AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಶ್ರೀಮಂತ ಬಾಲನಟಿ ಇವರೇ ನೋಡಿ; ಒಟ್ಟೂ ಆಸ್ತಿ ಎಷ್ಟು ಕೋಟಿ ರೂಪಾಯಿ?  

Riva Arora: ರಿವಾ ಅರೋರಾ ಅವರು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹಲ್​ಚಲ್​ ಎಬ್ಬಿಸಿದ್ದಾರೆ. ಅವರಿಗೆ ಇನ್ನೂ 18 ವರ್ಷ ತುಂಬಿಲ್ಲ. ಆಗಲೇ ಸಾಕಷ್ಟು ಬ್ರ್ಯಾಂಡ್​ನ ಪ್ರಚಾರ ಮಾಡುತ್ತಿದ್ದಾರೆ.

ಭಾರತದ ಶ್ರೀಮಂತ ಬಾಲನಟಿ ಇವರೇ ನೋಡಿ; ಒಟ್ಟೂ ಆಸ್ತಿ ಎಷ್ಟು ಕೋಟಿ ರೂಪಾಯಿ?  
ರಿವಾ ಅರೋರಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 09, 2023 | 8:58 AM

Share

ಸೋಶಿಯಲ್ ಮೀಡಿಯಾ ಮೂಲಕ ಅನೇಕರು ಖ್ಯಾತಿ ಹೆಚ್ಚಿಸಿಕೊಳ್ಳುತ್ತಾರೆ. ಈ ಸಾಲಿನಲ್ಲಿ ರಿವಾ ಅರೋರಾ (Riva Arora) ಕೂಡ ಇದ್ದಾರೆ. ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು ಸೋಶಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್ ಆಗಿದ್ದಾರೆ. ಅವರು ಟಿವಿ ಶೋಗಳಲ್ಲೂ ಮಿಂಚುತ್ತಿದ್ದಾರೆ. ‘ರಾಕ್​ಸ್ಟಾರ್’ ಸಿನಿಮಾದಲ್ಲಿ ರಿವಾ ಮೊಟ್ಟ ಮೊದಲ ಬಾರಿಗೆ ಕಾಣಿಸಿಕೊಂಡರು. ಆಗ ಅವರಿಗೆ ಒಂದೂವರೆ ವರ್ಷ. ಈಗ ಹಲವು ಸಿನಿಮಾಗಳಲ್ಲಿ ಅವರು ನಟಿಸಿ ಗಮನ ಸೆಳೆದಿದ್ದಾರೆ.

ರಿವಾ ಅರೋರಾ ಅವರು ‘ಉರಿ: ದಿ ಸ್ಟರ್ಜಿಕಲ್ ಸ್ಟ್ರೈಕ್’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಈಗಾಗಲೇ ಅವರು 28 ಸಿನಿಮಾಗಳಲ್ಲಿ ನಟಿಸಿದ್ದಾರೆ. ರಕುಲ್ ಪ್ರೀತ್ ಸಿಂಗ್ ನಟನೆಯ ‘ಚತ್ರಿವಾಲಿ’ ಸಿನಿಮಾದಲ್ಲಿ ರಿವಾ ಅರೊರಾ ಕೊನೆಯ ಬಾರಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ.

ರಿವಾ ಅವರ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 11.2 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಅಂದರೆ, 1.12 ಕೋಟಿ ಜನರು ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಬೆಳವಣಿಗೆ ಅನೇಕರಿಗೆ ಅಚ್ಚರಿ ಮೂಡಿಸಿದೆ. ರಿವಾ ದೇಹ ಬೇಗ ಬೆಳವಣಿಗೆ ಕಾಣಬೇಕು ಎನ್ನುವ ಕಾರಣಕ್ಕೆ ಅವರ ಪಾಲಕರು ಹಾರ್ಮೋನ್ ಬದಲಾವಣೆಗೆ ಚುಚ್ಚುಮದ್ದು ಕೊಡಿಸಿದ್ದಾರೆ ಎನ್ನುವ ಆರೋಪವೂ ಕೇಳಿ ಬಂದಿದೆ.

ರಿವಾ ಅರೋರಾ ಅವರು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹಲ್​ಚಲ್​ ಎಬ್ಬಿಸಿದ್ದಾರೆ. ಅವರಿಗೆ ಇನ್ನೂ 18 ವರ್ಷ ತುಂಬಿಲ್ಲ. ಆಗಲೇ ಸಾಕಷ್ಟು ಬ್ರ್ಯಾಂಡ್​ನ ಪ್ರಚಾರ ಮಾಡುತ್ತಿದ್ದಾರೆ. ಅವರ ಬಳಿ 40 ಲಕ್ಷ ರೂಪಾಯಿ ಬೆಲೆಯ ಆಡಿ ಕ್ಯೂ3 ಕಾರು ಇದೆ.

ರಿವಾ ಅವರ ಆಸ್ತಿ 8.2 ಕೋಟಿ ರೂಪಾಯಿ ಎನ್ನಲಾಗಿದೆ. ಈ ಮೂಲಕ ಅವರು ಶ್ರೀಮಂತ ನಟಿ ಎನಿಸಿಕೊಂಡಿದ್ದಾರೆ. ಭಾರತದ ಶ್ರೀಮಂತ ಬಾಲ ನಟಿ ಎಂಬ ಖ್ಯಾತಿಯೂ ಅವರಿಗೆ ಇದೆ. ಶೀಘ್ರವೇ ಅವರು ನಾಯಕಿ ಆಗಿ ಮಿಂಚಲಿದ್ದಾರೆ.

ರಿವಾ ಅರೋರಾ ಅವರು ಹಲವು ಸೆಲೆಬ್ರಿಟಿಗಳ ಜೊತೆ ಪೋಸ್ ಕೊಟ್ಟಿದ್ದಾರೆ. ಅವರಿಗೆ ಇನ್ನೂ 16 ವರ್ಷ ವಯಸ್ಸು. ರಿವಾ ಅರೋರಾ ಅವರು ಹುಟ್ಟಿದ್ದು ದೆಹಲಿಯಲ್ಲಿ. ಅವರು ನಟಿಯಾಗಬೇಕು ಎಂದು ಕನಸು ಕಂಡಿದ್ದಾರೆ. ನಟನೆ ಹಾಗೂ ಶಿಕ್ಷಣ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೊಗುತ್ತಿದ್ದಾರೆ.

ಇದನ್ನೂ ಓದಿ: ‘ಬುಲ್​ಶಿಟ್​ ಕಾರಣ ಕೊಡಬೇಡಿ’; ಸ್ನೇಹಿತ್ ನಿರ್ಧಾರದಿಂದ ತೀವ್ರವಾಗಿ ನೊಂದುಕೊಂಡ ನಮ್ರತಾ

‘ಉರಿ’ ಸಿನಿಮಾದಲ್ಲಿ ಸೈನಿಕನ ಮಗಳ ಪಾತ್ರದಲ್ಲಿ ರಿವಾ ಕಾಣಿಸಿಕೊಂಡಿದ್ದರು. ಈ ಮೂಲಕ ಭರ್ಜರಿ ಜನಪ್ರಿಯತೆ ಪಡೆದರು. ರಿವಾ ಅವರ ತಂದೆ ಉದ್ಯಮಿ. ಅವರ ತಾಯಿ ನಿಶಾ ಲಾಯರ್. ರಿವಾ ಅವರು ಹಲವು ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ. ಅವರ ಹಣಕಾಸು ವ್ಯವಹಾರವನ್ನು ಪಾಲಕರೇ ನೋಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:07 am, Sat, 9 December 23

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್