AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಎಕರೆ ಜಾಗದಲ್ಲಿ RRR ಪ್ರೀ-ರಿಲೀಸ್​ ಇವೆಂಟ್​ಗೆ ಸಿದ್ಧತೆ;​ ಅತಿಥಿಯಾಗಿ ಬರ್ತಾರೆ ಸಿಎಂ ಬೊಮ್ಮಾಯಿ, ಶಿವಣ್ಣ

RRR Pre Release Event: ‘ಆರ್​ಆರ್​ಆರ್’​ ಚಿತ್ರ ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದರೂ ಕೂಡ ಕರ್ನಾಟಕದಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಯಲಿದೆ.  ಅದಕ್ಕಾಗಿ ಈಗಾಗಲೇ ತಯಾರಿ ನಡೆದಿದೆ.

100 ಎಕರೆ ಜಾಗದಲ್ಲಿ RRR ಪ್ರೀ-ರಿಲೀಸ್​ ಇವೆಂಟ್​ಗೆ ಸಿದ್ಧತೆ;​ ಅತಿಥಿಯಾಗಿ ಬರ್ತಾರೆ ಸಿಎಂ ಬೊಮ್ಮಾಯಿ, ಶಿವಣ್ಣ
ಆರ್​ಆರ್​ಆರ್​ ಸಿನಿಮಾ ಪ್ರೀ-ರಿಲೀಸ್​ ಇವೆಂಟ್
TV9 Web
| Edited By: |

Updated on:Mar 13, 2022 | 2:17 PM

Share

ಈ ವರ್ಷದ ಬಹುನಿರೀಕ್ಷಿತ ‘ಆರ್​ಆರ್​ಆರ್​’ ಸಿನಿಮಾ (RRR Movie) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಮಾ.25ರಂದು ಈ ಚಿತ್ರ ಅದ್ದೂರಿಯಾಗಿ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಕರ್ನಾಟಕದಲ್ಲಿ ಕೆವಿಎನ್​ ಪ್ರೊಡಕ್ಷನ್​ ಸಂಸ್ಥೆಯು ‘ಆರ್​ಆರ್​ಆರ್​’ ಸಿನಿಮಾದ ವಿತರಣೆ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ರಾಜಮೌಳಿ ನಿರ್ದೇಶನದ ಈ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಆಗಿದೆ. ಅಷ್ಟೇ ದೊಡ್ಡ ಮಟ್ಟದಲ್ಲಿ ಪ್ರೀ-ರಿಲೀಸ್​ ಇವೆಂಟ್ (RRR Pre Release Event)​ ಮಾಡಲು ಸಿದ್ಧತೆ ನಡೆದಿದೆ. ಈ ಕುರಿತು ಮಾಹಿತಿ ನೀಡಲು ಕೆವಿಎನ್ ಸಂಸ್ಥೆಯ ವೆಂಕಟ್​ ಕೊಣಂಕಿ ಅವರು ಭಾನುವಾರ (ಮಾ.13) ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಪ್ರೀ-ರಿಲೀಸ್​ ಕಾರ್ಯಕ್ರಮದ ಬಗ್ಗೆ ಅವರು ಹಲವು ಮಾಹಿತಿ ಹಂಚಿಕೊಂಡರು. ರಾಮ್​ ಚರಣ್​, ಆಲಿಯಾ ಭಟ್​, ಜ್ಯೂ. ಎನ್​ಟಿಆರ್​ ಮುಂತಾದ ಸ್ಟಾರ್​ ಕಲಾವಿದರು ‘ಆರ್​ಆರ್​ಆರ್​’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿದೆ. ವಿದೇಶದ ಹಲವು ಸ್ಕ್ರೀನ್​ಗಳಲ್ಲಿ ಬಿಡುಗಡೆ ಆಗಲಿದೆ. ಮಾ.19ರಂದು ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಅದ್ದೂರಿಯಾಗಿ ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai)  ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಆಗಮಿಸಲಿದ್ದಾರೆ.

‘ಬಾಹುಬಲಿ’ ಚಿತ್ರದ ಯಶಸ್ಸಿನ ಬಳಿಕ ರಾಜಮೌಳಿ ನಿರ್ದೇಶನ ಮಾಡಿರುವ ಸಿನಿಮಾ ಆದ್ದರಿಂದ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ. ಕನ್ನಡಕ್ಕೂ ಡಬ್​ ಆಗಿ ‘ಆರ್​ಆರ್​ಆರ್​’ ಚಿತ್ರ ಬಿಡುಗಡೆ ಆಗುತ್ತಿದೆ. ‘ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದರೂ ಕೂಡ ಕರ್ನಾಟಕದಲ್ಲಿ ಪ್ರೀ-ರಿಲೀಸ್​ ಇವೆಂಟ್​ ಮಾಡುತ್ತಿರುವುದು ನಮ್ಮ ಹೆಮ್ಮೆ. ಇದು ಭಾರತದ ಅತಿ ದೊಡ್ಡ ಪ್ರೀ-ರಿಲೀಸ್​ ಇವೆಂಟ್​ ಆಗಿರಲಿದೆ. ಬೇರೆ ರಾಜ್ಯಗಳಿಂದಲೂ ಇದಕ್ಕೆ ಅಭಿಮಾನಿಗಳು ಬರಲಿದ್ದಾರೆ’ ಎಂದು ವೆಂಕಟ್​ ಕೊಣಂಕಿ ಹೇಳಿದ್ದಾರೆ.

ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಏನೆಲ್ಲ ಇರಲಿದೆ?

ಆರ್​ಆರ್​ಆರ್​ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮದಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸಲಾಗುತ್ತದೆ. 25 ಸಾವಿರ ಚದರ ಅಡಿಯ ಬೃಹತ್​ ಎಲ್​ಇಡಿ ಸ್ಕ್ರೀನ್​ ಮತ್ತು 45 ಬೃಹತ್​ ಲೇಸರ್​ ಲೈಟ್​ಗಳ ದೊಡ್ಡ ವೇದಿಕೆ ಸಿದ್ಧವಾಗುತ್ತಿದೆ. ಅನುಶ್ರೀ, ಅಕುಲ್​ ಬಾಲಾಜಿ, ಸುಮಾ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. 2 ಲಕ್ಷ ಜನರು ಈ ಇವೆಂಟ್​ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿವರಾಜ್​ಕುಮಾರ್​ ಅವರ ಜೊತೆಯಲ್ಲಿ ಚಿಕ್ಕಬಳ್ಳಾಪುರ ಶಾಸಕ, ಆರೋಗ್ಯ ಸಚಿವ ಕೆ. ಸುಧಾಕರ್​ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಅವರು ಲೈವ್​ ಕಾರ್ಯಕ್ರಮ ನೀಡಲಿದ್ದಾರೆ.

ಎಲ್ಲಿ ಸಿಗಲಿದೆ ಪಾಸ್​?

ಈ ಕಾರ್ಯಕ್ರಮಕ್ಕೆ ಎಲ್ಲ ಅಭಿಮಾನಿಗಳಿಗೂ ಮುಕ್ತ ಆಹ್ವಾನ ನೀಡಲಾಗಿದೆ. ಕೆವಿಎನ್​​ ಸಂಸ್ಥೆಯ www.kvnproductions.co.in ವೆಬ್​ ಸೈಟ್​ ಮೂಲಕ ಪಾಸ್​ಗಳನ್ನು ಉಚಿತವಾಗಿ ಪಡೆಯಬಹುದು. ಈ ಇವೆಂಟ್​ ನಡೆಸಿಕೊಡುವ ಜವಾಬ್ದಾರಿಯನ್ನು ಜೆ ಮೀಡಿಯಾ ಸಂಸ್ಥೆ ವಹಿಸಿಕೊಂಡಿದೆ. ಇಡೀ ಕಾರ್ಯಕ್ರಮವೇ ಒಂದು ವಿಶ್ಯುವಲ್​ ಟ್ರೀಟ್​ ಆಗಿರಲಿದೆ ಎಂದು ವೆಂಕಟ್​ ಕೊಣಂಕಿ ಅವರು ತಿಳಿಸಿದ್ದಾರೆ. ರಾಮ್​ ಚರಣ್​, ಆಲಿಯಾ ಭಟ್​, ಜ್ಯೂ. ಎನ್​ಟಿಆರ್​, ಅಜಯ್​ ದೇವಗನ್​ ಸೇರಿದಂತೆ ಅನೇಕ ಕಲಾವಿದರು ಈ ಇವೆಂಟ್​ನಲ್ಲಿ ಭಾಗವಹಿಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ‘ಆರ್​ಆರ್​ಆರ್​’ ಚಿತ್ರ ರಿಲೀಸ್​ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಪದೇಪದೇ ಪೋಸ್ಟ್​ಪೋನ್​ ಆಗಿತ್ತು. ಈಗ ಚಿತ್ರದ ಬಿಡುಗಡೆಗೆ ಕಾಲ ಕೂಡಿಬಂದಿದ್ದು, ಮಾ.25ರಂದು ಅದ್ದೂರಿಯಾಗಿ ತೆರೆಕಾಣಲಿದೆ.

ಇದನ್ನೂ ಓದಿ:

‘ಆರ್​ಆರ್​ಆರ್​’ ನಿರ್ಮಾಪಕನ ಖಾತೆಯಿಂದ ಪ್ರಭಾಸ್​ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?  

RRR: ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ, ಆಲಿಯಾ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು?

Published On - 2:10 pm, Sun, 13 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?