲುವಿನ ಬಳಿಕ ಬ್ರೇಕ್ ಪಡೆದಿದ್ದಾರೆ. ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಈಗ ರಿಷಬ್ ಶೆಟ್ಟಿ ಅವರು ನಟನೆಯ ಕಡೆ ಗಮನ ಹರಿಸುತ್ತಿದ್ದಾರೆ. ಒಪ್ಪಿಕೊಂಡ ಸಿನಿಮಾಗಳ ಶೂಟ್​​ನ ಅವರು ಪೂರ್ಣಗೊಳಿಸಬೇಕಿದೆ. ಈ ಮಧ್ಯೆ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಅದು ಕೂಡ ನಿಂತು ಹೋದ ಬಿಗ್ ಬಜೆಟ್ ಚಿತ್ರ ಎಂಬ ವದಂತಿ ಹರಿದಾಡಿದೆ.

ಮಲಯಾಳಂ ಚಿತ್ರರಂಗದಲ್ಲಿ ‘ರಂಡಮೂಳಂ’ ಎಂಬ ಸಿನಿಮಾ ಸೆಟ್ಟೇರಬೇಕಿತ್ತು. ಎಂಟಿ ವಾಸುದೇವ್ ನಾಯರ್ ಬರೆದ ‘ರಂಡಮೂಳಂ’ ಕಾದಂಬರಿಯನ್ನು ಆಧರಿಸಿ ಸಿನಿಮಾ ಸಿದ್ಧಗೊಳ್ಳಬೇಕಿತ್ತು. ಆದರೆ, ಸಿನಿಮಾ ಸೆಟ್ಟೇರಿರಲಿಲ್ಲ. ಈಗ ಇದಕ್ಕೆ ರಿಷಬ್ ಶೆಟ್ಟಿ ಅವರು ಮರುಜೀವ ತುಂಬಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರವನ್ನು ಅವರೇ ನಿರ್ದೇಶನ ಮಾಡಲಿದ್ದು, ನಟನೆ ಕೂಡ ಅವರದ್ದೇ ಎಂದು ಮಲಯಾಳಂನ ‘ಮಾತೃಭೂಮಿ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಮೊದಲು ‘ರಂಡಮೂಳನ್’ ಕಥೆಯನ್ನು ಸಿನಿಮಾ ಮಾಡುವ ಸಾಕಷ್ಟು ಪ್ರಯತ್ನಗಳು ನಡೆದವು. ಸಾಕಷ್ಟು ದೊಡ್ಡ ನಿರ್ಮಾಣ ಸಂಸ್ಥೆಗಳು ಇದನ್ನು ಮಾಡಲು ಆಸಕ್ತಿ ತೋರಿಸಿ ಸುಮ್ಮನಾದರು. ನಿರ್ದೇಶಕ ಶ್ರೀಕುಮಾರ್ ಮೆನನ್ ಕಾಂಟ್ರ್ಯಾಕ್ಟ್ ಕೂಡ ಸಹಿ ಮಾಡಿದ್ದರು. ಆದರೆ, ಅವರು ಸಿನಿಮಾದಿಂದ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ: ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಪ್ರೀತಿಯಿಂದ ವಿಶ್ ಮಾಡಿದ ರಿಷಬ್ ಶೆಟ್ಟಿ

ಎಂ.ಟಿ. ವಾಸುದೇವನ್ ನಾಯರ್ ಅವರ ಪುತ್ರಿ ಅಶ್ವತಿ ಇತ್ತೀಚೆಗೆ ಒಂದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದರು. ‘ಕಳೆದ ಎರಡು ವರ್ಷಗಳ ಹಿಂದೆ ನಾನು ಈ ಪ್ರಾಜೆಕ್ಟ್​​ನ ಕೈಗೆತ್ತಿಕೊಂಡಿದ್ದೇನೆ ಮತ್ತು ಸಂಪೂರ್ಣವಾಗಿ ನನ್ನನ್ನು ನಾಉ ತೊಡಗಿಸಿಕೊಂಡಿದ್ದೇನೆ. ಇದು ಒಂದು ದೊಡ್ಡ ತಂಡ. ತಂಡ ಕಟ್ಟುವ ಕೆಲಸ ಬಹುತೇಕ ಪೂರ್ಣಗೊಂಡಿದೆ’ ಎಂದು ಹೇಳಿದ್ದರು. ‘ಒಂದು ದೊಡ್ಡ ನಿರ್ಮಾಣ ಸಂಸ್ಥೆ ಮತ್ತು ಈ ಚಿತ್ರವನ್ನು ಚೆನ್ನಾಗಿ ನಿರ್ಮಿಸುವ ಸಾಮರ್ಥ್ಯವಿರುವ ತಂಡವಿದೆ’ ಎಂದಿದ್ದರು ಅವರು. ಈ ತಂಡದ ಕ್ಯಾಪ್ಟನ್ ರಿಷಬ್ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ