500 ಕೋಟಿ ಬಜೆಟ್​, 800 ಕೋಟಿ ಪ್ರೀ-ರಿಲೀಸ್​ ಬಿಸ್ನೆಸ್​; ‘ಆರ್​ಆರ್​ಆರ್​’ ಕುರಿತ ಅಚ್ಚರಿ ವಿಚಾರಗಳು

‘ಬಾಹುಬಲಿ 2’ ಬಳಿಕ ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬರುತ್ತಿರುವ ಸಿನಿಮಾ ಇದಾಗಿದೆ. ಈ ಎಲ್ಲಾ ಕಾರಣಕ್ಕೆ ‘ಆರ್​ಆರ್​ಆರ್​’ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಒಂದಷ್ಟು ಅಚ್ಚರಿಯ ವಿಚಾರ ಇಲ್ಲಿದೆ.

500 ಕೋಟಿ ಬಜೆಟ್​, 800 ಕೋಟಿ ಪ್ರೀ-ರಿಲೀಸ್​ ಬಿಸ್ನೆಸ್​; ‘ಆರ್​ಆರ್​ಆರ್​’ ಕುರಿತ ಅಚ್ಚರಿ ವಿಚಾರಗಳು
‘ಆರ್​ಆರ್​ಆರ್​’ ಪೋಸ್ಟರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 24, 2022 | 4:55 PM

‘ಆರ್​ಆರ್​ಆರ್​’ ಸಿನಿಮಾ (RRR Movie) ತೆರೆಗೆ ಬರೋಕೆ ಕ್ಷಣಗಣನೆ ಆರಂಭವಾಗಿದೆ. ಇಂದು (ಮಾರ್ಚ್​ 24) ಮಧ್ಯರಾತ್ರಿಯಿಂದಲೇ ಸಿನಿಮಾ ಪ್ರದರ್ಶನ ಕಾಣಲಿದೆ. ರಾಮ್​ ಚರಣ್ (Ram Charan)​, ಜ್ಯೂ.ಎನ್​ಟಿಆರ್​, ಆಲಿಯಾ ಭಟ್, ಅಜಯ್​ ದೇವಗನ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ದೊಡ್ಡ ಮಟ್ಟದ ಬಜೆಟ್​ನಲ್ಲಿ ಸಿದ್ಧಗೊಂಡಿದೆ. ‘ಬಾಹುಬಲಿ 2’ ಬಳಿಕ ರಾಜಮೌಳಿ (SS Rajamouli)ನಿರ್ದೇಶನದಲ್ಲಿ ತೆರೆಗೆ ಬರುತ್ತಿರುವ ಸಿನಿಮಾ ಇದಾಗಿದೆ. ಈ ಎಲ್ಲಾ ಕಾರಣಕ್ಕೆ ‘ಆರ್​ಆರ್​ಆರ್​’ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಒಂದಷ್ಟು ಅಚ್ಚರಿಯ ವಿಚಾರ ಇಲ್ಲಿದೆ.

  1. ‘ಆರ್​ಆರ್​ಆರ್​’ ಸಿನಿಮಾಗೆ ಬರೋಬ್ಬರಿ 300 ದಿನ ಶೂಟ್ ಮಾಡಲಾಗಿದೆ. ಹೈದರಾಬಾದ್​, ಪುಣೆ ಮತ್ತು ಉಕ್ರೇನ್​ ಸೇರಿ ಹಲವು ಕಡೆಗಳಲ್ಲಿ ಶೂಟ್​ ಮಾಡಲಾಗಿದೆ. ಈ ಸಿನಿಮಾ ಕೆಲಸಗಳು ಕೊವಿಡ್ ಕಾರಣದಿಂದ ವಿಳಂಬವಾಗಿತ್ತು. ಈ ಕಾರಣಕ್ಕೆ ಚಿತ್ರದ ಬಜೆಟ್​ 500 ಕೋಟಿ ರೂಪಾಯಿ ಮೀರಿದೆ.
  2. ‘ಆರ್​ಆರ್​ಆರ್’​ ರಿಲೀಸ್​ಗೂ ಮೊದಲೇ ​ಒಳ್ಳೆಯ ಬಿಸ್ನೆಸ್​ ಮಾಡಿದೆ. ಈ ಚಿತ್ರ ಪ್ರೀ-ರಿಲೀಸ್​ ಬಿಸ್ನೆಸ್​ನಲ್ಲಿ 800 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನುತ್ತಿವೆ ಮೂಲಗಳು. ತೆಲುಗು ಒಂದರಲ್ಲೇ 200 ಕೋಟಿ ರೂಪಾಯಿ ಬಾಚಿಕೊಂಡಿದೆ ಎನ್ನಲಾಗುತ್ತಿದೆ.
  3. ‘ಆರ್​ಆರ್​ಆರ್​’ 60 ರಾಷ್ಟ್ರಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ಹಿಂದಿ ಮತ್ತು ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ.
  4. 8,000 ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಮೊದಲ ದಿನ ‘ಬಾಹುಬಲಿ 2’ ಸಿನಿಮಾ ಕಲೆಕ್ಷನ್​ ದಾಖಲೆಯನ್ನು ಈ ಚಿತ್ರ ಮುರಿಯುವ ಸಾಧ್ಯತೆ ಇದೆ.
  5. ಸಿನಿಮಾ ಪ್ರಮೋಷನ್​ಗೆ 40 ಕೋಟಿ ರೂಪಾಯಿಗೂ ಅಧಿಕ ಖರ್ಚಾಗಿದೆ. ನಾನಾ ರಾಜ್ಯಗಳಲ್ಲಿ ತೆರಳಿ ಈ ಸಿನಿಮಾದ ಪ್ರಮೋಷನ್ ಮಾಡಲಾಗಿದೆ.
  6. ಮುಂದಿನ ದಿನಗಳಲ್ಲಿ ಎರಡು ಒಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ಆಗಲಿದೆ. ‘ಆರ್​ಆರ್​ಆರ್​’ ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡ ವರ್ಷನ್ ಜೀ5 ಹಾಗೂ ಹಿಂದಿ ವರ್ಷನ್​ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ಟೀಂ ಕಡೆಯಿಂದ ಒಂದು ಗುಡ್​ ನ್ಯೂಸ್, ಒಂದು ಬ್ಯಾಡ್​ ನ್ಯೂಸ್​

ಪ್ರಿಯಕರನ ಜತೆ ಇದ್ದಾಗಲೂ ‘ಆರ್​ಆರ್​ಆರ್​’ ಪ್ರಚಾರ ಮಾಡಿದ ನಟಿ ಆಲಿಯಾ ಭಟ್​; ವಿಡಿಯೋ ವೈರಲ್​

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ