ಒಂದು ದಿನ ಮೊದಲೇ ನೋಡಬಹುದು RRR ಚಿತ್ರ; ರಾಜಮೌಳಿ ಟೀಮ್​ ಮಾಡಿರುವ ಪ್ಲ್ಯಾನ್ ಏನು?

ಮಾ.25ರಂದು ‘ಆರ್​ಆರ್​ಆರ್​’ ಚಿತ್ರ ರಿಲೀಸ್​ ಆಗಲಿದೆ. ಆದರೆ ಅದಕ್ಕಿಂತಲೂ ಒಂದು ದಿನ ಮುನ್ನ ಪೇಯ್ಡ್​ ಪ್ರೀಮಿಯರ್​ ಪ್ರದರ್ಶನಗಳನ್ನು ಏರ್ಪಡಿಸುವ ಬಗ್ಗೆ ಚಿತ್ರತಂಡ ತೀರ್ಮಾನಿಸುತ್ತಿದೆ ಎಂದು ವರದಿ ಆಗಿದೆ.

ಒಂದು ದಿನ ಮೊದಲೇ ನೋಡಬಹುದು RRR ಚಿತ್ರ; ರಾಜಮೌಳಿ ಟೀಮ್​ ಮಾಡಿರುವ ಪ್ಲ್ಯಾನ್ ಏನು?
ಆರ್​ಆರ್​ಆರ್ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on: Mar 09, 2022 | 8:57 AM

ಬಹುನಿರೀಕ್ಷಿತ ‘ಆರ್​ಆರ್​ಆರ್​’ (RRR) ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಮಾ.25ರಂದು ಈ ಸಿನಿಮಾ ವಿಶ್ವಾದ್ಯಂತ ಅದ್ದೂರಿಯಾಗಿ ತೆರೆ ಕಾಣಲಿದೆ. ಈಗಾಗಲೇ ದೇಶದ ಅನೇಕ ನಗರಗಳಿಗೆ ತೆರಳಿ ಚಿತ್ರತಂಡ ಪ್ರಚಾರ ಮಾಡಿದೆ. ರಾಜಮೌಳಿ (Rajamouli) ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ‘ಆರ್​ಆರ್​ಆರ್​’ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ಕೆಲವು ಪ್ರೇಕ್ಷಕರಿಗೆ ಒಂದು ದಿನ ಮುನ್ನವೇ ಈ ಸಿನಿಮಾವನ್ನು ನೋಡುವ ಅವಕಾಶ ಸಿಗಲಿದೆ. ಅದಕ್ಕಾಗಿ ವಿಶೇಷ ತಯಾರಿಯೂ ನಡೆದಿದೆ. ರಾಮ್​ ಚರಣ್​ (Ram Charan) ಹಾಗೂ ಜ್ಯೂ. ಎನ್​ಟಿಆರ್​ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಸಿನಿಮಾದಲ್ಲಿ ಆಲಿಯಾ ಭಟ್​ ನಾಯಕಿಯಾಗಿ ಅಭಿನಯಿಸಿದ್ದಾರೆ. ಬಾಲಿವುಡ್​ನ ಸ್ಟಾರ್​ ನಟ ಅಜಯ್​ ದೇವಗನ್​ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಅಭಿಮಾನಿಯೊಬ್ಬರು ವಿದೇಶದಲ್ಲಿ 75 ಟಿಕೆಟ್​ಗಳನ್ನು ಖರೀದಿಸಿದ್ದು ಇತ್ತೀಚೆಗೆ ಸುದ್ದಿ ಆಗಿತ್ತು. ಈಗ ‘ಆರ್​ಆರ್​ಆರ್​’ ಸಿನಿಮಾದ ಪ್ರೀಮಿಯರ್​ ಶೋ ಬಗ್ಗೆ ಮಾಹಿತಿ ಕೇಳಿಬಂದಿದೆ. ಹೇಗಾದರೂ ಮಾಡಿ ಎಲ್ಲರಿಗಿಂತ ಮುಂಚೆ ಈ ಸಿನಿಮಾವನ್ನು ನೋಡಬೇಕು ಎಂದು ಕಾದಿರುವ ಅಭಿಮಾನಿಗಳಿಗೆ ಈ ಸುದ್ದಿ ಖುಷಿ ನೀಡಿದೆ.

ಮಾ.25ರಂದು ‘ಆರ್​ಆರ್​ಆರ್​’ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಆದರೆ ಅದಕ್ಕಿಂತಲೂ ಒಂದು ದಿನ ಮುಂಚಿತವಾಗಿ ಪೇಯ್ಡ್​ ಪ್ರೀಮಿಯರ್​ ಪ್ರದರ್ಶನಗಳನ್ನು ಏರ್ಪಡಿಸುವ ಬಗ್ಗೆ ಚಿತ್ರತಂಡ ತೀರ್ಮಾನಿಸುತ್ತಿದೆ ಎಂದು ವರದಿ ಆಗಿದೆ. ಈ ಕುರಿತು ‘ಬಾಲಿವುಡ್​ ಲೈಫ್​’ ಸುದ್ದಿ ಪ್ರಕಟಿಸಿದೆ. ಮಾ.24ರ ಸಂಜೆ ಮತ್ತು ರಾತ್ರಿ ದೇಶದ ಅನೇಕ ಕಡೆಗಳಲ್ಲಿ ಪೇಯ್ಡ್​ ಪ್ರೀಮಿಯರ್​ ಶೋ ನಡೆಯಲಿದೆ. ಆ ಪ್ರದರ್ಶನಗಳ ಟಿಕೆಟ್​ ಪಡೆಯಲು ಈಗ ಫ್ಯಾನ್ಸ್​ ಕಾದಿದ್ದಾರೆ.

ವಿದೇಶಗಳಲ್ಲೂ ಈ ಸಿನಿಮಾ ನೋಡಲು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ. ಅಲ್ಲಿ ಈಗಾಗಲೇ ಮುಂಗಡ ಬುಕಿಂಗ್​ ಆರಂಭ ಆಗಿದೆ. ಜ್ಯೂ. ಎನ್​ಟಿಆರ್​ ಅವರಿಗೆ ವಿದೇಶದಲ್ಲೂ ಅಭಿಮಾನಿಗಳಿದ್ದಾರೆ. ಅಮೆರಿಕದಲ್ಲಿ ಇರುವ ಅಭಿಮಾನಿಯೊಬ್ಬರು ಬರೋಬ್ಬರಿ 75 ಟಿಕೆಟ್​ಗಳನ್ನು ಏಕಕಾಲಕ್ಕೆ ಖದೀರಿಸಿದ್ದಾರೆ. ಅದರ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಎಲ್ಲೆಡೆ ವೈರಲ್​ ಆಗುತ್ತಿದೆ. ‘ಆರ್​ಆರ್​ಆರ್​’ ಚಿತ್ರದ ಬಗ್ಗೆ ವಿದೇಶದಲ್ಲಿ ಎಷ್ಟರಮಟ್ಟಿಗೆ ಕ್ರೇಜ್​ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿ ಆಗಿದೆ. ಇಂಗ್ಲೆಂಡ್​, ಆಸ್ಟ್ರೇಲಿಯಾ ಮುಂತಾದ ಕಡೆಗಳಲ್ಲೂ ಬುಕಿಂಗ್​ ಶುರುವಾಗಿದೆ. ಎಲ್ಲೆಡೆ ಟಿಕೆಟ್​ ಸೋಲ್ಡ್​ ಔಟ್​ ಆಗುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಫ್ಲೋರಿಡಾದಲ್ಲಿ ಇರುವ ಕೆಲವು ಅಪ್ಪಟ ಅಭಿಮಾನಿಗಳು ಪ್ರೀಮಿಯರ್​ ಪ್ರದರ್ಶನದ ಒಂದು ಸ್ಕ್ರೀನ್​ನ ಎಲ್ಲ ಟಿಕೆಟ್​ಗಳನ್ನು ಖರೀದಿಸಿದ್ದಾರೆ ಎಂಬುದು ಕೂಡ ಸುದ್ದಿ ಆಗಿದೆ. ‘ಬಾಹುಬಲಿ’ ಚಿತ್ರದ ಭಾರಿ ಯಶಸ್ಸಿನ ಬಳಿಕ ರಾಜಮೌಳಿ ಅವರ ಬತ್ತಳಿಕೆಯಿಂದ ಬರುತ್ತಿರುವ ಸಿನಿಮಾ ಇದಾಗಿರುವುದರಿಂದ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಮತ್ತು ಟೀಸರ್​ಗಳನ್ನು ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಆಲಿಯಾ ಭಟ್​ ಮತ್ತು ಅಜಯ್​ ದೇವಗನ್​ ಅವರು ಈ ಸಿನಿಮಾದಲ್ಲಿ ನಟಿಸಿರುವುದರಿಂದ ಉತ್ತರ ಭಾರತದಲ್ಲಿ ಕ್ರೇಜ್​ ಹೆಚ್ಚಿದೆ. ಈ ಕಲಾವಿದರಿಬ್ಬರು ಅಭಿನಯಿಸಿರುವ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ವಿಶ್ವಾದ್ಯಂತ  ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ 100 ಕೋಟಿ ರೂಪಾಯಿಗೂ ಅಧಿಕ ಕಮಾಯಿ ಮಾಡಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ‘ಆರ್​ಆರ್​ಆರ್​’ ರಿಲೀಸ್​ ಆಗುತ್ತಿರುವುದರಿಂದ ಆಲಿಯಾ ಭಟ್​ ಮತ್ತು ಅಜಯ್​ ದೇವಗನ್​ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ:

ರಿಲೀಸ್​ಗೆ ಸಿದ್ಧವಿರುವ ‘ಆರ್​ಆರ್​ಆರ್​’ ಚಿತ್ರಕ್ಕೆ ಸಂಕಷ್ಟ; ಎದುರಾಗಲಿದೆ ಕಾನೂನಿನ ದೊಡ್ಡ ತೊಡಕು?

ಇಲ್ಲಿದೆ RRR ಚಿತ್ರದ ರಾಶಿ ರಾಶಿ ಟಿಕೆಟ್​; ತಿಂಗಳಿಗೂ ಮುನ್ನವೇ ಅಡ್ವಾನ್ಸ್​ ಬುಕಿಂಗ್​ಗೆ ಭರ್ಜರಿ ರೆಸ್ಪಾನ್ಸ್​

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ