ಕೇವಲ ಸಿನಿಮಾದಲ್ಲಿ ಮಾತ್ರವಲ್ಲ, ನಿಜ ಜೀವನದಲ್ಲೂ ಮಾದರಿ ರಿಷಬ್ ಶೆಟ್ಟಿ

|

Updated on: Aug 16, 2024 | 6:27 PM

ಆಗಸ್ಟ್ 15ರಂದು ರಿಷಬ್ ಶೆಟ್ಟಿ ಅವರು ಹುಟ್ಟೂರಾದ ಕೆರಾಡಿ ಶಾಲೆಗೆ ತೆರಳಿದ್ದಾರೆ. ಅಲ್ಲಿ ಧ್ವಜಾರೋಹಣ ಮಾಡಿದ್ದಾರೆ. ‘ನಾನು ಹೊರಗಿನವನಲ್ಲ, ಇದೇ ಶಾಲೆಯ ವಿದ್ಯಾರ್ಥಿ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಈ ಮೂಲಕ ಅವರು ಅನೇಕರಿಗೆ ಮಾದರಿ ಆಗಿದ್ದಾರೆ.

ಕೇವಲ ಸಿನಿಮಾದಲ್ಲಿ ಮಾತ್ರವಲ್ಲ, ನಿಜ ಜೀವನದಲ್ಲೂ ಮಾದರಿ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
Follow us on

ರಿಷಬ್ ಶೆಟ್ಟಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ‘ಕಾಂತಾರ’ ಸಿನಿಮಾದ ನಟನೆಗೆ ಅವರ ಈ ಅವಾರ್ಡ್ ಗೆದ್ದಿದ್ದಾರೆ. ಅವರು ನಿರ್ದೇಶನದ ಮೂಲಕವೂ ಎಲ್ಲರ ಗಮನ ಸೆಳೆದರು. ಅವರ ನಟನೆಯ ‘ಸಹಿಪ್ರಾ ಶಾಲೆ ಕಾಸರಗೋಡು’ ಸಿನಿಮಾ ಸಾಕಷ್ಟು ಗಮನ ಸೆಳೆಯಿತು. ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎನ್ನುವ ಬಗ್ಗೆ ಸಿನಿಮಾದಲ್ಲಿ ಸಂದೇಶ ಇತ್ತು. ಈ ಮೂಲಕ ರಿಷಬ್ ಶೆಟ್ಟಿ ಅವರು ಅನೇಕರಿಗೆ ಮಾದರಿ ಆಗಿದ್ದಾರೆ. ಅವರ ಕೆಲಸಗಳು ಕೇವಲ ಸಿನಿಮಾಗಳಿಗೆ ಮಾತ್ರ ಸೀಮಿತ ಆಗಿಲ್ಲ. ಅವರು ಈಗ ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಆಗಸ್ಟ್ 15ರಂದು ರಿಷಬ್ ಶೆಟ್ಟಿ ಅವರು ಹುಟ್ಟೂರಾದ ಕೆರಾಡಿ ಶಾಲೆಗೆ ತೆರಳಿದ್ದಾರೆ. ಅಲ್ಲಿ ಧ್ವಜಾರೋಹಣ ಮಾಡಿದ್ದಾರೆ. ‘ನಾನು ಹೊರಗಿನವನಲ್ಲ, ಇದೇ ಶಾಲೆಯ ವಿದ್ಯಾರ್ಥಿ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಈ ಮೂಲಕ ಅವರು ಅನೇಕರಿಗೆ ಮಾದರಿ ಆಗಿದ್ದಾರೆ. ಸ್ಟಾರ್ ಹೀರೋ ಆದ ಬಳಿಕ ಯಾರೂ ಸಾಮಾನ್ಯರಂತೆ ಇರೋಕೆ ಇಷ್ಟಪಡುವುದಿಲ್ಲ. ಆದರೆ, ರಿಷಬ್ ಅವರು ಇದನ್ನು ಬ್ರೇಕ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ಅವರು ಸರ್ಕಾರಿ ಶಾಲೆಗಳನ್ನು ಉಳಿಸಲು ಕರೆ ಕೊಟ್ಟರು. ಇದನ್ನು ಸಿನಿಮಾಗಳಲ್ಲಿ ಮಾತ್ರವಲ್ಲ ನಿಜ ಜೀವನದಲ್ಲೂ ಅವರು ಸರ್ಕಾರಿ ಶಾಲೆಯ ಉಳಿವಿಗೆ ಹೋರಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಉಳಿಸಲು ಅವರು ನಿಜ ಜೀವನದಲ್ಲೂ ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಅವರು ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ನನ್ನ ಸಿನಿಮಾ 800 ಕೋಟಿ ರೂಪಾಯಿ ಗಳಿಸಿದ್ರೂ ನಾನು ಸುದೀಪ್ ಫ್ಯಾನ್’: ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ರಿವೀಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:38 pm, Fri, 16 August 24