AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಚಿತ್ರಕ್ಕೆ ನಿರ್ದೇಶನ ಮಾಡಲು ರಾಜಮೌಳಿಗೆ ಇಲ್ಲ ಆಸಕ್ತಿ; ಓಪನ್​ ಆಗಿ ಹೇಳಿದ ಕಾರ್ತಿಕೇಯ

SS Karthikeya: ಎಸ್​ಎಸ್​ ಕಾರ್ತಿಕೇಯ ಅವರು ರಾಜಮೌಳಿ ಜೊತೆ ಗುರುತಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ಪ್ರಮುಖವಾಗಿ ಅವರು ನಿರ್ಮಾಣ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.

ಮಗನ ಚಿತ್ರಕ್ಕೆ ನಿರ್ದೇಶನ ಮಾಡಲು ರಾಜಮೌಳಿಗೆ ಇಲ್ಲ ಆಸಕ್ತಿ; ಓಪನ್​ ಆಗಿ ಹೇಳಿದ ಕಾರ್ತಿಕೇಯ
ಕಾರ್ತಿಕೇಯ-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on:Apr 18, 2023 | 8:23 AM

Share

ಎಸ್​.ಎಸ್​. ರಾಜಮೌಳಿ ಅವರು ‘ಆರ್​ಆರ್​ಆರ್’ ಚಿತ್ರದ ಮೂಲಕ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಇಡೀ ವಿಶ್ವಕ್ಕೆ ತೋರಿಸಿದ್ದಾರೆ. ‘ನಾಟು ನಾಟು..’ ಹಾಡು (Naatu Naatu Movie) ಆಸ್ಕರ್ ಗೆದ್ದಿರುವುದರಿಂದ ರಾಜಮೌಳಿ (Rajamouli) ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಅವರ ಜೊತೆ ಕೆಲಸ ಮಾಡಬೇಕು ಎಂದು ಅನೇಕ ಹೀರೋಗಳು ಹಾಗೂ ನಿರ್ಮಾಪಕರು ಪ್ರಯತ್ನಿಸುತ್ತಿದ್ದಾರೆ. ಆದರೆ, ಎಲ್ಲರಿಗೂ ಅವಕಾಶ ಸಿಗೋದಿಲ್ಲ. ಅಚ್ಚರಿಯ ವಿಚಾರ ಏನೆಂದರೆ ಮಗನ ಸಿನಿಮಾಗೆ ನಿರ್ದೇಶನ ಮಾಡೋಕೆ ರಾಜಮೌಳಿಗೆ ಆಸಕ್ತಿ ಇಲ್ಲ. ಈ ವಿಚಾರವನ್ನು ರಾಜಮೌಳಿ ಮಗ ಎಸ್​ಎಸ್​ ಕಾರ್ತಿಕೇಯ ಅವರು ರಿವೀಲ್ ಮಾಡಿದ್ದಾರೆ.

ಎಸ್​ಎಸ್​ ಕಾರ್ತಿಕೇಯ ಅವರು ರಾಜಮೌಳಿ ಜೊತೆ ಗುರುತಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ಪ್ರಮುಖವಾಗಿ ಅವರು ನಿರ್ಮಾಣ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ‘ಆರ್​ಆರ್​ಆರ್’ ಚಿತ್ರಕ್ಕೆ ಅವರು ಲೈನ್ ಪ್ರೊಡ್ಯೂಸರ್ ಆಗಿದ್ದರು. ‘ಈಗ’ ಹಾಗೂ ‘ಯಮದೊಂಗ’ ಚಿತ್ರಕ್ಕೆ ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದರು. ತಾಯಿ ಸೂಚನೆ ಮೇರೆಗೆ ಅವರು ಈ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಮಾರ್ಗದಿಂದ ಅವರು ಹೊರ ಬರುವ ಆಲೋಚನೆಯಲ್ಲಿ ಇಲ್ಲ.

ಇದನ್ನೂ ಓದಿ: Rajamouli: ಆಸ್ಕರ್ ಹಾಲ್​ನ ಕೊನೆ ಸಾಲಲ್ಲಿ ಕೂರಲು ಭಾರಿ ಮೊತ್ತ ಖರ್ಚು ಮಾಡಿದ ರಾಜಮೌಳಿ

ಅಚ್ಚರಿ ಎಂದರೆ ನಟನೆ ಮಾಡೋಕೆ ಕಾರ್ತಿಕೇಯ ಒಲವು ಹೊಂದಿಲ್ಲ. ‘ಆರ್‌ಆರ್‌ಆರ್’ ಸಿನಿಮಾ ಮಾಡುವ ಮೊದಲು ಅವರಿಗೆ ಬಂದ ಆಫರ್‌ಗಳನ್ನು ಅವರು ನಿರಾಕರಿಸಿದ್ದರಂತೆ. ‘ನಟನೆ ಬಗ್ಗೆ ನನಗೆ ಆಸಕ್ತಿ ಕಡಿಮೆ ಎನ್ನುವ ಬಗ್ಗೆ ತಂದೆಗೆ ಚೆನ್ನಾಗಿ ತಿಳಿದಿದೆ. ನಾನು ನಟಿಸುವಂತೆ ಅವರು ಎಂದಿಗೂ ಸಲಹೆ ನೀಡುವುದಿಲ್ಲ ಅಥವಾ ಪ್ರೋತ್ಸಾಹಿಸುವುದಿಲ್ಲ. ನನ್ನ ಸಿನಿಮಾಗೆ ನಿರ್ದೇಶನ ಮಾಡಲು ಅವರಿಗೆ ಆಸಕ್ತಿಯೂ ಇಲ್ಲ’ ಎಂದಿದ್ದಾರೆ ಕಾರ್ತಿಕೇಯ.

ಇದನ್ನೂ ಓದಿ: ಅಮೇಜಾನ್ ಕಾಡುಗಳಲ್ಲಿ ಶೂಟ್ ಆಗಲಿದೆ ರಾಜಮೌಳಿ ಮುಂದಿನ ಸಿನಿಮಾ; ಈ ಕಥೆಗೆ ಸ್ಫೂರ್ತಿ ಏನು?

ಆಸ್ಕರ್​ ಕ್ಯಾಂಪೇನ್​ಗೆ ರಾಜಮೌಳಿ 80 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎಸ್ಎಸ್​ ಕಾರ್ತಿಕೇಯ ಅವರು ಈ ಮೊದಲು ಮಾತನಾಡಿದ್ದರು. ‘ಆರಂಭದಲ್ಲಿ ನಾವು 5 ಕೋಟಿ ರೂಪಾಯಿಯಲ್ಲಿ ಸಿನಿಮಾಗೆ ಕ್ಯಾಂಪೇನ್ ಮಾಡಬಹುದು ಎಂದುಕೊಂಡಿದ್ದೆವು. ಆದರೆ, ನಾವು ಅಂದುಕೊಂಡಿದ್ದಕ್ಕಿಂತ 3.5 ಕೋಟಿ ರೂಪಾಯಿ ಹೆಚ್ಚಾಗಿ ಖರ್ಚಾಯಿತು. ಹಲವು ಕಡೆಗಳಲ್ಲಿ ಸಿನಿಮಾ ಸ್ಕ್ರೀನಿಂಗ್ ಮಾಡಬೇಕಿತ್ತು. ಒಟ್ಟಾರೆ ಖರ್ಚಾದ ಹಣ 8.5 ಕೋಟಿ ರೂಪಾಯಿ. ಇದಕ್ಕೆ ಯಾರ ಸಹಾಯವನ್ನೂ ನಾವು ಪಡೆದಿಲ್ಲ. ನಮ್ಮ ಜೇಬಿನಿಂದ ಖರ್ಚು ಮಾಡಿದ್ದೇವೆ’ ಎಂದು ಕಾರ್ತಿಕೇಯ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:22 am, Tue, 18 April 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!