AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಪಡೆದ ರಿಷಬ್; ಪಂಚೆಯಲ್ಲಿ ಮಿಂಚಿದ ನಟ

ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು.

‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಪಡೆದ ರಿಷಬ್; ಪಂಚೆಯಲ್ಲಿ ಮಿಂಚಿದ ನಟ
ರಿಷಬ್
ರಾಜೇಶ್ ದುಗ್ಗುಮನೆ
|

Updated on:Feb 21, 2023 | 9:46 AM

Share

ನಟ ರಿಷಬ್ ಶೆಟ್ಟಿ (Rishab Shetty) ಅವರಿಗೆ ಇತ್ತೀಚೆಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಘೋಷಣೆ ಆಗಿತ್ತು. ಅವರಿಗೆ ‘ಅತ್ಯಂತ ಭರವಸೆಯ ನಟ’ ಅವಾರ್ಡ್​ ಸಿಕ್ಕಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇದರ ಫೋಟೋಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಗೌರವ ಸ್ವೀಕರಿಸಿದ ರಿಷಬ್​ಗೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ. ರಿಷಬ್ ಮಾತ್ರವಲ್ಲದೆ ಚಿತ್ರರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಅವರಿಗೆ ಕೆಂಪುಹಾಸಿನ ಸ್ವಾಗತ ಕೋರಲಾಗಿದೆ.

ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ಈ ಮೊದಲು ಅನೇಕ ಕಾರ್ಯಕ್ರಮಗಳಿಗೆ ಅವರು ಇದೇ ರೀತಿ ಟ್ರೆಡಿಷನಲ್ ಲುಕ್​​ನಲ್ಲಿ ತೆರಳಿದ್ದರು. ಅವರು ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ನೀಡಿದರು. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುವ ಕೆಲಸ ಮಾಡುತ್ತಿರುವ ರಿಷಬ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಪ್ರಶಸ್ತಿಯನ್ನು ಅವರು ದೈವ ನರ್ತಕರು, ನಮ್ಮನ್ನು ಅಗಲಿದ ಪುನೀತ್ ರಾಜ್​ಕುಮಾರ್ ಹಾಗೂ ಎಸ್​​.ಕೆ ಭಗವಾನ್ ಅವರಿಗೆ ಅರ್ಪಿಸುವುದಾಗಿ ಹೇಳಿದ್ದಾರೆ.

ಅನುಪಮ್ ಖೇರ್ ಹಾಗೂ ವರುಣ್ ಧವನ್ ಅವರು ರೆಡ್ ಕಾರ್ಪೆಟ್​ ಮೇಲೆ ಮುಖಾಮುಖಿ ಆದರು. ಪರಸ್ಪರ ಅಪ್ಪಿಕೊಂಡು ವಿಶ್ ತಿಳಿಸಿದರು. ದುಲ್ಖರ್ ಸಲ್ಮಾನ್ ಕೂಡ ಎಲ್ಲರ ಗಮನ ಸೆಳೆದರು. ರೇಖಾ, ಆಲಿಯಾ ಭಟ್ ಸೇರಿ ಇನ್ನೂ ಅನೇಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆಲಿಯಾಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದು ಭಾರತ ಸರ್ಕಾರ ನೀಡುವ ಪ್ರಶಸ್ತಿ ಅಲ್ಲ:

ದಾದಾ ಸಾಹೇಬ್​ ಫಾಲ್ಕೆ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರ ಹೆಸರಿನಲ್ಲಿ ಭಾರತ ಸರ್ಕಾರ ಪ್ರಶಸ್ತಿ ನೀಡುತ್ತದೆ. ಚಿತ್ರರಂಗದಲ್ಲಿ ಜೀವಮಾನ ಸಾಧನೆ ಮಾಡಿದವರಿಗೆ ಆ ಪ್ರಶಸ್ತಿ ನೀಡಲಾಗುತ್ತದೆ. ಆದರೆ ಈಗ ರಿಷಬ್​ ಶೆಟ್ಟಿ ಅವರಿಗೆ ಬಂದಿರುವ ಪ್ರಶಸ್ತಿಯೇ ಬೇರೆ. ಖಾಸಗಿ ಸಂಸ್ಥೆ ವತಿಯಿಂದ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಕೊಡಲಾಗುತ್ತಿದೆ.

‘ಕಾಂತಾರ’ ಸಿನಿಮಾದ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸ್ಟಾರ್​ ಆಗಿದ್ದಾರೆ. ಅವರ ಮುಂದಿನ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಕಾಂತಾರ 2’ ಚಿತ್ರಕ್ಕೆ ಜೂನ್​ನಲ್ಲಿ ಶೂಟಿಂಗ್​ ಆರಂಭ ಆಗುವ ಸಾಧ್ಯತೆ ಇದೆ. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್​ ಆಗಿರಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಕಲ ತಯಾರಿ ಮಾಡಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:45 am, Tue, 21 February 23