AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ಜೊತೆ ಪೋಸ್​ ಕೊಟ್ಟ ಬಾಲಕ ಈಗ ಯುವ ನಟ; ಯಾರೆಂದು ಗುರುತಿಸುತ್ತೀರಾ?

ನೆಟ್ಟಿಗರು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ, ನಾಯಕಿಯರ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಆಗಾಗ ಸೆಲೆಬ್ರಿಟಿಗಳು ಕೂಡ ತಮ್ಮ ಬಾಲ್ಯದ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ. ಸದ್ಯ ಯುವ ಹೀರೋನ ಫೋಟೋ ವೈರಲ್ ಆಗಿದೆ.

ಸಚಿನ್ ಜೊತೆ ಪೋಸ್​ ಕೊಟ್ಟ ಬಾಲಕ ಈಗ ಯುವ ನಟ; ಯಾರೆಂದು ಗುರುತಿಸುತ್ತೀರಾ?
ಸಚಿನ್
ರಾಜೇಶ್ ದುಗ್ಗುಮನೆ
|

Updated on:Nov 04, 2023 | 11:21 AM

Share

ಹೀರೋ ಮತ್ತು ಹೀರೋಯಿನ್‌ಗಳ ಬಾಲ್ಯದ ಫೋಟೋಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತವೆ. ನೆಟ್ಟಿಗರು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ, ನಾಯಕಿಯರ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಆಗಾಗ ಸೆಲೆಬ್ರಿಟಿಗಳು ಕೂಡ ತಮ್ಮ ಬಾಲ್ಯದ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ. ಸದ್ಯ ಟಾಲಿವುಡ್ ಯುವ ಹೀರೋನ ಫೋಟೋ ವೈರಲ್ ಆಗಿದೆ. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar) ಜೊತೆ ಇರೋ ಬಾಲಕ ಈಗ ಹೀರೋ ಆಗಿದ್ದಾರೆ. ಅವರು ಹೆಸರು ರೋಷನ್ ಮೇಕಾ (Roshan Meka).

ರೋಷನ್ ತಂದೆ ಶ್ರೀಕಾಂತ್ ಅವರು ಟಾಲಿವುಡ್​ನಲ್ಲಿ ಹೆಸರು ಮಾಡಿದ್ದಾರೆ. ಅವರು ಕನ್ನಡದಲ್ಲೂ ನಟಿಸಿದ್ದಾರೆ. ಮಾಲಾಶ್ರೀ ನಟನೆಯ ‘ಹೆಂಡ್ತಿ ಹೇಳಿದರೆ ಕೇಳಬೇಕು’, ‘ಯುಗಾದಿ’, ‘ದಿ ವಿಲನ್’, ‘ಜೇಮ್ಸ್’ ಸಿನಿಮಾದಲ್ಲಿ ಶ್ರೀಕಾಂತ್ ಬಣ್ಣ ಹಚ್ಚಿದ್ದಾರೆ. ಅವರ ಮಗನೇ ರೋಷನ್. ಸಚಿನ್ ತೆಂಡೂಲ್ಕರ್ ಜೊತೆ ನಿಂತಿರುವವರು ಕೂಡ ರೋಷನ್ ಅವರೇ.

ಸದ್ಯ ರೋಷನ್ ಮೇಕಾ ಅವರು ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಶ್ರೀಕಾಂತ್ ಹೀರೋ ಆಗಿ ಹಲವು ಅತ್ಯುತ್ತಮ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅವರ ಮಗ ರೋಷನ್ ಹೀರೋ ಆಗಿ ಸಿನಿಮಾ ಮಾಡುತ್ತಿದ್ದಾರೆ. ರೋಷನ್ ಬಾಲ್ಯದಲ್ಲಿದ್ದಾಗ ಸಚಿನ್ ಅವರನ್ನು ಭೇಟಿ ಆಗುವ ಅವಕಾಶ ಸಿಕ್ಕಿತ್ತು. ಆ ಫೋಟೋ ಈಗ ವೈರಲ್ ಆಗುತ್ತಿದೆ.

‘ರುದ್ರಮಾದೇವಿ’ ಚಿತ್ರದ ಮೂಲಕ ರೋಷನ್ ಬಾಲ ಕಲಾವಿದನಾಗಿ ಪರಿಚಯವಾದರು. ನಂತರ 2016ರಲ್ಲಿ ‘ನಿರ್ಮಲಾ ಕಾನ್ವೆಂಟ್’ ಮೂಲಕ ಹೀರೋ ಆದರು. ‘ಪೆಳ್ಳಿ ಸಂದಡಿ’ ಚಿತ್ರದ ಮೂಲಕ ದೊಡ್ಡ ಯಶಸ್ಸು ಪಡೆದರು. ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ. ಶ್ರೀಲೀಲಾಗೆ ಟಾಲಿವುಡ್​​ ಬೇಡಿಕೆ ಹೆಚ್ಚಲು ಈ ಸಿನಿಮಾ ಮುಖ್ಯ ಕಾರಣ ಆಯಿತು.

View this post on Instagram

A post shared by Roshann meka (@iamrshn)

ಇದನ್ನೂ ಓದಿ: ವಿಜಯ್ ದೇವರಕೊಂಡ ಸಿನಿಮಾದಿಂದ ಹೊರನಡೆದ ಶ್ರೀಲೀಲಾ: ಬದಲಿ ನಟಿ ರಶ್ಮಿಕಾ?

ಸದ್ಯ ರೋಷನ್ ಹೊಸ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ವೃಷಭ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದಲ್ಲಿ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೋಹನ್​ಲಾಲ್ ಜೊತೆ ನಿಂತು ಅವರು ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಕೂಡ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:20 am, Sat, 4 November 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ