RRR: ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ, ಆಲಿಯಾ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು?

‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅವರು ಈ ಸಿನಿಮಾದ ಲಾಭದಲ್ಲಿ ಶೇ.30ರಷ್ಟು ಪಾಲು ಪಡೆಯಲಿದ್ದಾರೆ ಎನ್ನಲಾಗಿದೆ.

RRR: ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ, ಆಲಿಯಾ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು?
ಜ್ಯೂ. ಎನ್​ಟಿಆರ್​, ರಾಜಮೌಳಿ, ರಾಮ್​ ಚರಣ್​, ಆಲಿಯಾ ಭಟ್​
Follow us
TV9 Web
| Updated By: Digi Tech Desk

Updated on:Dec 25, 2021 | 12:36 PM

ತುಂಬ ಅದ್ದೂರಿಯಾಗಿ ‘ಆರ್​ಆರ್​ಆರ್​’ ಸಿನಿಮಾ (RRR Movie) ಮೂಡಿಬಂದಿದೆ. 2022ರ ಜ.7ರಂದು ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್ ಧೂಳೆಬ್ಬಿಸಿದೆ. ರಾಮ್​ ಚರಣ್​ (Ram Charan), ಜ್ಯೂ. ಎನ್​ಟಿಆರ್ (Jr NTR)​ ಅಭಿಮಾನಿಗಳು ಈ ಸಿನಿಮಾ ಮೇಲೆ ಸಖತ್​ ಭರವಸೆ ಇಟ್ಟುಕೊಂಡಿದ್ದಾರೆ. ರಾಜಮೌಳಿ (SS Rajamouli) ನಿರ್ದೇಶನದ ಸಿನಿಮಾ ಆದ್ದರಿಂದ ನಿರೀಕ್ಷೆ ಡಬಲ್​ ಆಗಿದೆ. ಬೃಹತ್​ ಸೆಟ್​ಗಳು, ಅದ್ದೂರಿ ಗ್ರಾಫಿಕ್ಸ್​ ತಂತ್ರಜ್ಞಾನವು ಈ ಚಿತ್ರದ ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಈಗ ‘ಆರ್​ಆರ್​ಆರ್​’ ತಂಡದವರ ಸಂಭಾವನೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ಅಜಯ್​ ದೇವಗನ್​, ಆಲಿಯಾ ಭಟ್​ (Alia Bhatt) ಮತ್ತು ರಾಜಮೌಳಿ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು ಎಂಬ ಪ್ರಶ್ನೆ ಎದ್ದಿದೆ. ಅದಕ್ಕೆ ಉತ್ತರ ಇಲ್ಲಿದೆ.

ಸಂಭಾವನೆ ವಿಚಾರವನ್ನು ಯಾರೂ ಬಹಿರಂಗವಾಗಿ ಮಾತನಾಡಿಲ್ಲ. ಆದರೆ ಮೂಲಗಳ ಪ್ರಕಾರ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅವರು ಸಮನಾಗಿ ಸಂಭಾವನೆ ಪಡೆದಿದ್ದಾರೆ. ಅಂದರೆ ಇಬ್ಬರೂ ಕೂಡ ತಲಾ 45 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು, ಆಲಿಯಾ ಭಟ್​ ಅವರಿಗೆ 9 ಕೋಟಿ ರೂ. ನೀಡಲಾಗಿದೆ. ಅದೇ ರೀತಿ ಬಾಲಿವುಡ್​ ಕಲಾವಿದ ಅಜಯ್​ ದೇವಗನ್​ ಅವರು 25 ಕೋಟಿ ರೂ. ಸಂಭಾವನೆಯನ್ನು ಪಡೆದಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಿರುವ ರಾಜಮೌಳಿ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅವರು ಈ ಸಿನಿಮಾದ ಲಾಭದಲ್ಲಿ ಶೇ.30ರಷ್ಟು ಪಾಲು ಪಡೆಯಲಿದ್ದಾರೆ ಎನ್ನಲಾಗಿದೆ. ಅದೇ ಅವರ ಸಂಭಾವನೆ ಆಗಿರಲಿದೆ. ಆದರೆ ಈ ಯಾವ ವಿಚಾರಗಳ ಬಗ್ಗೆಯೂ ಚಿತ್ರತಂಡ ಅಧಿಕೃತವಾಗಿ ಮಾತನಾಡಿಲ್ಲ. ಈ ಸಿನಿಮಾವನ್ನು ಡಿವಿವಿ ದಾನಯ್ಯ ನಿರ್ಮಾಣ ಮಾಡಿದ್ದಾರೆ.

ನಟಿ ಆಲಿಯಾ ಭಟ್​ ಅವರಿಗೆ ದಕ್ಷಿಣ ಭಾರತದಲ್ಲಿ ಇದು ಮೊದಲ ಸಿನಿಮಾ. ಈ ಚಿತ್ರ ಕನ್ನಡಕ್ಕೂ ಡಬ್​ ಆಗಿದೆ. ಸದ್ಯ ಪ್ರಚಾರ ಕಾರ್ಯದಲ್ಲಿ ‘ಆರ್​ಆರ್​ಆರ್​’ ಚಿತ್ರತಂಡ ಬ್ಯುಸಿ ಆಗಿದೆ. ಕೆಲವೇ ದಿನಗಳ ಹಿಂದೆ ಬೆಂಗಳೂರಿಗೂ ಬಂದಿದ್ದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ ಮತ್ತು ಆಲಿಯಾ ಭಟ್​ ಅವರು ಮಾಧ್ಯಮಗಳ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ:

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ

Published On - 9:57 am, Sat, 25 December 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ