RRR ಶೂಟಿಂಗ್​ ಲೊಕೇಷನ್​ ನೋಡಲು ಜಪಾನ್​ನಿಂದ ಬಂದ ಫ್ಯಾನ್ಸ್​

ಇಬ್ಬರು ಅಭಿಮಾನಿಗಳು ಜಪಾನ್​ನಿಂದ ಭಾರತಕ್ಕೆ ಬಂದಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾ ನೋಡಿ ಅವರು ಮೆಚ್ಚಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್​ ನಡೆದ ಸ್ಥಳಗಳಿಗೆ ಭೇಟಿ ನೀಡಿ ತಮ್ಮಿಷ್ಟದ ಸಿನಿಮಾವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ರೀತಿಯಲ್ಲೇ ಇವರೂ ಕೂಡ ಪೋಸ್​ ನೀಡಿದ್ದಾರೆ. ಈ ಅಭಿಮಾನಿಗಳ ಪ್ರೀತಿಗೆ ‘ಆರ್​ಆರ್​ಆರ್​’ ಚಿತ್ರತಂಡ ಫಿದಾ ಆಗಿದೆ.

RRR ಶೂಟಿಂಗ್​ ಲೊಕೇಷನ್​ ನೋಡಲು ಜಪಾನ್​ನಿಂದ ಬಂದ ಫ್ಯಾನ್ಸ್​
ಜಪಾನ್​ನಿಂದ ಬಂದ ಅಭಿಮಾನಿಗಳು
Follow us
ಮದನ್​ ಕುಮಾರ್​
|

Updated on: Mar 17, 2024 | 3:38 PM

ವಿಶ್ವಾದ್ಯಂತ ಸದ್ದು ಮಾಡಿದ ‘ಆರ್​ಆರ್​ಆರ್​’ ಸಿನಿಮಾ (RRR Movie) ತೆರೆಕಂಡು 2 ವರ್ಷ ಕಳೆದಿದೆ. ಹಾಗಿದ್ದರೂ ಕೂಡ ಈ ಸಿನಿಮಾ ಮೇಲೆ ಜನರಿಗೆ ಇರುವ ಕ್ರೇಜ್​ ಕಡಿಮೆ ಆಗಿಲ್ಲ. ಭಾರತೀಯರು ಮಾತ್ರವಲ್ಲದೇ ವಿದೇಶದ ಪ್ರೇಕ್ಷಕರು ಕೂಡ ಈ ಸಿನಿಮಾವನ್ನು ಕೊಂಡಾಡಿದ್ದಾರೆ. ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಜಪಾನ್​ನಲ್ಲಿ (Japan) ‘ಆರ್​ಆರ್​ಆರ್​’ ಬಿಡುಗಡೆಯಾಗಿ ಜನಮನ ಗೆದ್ದಿತ್ತು. ಈಗ ಜಪಾನ್​ನಿಂದ ಇಬ್ಬರು ಅಭಿಮಾನಿಗಳು ಭಾರತಕ್ಕೆ ಬಂದು ಆರ್​ಆರ್​ಆರ್​’ ಸಿನಿಮಾದ ಶೂಟಿಂಗ್ ನಡೆದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಆ ವಿಡಿಯೋ ವೈರಲ್​ ಆಗಿದೆ.

‘ಆರ್​ಆರ್​ಆರ್’ ಸಿನಿಮಾದ ಅಧಿಕೃತ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಈ ವಿಡಿಯೋಗಳನ್ನು ಹಂಚಿಕೊಳ್ಳಲಾಗಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರು ಸ್ನೇಹಿತರಾಗಿ ನಟಿಸಿದ್ದಾರೆ. ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡ ರೀತಿಯಲ್ಲೇ ಜಪಾನ್​ ಅಭಿಮಾನಿಗಳು ಪೋಸ್​ ನೀಡಿದ್ದಾರೆ. ಅವರ ಅಭಿಮಾನಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಈ ಸಿನಿಮಾದಲ್ಲಿ ರಾಮ್​ ಚರಣ್​ ಅವರು ಕುದುರೆ ಸವಾರಿ ಮಾಡುವಾಗ ಜೂನಿಯರ್​ ಎನ್​ಟಿಆರ್​ ಅವರು ಪಕ್ಕದಲ್ಲೇ ಬೈಕ್​ ಓಡಿಸುವ ದೃಶ್ಯ ಇದೆ. ದೋಸ್ತಿ ಹಾಡಿನಲ್ಲಿ ಆ ದೃಶ್ಯ ಹೈಲೈಟ್​ ಆಗಿದೆ. ಅದೇ ರೀತಿಯಲ್ಲಿ ಜಪಾನ್​ನಿಂದ ಬಂದ ಈ ಅಭಿಮಾನಿಗಳಿಬ್ಬರು ಪೋಸ್ ನೀಡಿದ್ದಾರೆ. ಅವರಿಬ್ಬರ ಖುಷಿಯನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ದೂರದ ಜಪಾನ್​ನಿಂದ ಬಂದು ಆರ್​ಆರ್​ಆರ್​ ಸಿನಿಮಾವನ್ನು ಬೇರೆ ಎಲ್ಲರಿಗಿಂತ ಭಿನ್ನವಾಗಿ ಸೆಲೆಬ್ರೇಟ್​ ಮಾಡುತ್ತಿದ್ದಾರೆ’ ಎಂಬ ಕ್ಯಾಪ್ಷನ್​ನೊಂದಿಗೆ ಈ ಪೋಸ್ಟ್​ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ

ಇನ್ನೊಂದು ಅಚ್ಚರಿಯ ವಿಚಾರ ಏನೆಂದರೆ, ಜಪಾನ್​ನಲ್ಲಿ ಈಗಲೂ ‘ಆರ್​ಆರ್​ಆರ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಅಲ್ಲದೇ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ‘ಜಪಾನ್​ನಲ್ಲಿ ಈ ಸಿನಿಮಾ ತೆರೆಕಂಡು ಒಂದೂವರೆ ವರ್ಷ ಆಯಿತು. ಈಗಲೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಮಾರ್ಚ್​ 18ರ ಶೋನ ಟಿಕೆಟ್​ಗಳು ಕೇವಲ ಒಂದು ನಿಮಿಷದಲ್ಲಿ ಸೋಲ್ಡ್​ಔಟ್​ ಆಗಿವೆ’ ಎಂದು ‘ಆರ್​ಆರ್​​ಆರ್​’ ಚಿತ್ರತಂಡದವರು ಪೋಸ್ಟ್​ ಮಾಡಿದ್ದಾರೆ. ಆ ಮೂಲಕ ಅಲ್ಲಿನ ಜನರಿಗೆ ಈ ಸಿನಿಮಾದ ಮೇಲೆ ಎಷ್ಟು ಕ್ರೇಜ್​ ಇದೆ ಎಂಬುದು ಗೊತ್ತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು