ಭಾರತದಲ್ಲಿ ಕೊವಿಡ್ ಸಂಖ್ಯೆ (Covid Cases) ಹೆಚ್ಚುತ್ತಿದೆ. ಆದರೆ, ಕೊರೊನಾದ ತೀವ್ರತೆ ಮೊದಲಿನಷ್ಟಿಲ್ಲ. ಸಾವುಗಳು ಹೆಚ್ಚು ಸಂಭವಿಸುತ್ತಿಲ್ಲ. ಇದರಿಂದ ಜನರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ನಾನಾ ರಾಜ್ಯಗಳಲ್ಲಿ ಜಾರಿಗೆ ತರಲಾದ ಕಠಿಣ ನಿಯಮಗಳನ್ನು ದಿನ ಕಳೆದಂತೆ ಸಡಿಲಿಕೆ ಮಾಡಲಾಗುತ್ತಿದೆ. ಹೀಗಾಗಿ, ಚಿತ್ರರಂಗ ಮತ್ತೆ ಆ್ಯಕ್ಟೀವ್ ಆಗುತ್ತಿದೆ. ಶೀಘ್ರವೇ ಎಲ್ಲವೂ ಸಮಸ್ಥಿತಿಗೆ ಮರಳುವ ನಿರೀಕ್ಷೆ ಇದೆ. ಹೀಗಾಗಿ, ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟ ಬಿಗ್ ಬಜೆಟ್ ಚಿತ್ರಗಳು ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ‘ಆರ್ಆರ್ಆರ್’ ಚಿತ್ರತಂಡ (RRR Team) ಹೊಸ ರಿಲೀಸ್ ದಿನಾಂಕ ಘೋಷಣೆ ಮಾಡಿದೆ. ಆದರೆ, ಇಲ್ಲಿಯೂ ಗೊಂದಲ ಮುಂದುವರಿದಿದೆ.
ದೇಶದಲ್ಲಿ ಅನಿಶ್ಚಿತತೆ ಮುಂದುವರಿದಿದೆ. ಕೊವಿಡ್ ಅತಿಯಾಗಿ ಹೆಚ್ಚುತ್ತಿದೆಯಾದರೂ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿಲ್ಲ. ಹೀಗಾಗಿ, ಜನರು ಕೊರೊನಾ ಜತೆಯೇ ಜೀವಿಸುವುದನ್ನು ಕಲಿಯುತ್ತಿದ್ದಾರೆ. ಹೀಗಾಗಿ, ಮುಂದಿನ ಕೆಲವೇ ತಿಂಗಳಲ್ಲಿ ಪರಿಸ್ಥಿತಿ ಸಮಸ್ಥಿತಿಗೆ ಬರಬಹುದು ಎನ್ನುವ ನಿರೀಕ್ಷೆ ಎಲ್ಲರಲ್ಲಿಯೂ ಇದೆ. ಈ ಕಾರಣಕ್ಕೆ ‘ಆರ್ಆರ್ಆರ್’ ತಂಡ ಹೊಸ ರಿಲೀಸ್ ದಿನಾಂಕ ಘೋಷಣೆ ಮಾಡಿದೆ.
ಇಂದು (ಜನವರಿ 21) ‘ಆರ್ಆರ್ಆರ್’ ತಂಡ ರಿಲೀಸ್ ದಿನಾಂಕ ಘೋಷಣೆ ಮಾಡಿದೆ. ‘ಆರ್ಆರ್ಆರ್’ ತಂಡ ಮಾರ್ಚ್ 18ರಂದು ಸಿನಿಮಾ ರಿಲೀಸ್ ಮಾಡಲು ನಿರ್ಧರಿಸಿದೆ. ಒಂದೊಮ್ಮೆ ಆ ದಿನಾಂಕದ ಒಳಗೆ ಪರಿಸ್ಥಿತಿ ಸಮಸ್ಥಿತಿಗೆ ಬರದಿದ್ದರೆ ಏಪ್ರಿಲ್ 28ರಂದು ಚಿತ್ರ ರಿಲೀಸ್ ಆಗಲಿದೆ. ‘ಆರ್ಆರ್ಆರ್’ ತಂಡದಲ್ಲಿ ರಿಲೀಸ್ ದಿನಾಂಕದ ಬಗ್ಗೆ ಇನ್ನೂ ಗೊಂದಲ ಇದೆ. ಮಾರ್ಚ್ ವೇಳೆಗೆ ಪರಿಸ್ಥಿತಿ ಸಮಸ್ಥಿತಿಗೆ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
#RRRMovie on March 18th 2022 or April 28th 2022. ?? pic.twitter.com/Vbydxi6yqo
— RRR Movie (@RRRMovie) January 21, 2022
ಎಸ್ಎಸ್ ರಾಜಮೌಳಿ ನಿರ್ದೇಶನ ಇರುವ ಈ ಸಿನಿಮಾದಲ್ಲಿ, ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಬಾಲಿವುಡ್ನ ಖ್ಯಾತ ನಟಿ ಆಲಿಯಾ ಭಟ್ ಅವರು ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ನಟ ಅಜಯ್ ದೇವಗನ್ ಕೂಡ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಾರೆ. ಟ್ರೇಲರ್ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರತಂಡ ಮತ್ತೆ ಪ್ರಚಾರ ಕಾರ್ಯ ನಡೆಸುವ ಸಾಧ್ಯತೆ ಇದೆ.
ಇದನ್ನೂ ಓದಿ: ಮತ್ತೆ ನಾಗ ಚೈತನ್ಯ ಜೊತೆ ಸಂಸಾರ ಮಾಡ್ತಾರಾ ಸಮಂತಾ? ವಿಚ್ಛೇದನದ ಪೋಸ್ಟ್ ಏಕಾಏಕಿ ಡಿಲೀಟ್
‘ಆರ್ಆರ್ಆರ್’ ಚಿತ್ರದ ಪ್ರಚಾರಕ್ಕೆ ಹಾಕಿದ ಹಣ ನಿಜಕ್ಕೂ ದೊಡ್ಡ ವ್ಯರ್ಥ ಎಂದ ಖ್ಯಾತ ನಿರ್ದೇಶಕ