AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಮಂದಿಗೆ ಪರಿಚಯಗೊಳ್ಳಲು ಹೊಸ ತಂತ್ರದ ಮೊರೆ ಹೋದ ಜೂನಿಯರ್ ಎನ್​ಟಿಆರ್

‘ದೇವರ’ ಚಿತ್ರದ ಶೂಟ್​ನಲ್ಲಿ ಜೂನಿಯರ್​ ಎನ್​ಟಿಆರ್ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಕೆಲಸ ಮುಗಿದ ಬಳಿಕ ಅವರು ‘ವಾರ್ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಬಾಲಿವುಡ್​ನ ದೊಡ್ಡ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈಗ ಅವರು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಚರ್ಚೆ ಆಗುತ್ತಿದೆ.

ಹಿಂದಿ ಮಂದಿಗೆ ಪರಿಚಯಗೊಳ್ಳಲು ಹೊಸ ತಂತ್ರದ ಮೊರೆ ಹೋದ ಜೂನಿಯರ್ ಎನ್​ಟಿಆರ್
ಜೂನಿಯರ್ ಎನ್​ಟಿಆರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 12, 2024 | 9:29 AM

Share

ಜೂನಿಯರ್​ ಎನ್​ಟಿಆರ್ (Jr. NTR) ಅವರ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. 96ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ‘ನಾಟು ನಾಟು..’ ಚಿತ್ರದ ಹಾಡಿನ ದೃಶ್ಯವನ್ನು ಪ್ರಸಾರ ಮಾಡಲಾಗಿದೆ. ಅಷ್ಟೇ ಅಲ್ಲ ಆ್ಯಕ್ಷನ್ ದೃಶ್ಯಗಳನ್ನು ತೋರಿಸುವಾಗ ‘ಆರ್​ಆರ್​ಆರ್’ ಚಿತ್ರಕ್ಕೂ ಗೌರವ ನೀಡಲಾಗಿದೆ. ಈ ಎಲ್ಲಾ ಕಾರಣದಿಂದ ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಖುಷಿಯಾಗಿದ್ದಾರೆ. ಬಾಲಿವುಡ್​ಗೆ ಕಾಲಿಡುತ್ತಿರುವ ಜೂನಿಯರ್​ ಎನ್​ಟಿಆರ್ ಅವರು ಹೊಸ ಪ್ಲ್ಯಾನ್ ಒಂದನ್ನು ರೂಪಿಸಿದ್ದಾರೆ. ‘ವಾರ್ 2’ ಕೆಲಸ ಆರಂಭಕ್ಕೂ ಮುನ್ನ ಅವರು ಹೊಸ ತಂತ್ರದ ಮೊರೆ ಹೋಗಿದ್ದಾರೆ.

‘ಆರ್​ಆರ್​ಆರ್​’ ಚಿತ್ರದ ಬಳಿಕ ಜೂನಿಯರ್ ಎನ್​ಟಿಆರ್ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರದ ಬಳಿಕ ಮುಂದಿನ ಸಿನಿಮಾದ ಕೆಲಸ ಆರಂಭಿಸಲು ಅವರು ಸ್ವಲ್ಪ ಸಮಯ ತೆಗೆದುಕೊಂಡರು. ಈಗ ‘ದೇವರ’ ಚಿತ್ರದ ಶೂಟ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ಚಿತ್ರದ ಕೆಲಸ ಮುಗಿದ ಬಳಿಕ ಅವರು ‘ವಾರ್ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಬಾಲಿವುಡ್​ನ ದೊಡ್ಡ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈಗ ಅವರು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಜೂನಿಯರ್ ಎನ್​ಟಿಆರ್ ಅವರು ಇತ್ತೀಚೆಗೆ ಅಗ್ರೆಸ್ಸಿವ್ ಆಗಿ ಟಿವಿ ಕಮರ್ಷಿಯಲ್​ಗಳನ್ನು ಮಾಡುತ್ತಿಲ್ಲ. ಹೊಸ ಬ್ರ್ಯಾಂಡ್​ಗಳಿಗೆ ಅವರು ಅಂಬಾಸಿಡರ್ ಆಗಿಲ್ಲ. ಈಗ ಅವರು ಮತ್ತೆ ಹೊಸ ಹೊಸ ಬ್ರ್ಯಾಂಡ್​ಗಳ ಪ್ರಚಾರಕ್ಕೆ ಮುಂದಾಗಿದ್ದಾರೆ. ಅವರು ಈ ರೀತ ಆಲೋಚಿಸುವುದಕ್ಕೂ ಒಂದು ಕಾರಣ ಇದೆ ಎಂದು ವರದಿ ಆಗಿದೆ.

ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರೆ ಜನರ ಜೊತೆ ಕನೆಕ್ಟ್ ಆದ ಹಾಗೆ ಆಗುತ್ತದೆ. ಸಿನಿಮಾದಲ್ಲಿ ನಟಿಸುವುದಕ್ಕೂ ಮೊದಲು ಜಾಹೀರಾತು ಮಾಡಿದರೆ ಹೊಸ ಮುಖ ಎನ್ನುವ ಭಾವನೆ ಕಾಡುವುದಿಲ್ಲ. ಹೀಗಾಗಿ, ಒಂದೆರಡು ದೊಡ್ಡ ಬ್ರ್ಯಾಂಡ್​ಗಳ ಜೊತೆ ಕೈ ಜೋಡಿಸಲು ಅವರು ಪ್ಲ್ಯಾನ್ ರೂಪಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಅವರು ಮುಂಬೈಗೆ ತೆರಳಿ ಕೆಲವು ಏಜೆನ್ಸಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಬ್ರ್ಯಾಂಡ್​ಗಳು ಕೂಡ ದೊಡ್ಡ ಹೀರೋಗಳ ಜೊತೆ ಕೈ ಜೋಡಿಸಲು ಆಸಕ್ತಿ ತೋರಿಸುತ್ತವೆ. ಹೀಗಿರುವಾಗ ಹೀರೋಗಳೇ ಆಸಕ್ತಿ ತೋರಿಸಿ ಮುಂದೆ ಬಂದಾಗ ಇಂಥ ಅವಕಾಶವನ್ನು ಬ್ರ್ಯಾಂಡ್​ಗಳು ಮಿಸ್ ಮಾಡಿಕೊಳ್ಳುವುದೇ ಇಲ್ಲ. ‘ವಾರ್ 2’ ಶೂಟಿಂಗ್​ಗೂ ಮೊದಲು ಜಾಹೀರಾತು ಶೂಟ್​ನಲ್ಲಿ ಅವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಯಶ್, ರಾಮ್ ಚರಣ್ ಬಳಿಕ ವಿಜಯ್ ದೇವರಕೊಂಡ ಪಾಲಾದ ನರ್ತನ್ ಕತೆ

ಈಗಾಗಲೇ ಮಹೇಶ್ ಬಾಬು, ವಿಜಯ್ ದೇವರಕೊಂಡ, ರಾಮ್ ಚರಣ್ ಮೊದಲಾದ ಸ್ಟಾರ್​ಗಳು ಜಾಹೀರಾತುಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಕೆಲವರದ್ದು ಹಣ ಮಾಡುವ ಉದ್ದೇಶವಾದರೆ ಇನ್ನೂ ಕೆಲವರದ್ದು ಜನರ ಎದುರು ಹೆಚ್ಚು ಕಾಣಿಸಿಕೊಳ್ಳಬೇಕು ಎಂಬುದು. ಜೂನಿಯರ್ ಎನ್​ಟಿಆರ್ ಅವರು ಯಾವ ರೀತಿಯ ಜಾಹೀರಾತು ಒಪ್ಪಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

‘ದೇವರ’ ಸಿನಿಮಾಗೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್​ನ ಜಾನ್ವಿ ಕಪೂರ್ ಈ ಚಿತ್ರಕ್ಕೆ ನಾಯಕಿ. ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಬರಲಿದೆಯಂತೆ. ಅಕ್ಟೋಬರ್ 10ರಂದು ಸಿನಿಮಾ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!