AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Box Office Collection: ಒಂದೇ ವಾರದಲ್ಲಿ ‘ಆರ್​ಆರ್​ಆರ್​’ ಗಳಿಸಿದ್ದು ಎಷ್ಟು ಕೋಟಿ? ಇಲ್ಲಿದೆ ನೋಡಿ ಬಾಕ್ಸಾಫೀಸ್ ಲೆಕ್ಕಾಚಾರ

Rajamouli | Jr NTR | Ram Charan: ‘ಆರ್​ಆರ್​ಆರ್​’ ಗಲ್ಲಾಪೆಟ್ಟಿಗೆಯಲ್ಲಿ ಮುನ್ನುಗ್ಗುತ್ತಿದೆ. ಏಳು ದಿನಗಳ ಅವಧಿಯಲ್ಲಿ ಆರ್​ಆರ್​ಆರ್​ ವಿಶ್ವಾದ್ಯಂತ ಸುಮಾರು 709 ಕೋಟಿ ರೂ ಬಾಚಿಕೊಂಡಿದೆ ಎಂದು ವಿಶ್ಲೇಷಿಸಿದ್ದಾರೆ ಬಾಕ್ಸಾಫೀಸ್ ತಜ್ಞರು. ಪೂರ್ಣ ಬಾಕ್ಸಾಫೀಸ್ ಲೆಕ್ಕಾಚಾರ ಇಲ್ಲಿದೆ ನೋಡಿ.

RRR Box Office Collection: ಒಂದೇ ವಾರದಲ್ಲಿ ‘ಆರ್​ಆರ್​ಆರ್​’ ಗಳಿಸಿದ್ದು ಎಷ್ಟು ಕೋಟಿ? ಇಲ್ಲಿದೆ ನೋಡಿ ಬಾಕ್ಸಾಫೀಸ್ ಲೆಕ್ಕಾಚಾರ
‘ಆರ್​ಆರ್​ಆರ್​’ ಪೋಸ್ಟರ್
TV9 Web
| Edited By: |

Updated on: Apr 01, 2022 | 3:01 PM

Share

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ (RRR Movie) ಭರ್ಜರಿ ಕಲೆಕ್ಷನ್ ಮಾಡುತ್ತಾ ಮುನ್ನುಗ್ಗುತ್ತಿದೆ. ಹಲವು ಭಾಷೆಗಳಲ್ಲಿ ರಿಲೀಸ್ ಆಗಿರುವ ಸಿನಿಮಾಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರಿಲೀಸ್ ಆದ ಒಂದು ವಾರದಲ್ಲೇ ಭರ್ಜರಿ ಗಳಿಕೆ ಮಾಡಿದೆ. ಈ ಹಿಂದೆ 2015ರಲ್ಲಿ ರಿಲೀಸ್ ಆಗಿದ್ದ ರಾಜಮೌಳಿ ನಿರ್ದೇಶನದ ‘ಬಾಹುಬಲಿ 1’ ಒಟ್ಟು 650 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆ ದಾಖಲೆಯನ್ನು ಕೇವಲ ಏಳೇ ದಿನದಲ್ಲಿ ಪುಡಿಪುಡಿ ಮಾಡಿದೆ ‘ಆರ್​ಆರ್​ಆರ್​’. ಇದು ನಿರ್ದೇಶಕ ರಾಜಮೌಳಿ ಜನಪ್ರಿಯತೆ ಹಾಗೂ ಚಿತ್ರದ ಗಟ್ಟಿತನಕ್ಕೆ ಸಾಕ್ಷಿ ಎಂದು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ‘ಆರ್​ಆರ್​ಆರ್​’ನ ಪಾತ್ರಗಳು ತೆಲುಗು ಮೂಲದ್ದಾದರೂ; ದೇಶಭಕ್ತಿಯ ಕತೆಯಾಗಿರುವುದರಿಂದ ಎಲ್ಲರಿಗೂ ಕನೆಕ್ಟ್ ಆಗಿದೆ. ಜತೆಗೆ ಕುಟುಂಬ ಸಮೇತ ನೋಡುವ ಸಿನಿಮಾವಾಗಿರುವುದರಿಂದ ಜನರು ಚಿತ್ರಮಂದಿರಗಳಿಗೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಹಿಂದಿ ಅವತರಣಿಕೆಯಲ್ಲೂ ಚಿತ್ರವು ಕಲೆಕ್ಷನ್ ವಿಚಾರದಲ್ಲಿ ಹಲವು ದಾಖಲೆ ಬರೆದಿದೆ. ಈ ಮೂಲಕ ‘ಆರ್​ಆರ್​ಆರ್​’ ಗಲ್ಲಾಪೆಟ್ಟಿಗೆಯಲ್ಲಿ ಮುನ್ನುಗ್ಗುತ್ತಿದೆ. ಏಳು ದಿನಗಳ ಅವಧಿಯಲ್ಲಿ ಆರ್​ಆರ್​ಆರ್​ ವಿಶ್ವಾದ್ಯಂತ ಸುಮಾರು 709 ಕೋಟಿ ರೂ ಬಾಚಿಕೊಂಡಿದೆ ಎಂದು ವಿಶ್ಲೇಷಿಸಿದ್ದಾರೆ ಬಾಕ್ಸಾಫೀಸ್ ತಜ್ಞರು.

ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ‘ಆರ್​ಆರ್​ಆರ್​’ ಮಾರ್ಚ್ 25ರಂದು ತೆರೆಗೆ ಬಂದಿತ್ತು. ಮೊದಲ ದಿನವೇ ಬರೋಬ್ಬರಿ 257 ಕೋಟಿ ರೂಗಳನ್ನು ಚಿತ್ರ ಬಾಚಿಕೊಂಡಿತ್ತು. ಕ್ರಮೇಣ ಚಿತ್ರದ ಗಳಿಕೆ ಇಳಿಕೆಯಾಗುತ್ತಾ ಬಂದರೂ ಕೂಡ, ಉತ್ತಮವಾಗಿಯೇ ಕಲೆಕ್ಷನ್ ಮಾಡುತ್ತಿದೆ. ಇದೀಗ ಚಿತ್ರ ರಿಲೀಸ್ ಆಗಿ ವಾರ ಕಳೆದಿದ್ದು, ಗುರುವಾರದಂದು 37 ಕೋಟಿ ರೂ ಗಳಿಸುವ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ ₹ 709.36 ಕೋಟಿ ರೂಗೆ ತಲುಪಿದೆ. ಎರಡು ಅಥವಾ ಮೂರನೇ ವಾರದಲ್ಲಿ ಚಿತ್ರವು 1000 ಕೋಟಿ ಕ್ಲಬ್​ ಸೇರಬಹುದು ಎಂಬ ನಿರೀಕ್ಷೆಯನ್ನು ಹಲವರು ವ್ಯಕ್ತಪಡಿಸಿದ್ದಾರೆ.

‘ಆರ್​ಆರ್​ಆರ್​’ ಬಾಕ್ಸಾಫೀಸ್ ಲೆಕ್ಕಾಚಾರ ಹೀಗಿದೆ:

‘ಆರ್​ಆರ್​ಆರ್​’ ಸಿನಿಮಾದಲ್ಲಿ ಬರುವ ಪಾತ್ರಗಳು ನೈಜವಾದರೂ ಕಥೆ ಕಲ್ಪನೆಯನ್ನು ಒಳಗೊಂಡಿದೆ. ಈ ಫ್ಯಾಂಟಸಿ ಕಥೆಯನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ರಾಮ್​ ಚರಣ್ ಹಾಗೂ ಜ್ಯೂ.ಎನ್​ಟಿಆರ್​ಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದ್ದು, ದೇಶದೆಲ್ಲೆಡೆ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ಈ ಚಿತ್ರದ ಪ್ರಚಾರಕ್ಕೆ 40 ಕೋಟಿ ರೂಪಾಯಿ ಖರ್ಚು ಮಾಡಲಾಗಿತ್ತು. ಸಿನಿಮಾದ ಬಜೆಟ್​ 500 ಕೋಟಿ ರೂಪಾಯಿ ದಾಟಿದೆ ಎಂದು ವರದಿಗಳು ಹೇಳಿದ್ದವು.

ಚಿತ್ರದಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಆಲಿಯಾ ಭಟ್ ಹಾಗೂ ಅಜಯ್ ದೇವಗನ್ ಮೊದಲಾದ ಬಾಲಿವುಡ್ ತಾರೆಯರು ಬಣ್ಣಹಚ್ಚಿದ್ದಾರೆ.

ಇದನ್ನೂ ಓದಿ:

ಸೋಲಿಲ್ಲದ ಸರದಾರ ರಾಜಮೌಳಿ ಗೆಲುವಿನ ಗುಟ್ಟೇನು? ಇಲ್ಲಿವೆ ‘ಆರ್​ಆರ್​ಆರ್​’ ನಿರ್ದೇಶಕನ 5 ಸೂತ್ರಗಳು

Vikrant Rona Teaser: ಕಿಚ್ಚನಿಗೆ ಸಾಥ್ ನೀಡಲಿದ್ದಾರೆ ಸಲ್ಲು; ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ ಮಾಡೋ ತಾರೆಯರು ಯಾರೆಲ್ಲಾ? ಇಲ್ಲಿದೆ ನೋಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು