Ram Charan: ಹೊಸಬರಿಗೆ ಅವಕಾಶ ನೀಡಲು ‘ವಿ ಮೆಗಾ ಪಿಕ್ಚರ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ ರಾಮ್​ ಚರಣ್​

V Mega Pictures: ಪ್ಯಾನ್​ ಇಂಡಿಯಾ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಮಾಣ ಸಂಸ್ಥೆ ಕೆಲಸ ಮಾಡಲಿದೆ. ಈ ಮೂಲಕ ಚಿತ್ರರಂಗದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುವುದು.

Ram Charan: ಹೊಸಬರಿಗೆ ಅವಕಾಶ ನೀಡಲು ‘ವಿ ಮೆಗಾ ಪಿಕ್ಚರ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ ರಾಮ್​ ಚರಣ್​
ರಾಮ್​ ಚರಣ್
Follow us
ಮದನ್​ ಕುಮಾರ್​
|

Updated on: May 26, 2023 | 7:15 AM

‘ಆರ್​ಆರ್​ಆರ್​’ ಸಿನಿಮಾದ ಯಶಸ್ಸಿನಿಂದ ನಟ ರಾಮ್​ ಚರಣ್​ (Ram Charan) ಅವರು ಗ್ಲೋಬಲ್​ ಸ್ಟಾರ್​ ಎಂದು ಖ್ಯಾತಿ ಪಡೆದಿದ್ದಾರೆ. ಅವರೀಗ ಹೊಸ ಮತ್ತು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಥಾಪಿಸಲಾದ ‘ವಿ ಮೆಗಾ ಪಿಕ್ಚರ್ಸ್’ (V Mega Pictures) ನಿರ್ಮಾಣ ಸಂಸ್ಥೆಯ ಜೊತೆ ಕೈ ಜೋಡಿಸಿದ್ದಾರೆ. ಈ ಉದ್ದೇಶಕ್ಕಾಗಿ ಅವರು ತಮ್ಮ ಸ್ನೇಹಿತ ಯುವಿ ಕ್ರಿಯೇಷನ್ಸ್‌ನ ವಿಕ್ರಮ್ ರೆಡ್ಡಿ ಅವರಿಗೆ ಸಾಥ್​ ನೀಡಿದ್ದಾರೆ. ಪ್ಯಾನ್​ ಇಂಡಿಯಾ (Pan India) ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಮಾಣ ಸಂಸ್ಥೆ ಕೆಲಸ ಮಾಡಲಿದೆ. ಚಿತ್ರರಂಗದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುವುದು. ಈ ಮೂಲಕ ರಾಮ್​ ಚರಣ್​ ಅವರ ಅಭಿಮಾನಿಗಳಿಂದ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ.

ರಾಮ್​ ಚರಣ್​ ಅವರಿಗೆ ಸಿನಿಮಾ ನಿರ್ಮಾಣದ ಅನುಭವ ಹೊಸದೇನೂ ಅಲ್ಲ. ಈಗಾಗಲೇ ಅವರು ಟಾಲಿವುಡ್​ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಂಪೂರ್ಣ ಹೊಸ ಪ್ರತಿಭೆಗಳಿಗಾಗಿ ವೇದಿಕೆ ಒದಗಿಸಲು ಸಜ್ಜಾಗಿದ್ದಾರೆ. ಈ ಕಾರ್ಯದಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ಅಭಿಮಾನಿಗಳು ಮತ್ತು ಹಿತೈಷಿಗಳು ಹಾರೈಸುತ್ತಿದ್ದಾರೆ. ಇದರ ಜೊತೆಗೆ ತಮ್ಮದೇ ಸಿನಿಮಾದ ಕೆಲಸಗಳಲ್ಲಿ ರಾಮ್​ ಚರಣ್​ ಬ್ಯುಸಿ ಆಗಿದ್ದಾರೆ.

ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದರು. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದರು. ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ರಾಮ್​ ಚರಣ್​ ಪತ್ನಿ

‘ನಿಮ್ಮ ಬಗ್ಗೆ ಹೆಮ್ಮೆ ಆಗುತ್ತಿದೆ’ ಎಂದು ರಾಮ್​ ಚರಣ್​ ಅವರ ಅಭಿಮಾನಿಗಳು ಈ ಫೋಟೋವನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ. ‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಮ್ ಚರಣ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ಅವರು ‘ಗೇಮ್​ ಚೇಂಜರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ.

ಇದನ್ನೂ ಓದಿ: Upasana Konidela: ರಾಮ್​ ಚರಣ್​ ಪತ್ನಿ ಉಪಾಸನಾ ಅದ್ದೂರಿ ಸೀಮಂತ ಸಂಭ್ರಮ; ಅಲ್ಲು ಅರ್ಜುನ್, ಸಾನಿಯಾ ಮಿರ್ಜಾ ಭಾಗಿ

ರಾಮ್ ಚರಣ್ ಪಕ್ಕಾ ಫ್ಯಾಮಿಲಿಮ್ಯಾನ್. ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವುದಿಲ್ಲ. ಒಪ್ಪಿಕೊಂಡ ಚಿತ್ರದ ಕೆಲಸದ ಜೊತೆ ಕುಟುಂಬಕ್ಕೂ ಹೆಚ್ಚು ಸಮಯ ನೀಡುತ್ತಾರೆ. ಈಗ ಅವರು ತಂದೆ ಆಗುತ್ತಿರುವ ಖುಷಿಯಲ್ಲಿದ್ದಾರೆ. ಅವರ ಪತ್ನಿ ಉಪಾಸನಾ ಕೊನಿಡೆಲಾ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ