AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upasana Pregnant: ಮದುವೆ ಆಗಿ 10 ವರ್ಷದ ಬಳಿಕ ಸಿಹಿ ಸುದ್ದಿ​ ನೀಡಿದ ರಾಮ್​ ಚರಣ್​-ಉಪಾಸನಾ

Ram Charan | Upasana: ರಾಮ್​ ಚರಣ್​ ಮತ್ತು ಉಪಾಸನಾ 2012ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬರೋಬ್ಬರಿ 10 ವರ್ಷಗಳ ಬಳಿಕ ಉಪಾಸನಾ ಅವರು ಮೊದಲ ಮಗುವಿಗೆ ಜನ್ಮ ನೀಡಲು ಸಜ್ಜಾಗಿದ್ದಾರೆ.

Upasana Pregnant: ಮದುವೆ ಆಗಿ 10 ವರ್ಷದ ಬಳಿಕ ಸಿಹಿ ಸುದ್ದಿ​ ನೀಡಿದ ರಾಮ್​ ಚರಣ್​-ಉಪಾಸನಾ
ರಾಮ್ ಚರಣ್, ಉಪಾಸನಾ
TV9 Web
| Updated By: ಮದನ್​ ಕುಮಾರ್​|

Updated on:Dec 13, 2022 | 8:38 AM

Share

ಟಾಲಿವುಡ್​ ಸ್ಟಾರ್​ ನಟ ರಾಮ್​ ಚರಣ್​ (Ram Charan) ಅವರು ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ಅವರ ‘ಆರ್​ಆರ್​ಆರ್​’ ಸಿನಿಮಾ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಗೆ ನಾಮಿನೇಟ್​ ಆಗಿರುವುದು. ಅಷ್ಟೇ ಅಲ್ಲ, ಅವರ ಖುಷಿಯನ್ನು ನೂರು ಪಟ್ಟು ಜಾಸ್ತಿ ಮಾಡುವಂತಹ ಮತ್ತೊಂದು ಸುದ್ದಿ ಸಿಕ್ಕಿದೆ. ರಾಮ್​ ಚರಣ್​ ಅವರು ತಂದೆ ಆಗುತ್ತಿದ್ದಾರೆ. ಮದುವೆ ಆಗಿ ಹತ್ತು ವರ್ಷದ ಬಳಿಕ ರಾಮ್​ ಚರಣ್​ ಹಾಗೂ ಉಪಾಸನಾ (Upasana Kamineni) ದಂಪತಿ ಈ ಗುಡ್​ ನ್ಯೂಸ್​ ಹಂಚಿಕೊಂಡಿದ್ದಾರೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಈ ಜೋಡಿಗೆ ಅಭಿಮಾನಿಗಳು ಮತ್ತು ಆಪ್ತರು ಶುಭ ಹಾರೈಸುತ್ತಿದ್ದಾರೆ. ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.

ರಾಮ್​ ಚರಣ್​ ಅವರು ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ಈ ವರ್ಷ ತೆರೆಕಂಡು ಬ್ಲಾಕ್ ಬಸ್ಟರ್​ ಹಿಟ್​ ಆಯಿತು. ಆ ಖುಷಿ ಒಂದು ಕಡೆಯಾದರೆ, ತಾವು ತಂದೆ ಆಗುತ್ತಿರುವ ಸಂಭ್ರಮ ಮತ್ತೊಂದೆಡೆ. ‘ಹನುಮಾನ್​ ದೇವರ ಆಶೀರ್ವಾದದಿಂದ ರಾಮ್​ ಚರಣ್​ ಮತ್ತು ಉಪಾಸನಾ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ’ ಎಂದು ಈ ಜೋಡಿಯ ಪಾಲಕರು ಶುಭ ಸಮಾಚಾರ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
ನರ್ತನ್ ಚಿತ್ರಕ್ಕೆ ರಾಮ್​ ಚರಣ್ ಗ್ರೀನ್ ಸಿಗ್ನಲ್​? ಕೇಳಿ ಬರ್ತಿದೆ ಹೊಸ ಸುದ್ದಿ
Image
‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​
Image
ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ
Image
ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ

ಚಿಕ್ಕ ವಯಸ್ಸಿನಿಂದಲೂ ರಾಮ್​ ಚರಣ್​ ಮತ್ತು ಉಪಾಸನಾ ನಡುವೆ ಗೆಳೆತನ ಇತ್ತು. 2011ರಲ್ಲಿ ಅವರಿಬ್ಬರ ನಿಶ್ಚಿತಾರ್ಥ ನೆರವೇರಿತು. 2012ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಬರೋಬ್ಬರಿ 10 ವರ್ಷಗಳ ಬಳಿಕ ಉಪಾಸನಾ ಅವರು ಮೊದಲ ಮಗುವಿಗೆ ಜನ್ಮ ನೀಡಲು ಸಜ್ಜಾಗಿದ್ದಾರೆ. ಸಂಸಾರವನ್ನು ನಿಭಾಯಿಸುವುದರ ಜೊತೆಗೆ ಪತಿಯ ಸಿನಿಮಾ ಪಯಣಕ್ಕೂ ಬೆಂಬಲವಾಗಿ ನಿಂತಿದ್ದಾರೆ ಉಪಾಸನಾ.

ಇದನ್ನೂ ಓದಿ: ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

‘ಆರ್​ಆರ್​ಆರ್​’ ಚಿತ್ರದ ಗೆಲುವಿನ ಬಳಿಕ ರಾಮ್​ ಚರಣ್​ ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ. ಸಿನಿಮಾದ ಶೀರ್ಷಿಕೆ ಇನ್ನಷ್ಟೇ ಬಹಿರಂಗ ಆಗಬೇಕಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಶಂಕರ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ರಾಮ್​ ಚರಣ್​ ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾನಿ ನಟಿಸುತ್ತಿದ್ದಾರೆ.

‘ಆರ್​ಸಿ 15’ ಸಿನಿಮಾ ಮೂಲಕ ನಿರ್ದೇಶಕ ಶಂಕರ್​ ಅವರು ಟಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಆ ಕಾರಣದಿಂದಲೂ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗುತ್ತಿದೆ. ಇದರ ಶೂಟಿಂಗ್​ ಪ್ರಗತಿಯಲ್ಲಿದ್ದು, 2023ರ ಮಧ್ಯ ಭಾಗದಲ್ಲಿ ರಿಲೀಸ್​ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:38 am, Tue, 13 December 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ